ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಪೋಟ ಪ್ರಕರಣದ (Rameshwaram cafe blast) ನಾಲ್ವರು ಆರೋಪಿಗಳಾದ ಮಸಾವಿರ್ ಹುಸೇನ್ ಶಾಜೀಬ್, ಅಬ್ದುಲ್ ಮತೀನ್ ಅಹಮದ್ ತಾಹಾ, ಮಾಜ್ ಮುನೀರ್ ಅಹಮದ್ ಹಾಗೂ ಮುಜಾಮಿಲ್ ಷರೀಫ್ ವಿರುದ್ಧ ರಾಷ್ಟ್ರೀಯ ತನಿಖಾ ದಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada
ಜನವರಿ 22ರಂದು ಅಯೋಧ್ಯೆಯಲ್ಲಿ ನಡೆದ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ದಂದೇ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸ್ಪೋಟಿಸಲು ಯತ್ನಿಸಿ ವಿಫಲವಾಗಿದ್ದರು. ಬಳಿಕ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಿಸಿದ್ದರು ಎಂಬ ಅಂಶ ಚಾಜ್ ೯ಶೀಟ್‌ನಲ್ಲಿ ಬಹಿರಂಗವಾಗಿದೆ.
ಮುಸ್ಲಿಂ ಯುವಕರೇ ಐಸಿಸ್‌ನ ಟಾರ್ಗೆಟ್:
ಶಿವಮೊಗ್ಗ ಮೂಲದವರಾಗಿದ್ದ ಮಸಾವಿರ್ ಹುಸೇನ್ ಶಾಜೀಬ್, ಅಬ್ದುಲ್ ಮತೀನ್ ಅಹ ಮದ್ ತಾಹಾ ಐಸಿಸ್‌ನಿಂದ ಪ್ರೇರಿತರಾ ಗಿದ್ದು, ಮುಸ್ಲಿಂ ಯುವಕರನ್ನು ಐಸಿಸ್‌ನತ್ತ ಸೆಳೆಯುತ್ತಿ ದ್ದರು. ಪ್ರಕರಣದ ಇನ್ನಿಬ್ಬರು ಆರೋಪಿಗಳಾದ ಮಾಜ್ ಮುನೀರ್ ಅಹಮದ್ ಹಾಗೂ ಮುಜಾ ಮಿಲ್ ಷರೀಫ್‌ನನ್ನು ಸಹ ಅದೇ ರೀತಿ ಐಸಿಸ್‌ನ ವಿಚಾರಗಳೆಡೆಗೆ ಸೆಳೆಯ ಲಾಗಿತ್ತು.
ಆರೋಪಿಗಳು ಭಾರತದ ಸಿಮ್ ಕಾರ್ಡ್‌ಗಳು, ಭಾರತೀಯ ಬ್ಯಾಂಕ್ ಖಾತೆ ಹಾಗೂ ಡಾರ್ಕ್ ವೆಬ್ ಬಳಸಿ ಸೃಷ್ಟಿಸಿದ ಭಾರತ ಹಾಗೂ ಬಾಂಗ್ಲಾದೇಶದ ಗುರುತಿನ ಚೀಟಿಗಳನ್ನು ಹೊಂದಿದ್ದರು ಎಂದು ಚಾಜ್‌ಶೀಟ್‌ನಲ್ಲಿ ವಿವರಿಸಲಾಗಿದೆ.
ಏನಿದು ಪ್ರಕರಣ?
ಬೆಂಗಳೂರಿನ ಐಟಿಪಿಎಲ್ ರಸ್ತೆಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1ರಂದು ಐಇಡಿ ಬಳಸಿ ಸ್ಪೋಟಿಸಲಾಗಿತ್ತು. ಸ್ಪೋಟದ ತೀವ್ರತೆಗೆ ಗ್ರಾಹಕರು, ಕೆಫೆ ಸಿಬ್ಬಂದಿ ಸಹಿತ 9 ಜನರು ಗಾಯಗೊಂಡಿ ದ್ದರು. ಬಳಿಕ ಪ್ರಕರಣದ ತನಿಖೆ ಆರಂಭಿ ಸಿದ್ಧ ಎನ್‌ಐಎ, ಆರೋಪಿ ಮಸಾವಿರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮತೀನ್ ಅಹಮದ್ ತಾಹಾನ ಪಾತ್ರದ ಕುರಿತು ಮಾಹಿತಿ ಕಲೆ ಹಾಕಿತ್ತು.
ಇದನ್ನು ಓದಿ: ಮೂರು ಮಸೂದೆಗಳಿಗೆ ಅಂಕಿತ, ಇನ್ನೇರಡು ಬಾಕಿ
ಸ್ಫೋಟದ ಬಳಿಕ ನಾಪತ್ತೆಯಾಗಿದ್ದ ಆರೋಪಿಗಳನ್ನು ಬರೋಬ್ಬರಿ 42 ದಿನಗಳ ಬಳಿಕ ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿತ್ತು.