Those who have e-shram card are eligible for BPL card..

Ration card : ಪಡಿತರ ಚೀಟಿಯಲ್ಲಿ ನಿಮ್ಮ ಹೆಸರು ಇದೆಯೇ? ಇಲ್ಲವೇ? ಪರಿಶೀಲಿಸಿ..

Ration card : ಪಡಿತರ ಚೀಟಿಯಲ್ಲಿ ನಿಮ್ಮ ಹೆಸರು ಇದೆಯೇ? ಇಲ್ಲವೇ? ಪರಿಶೀಲಿಸಿ..

Ration card: ದೇಶದ ಬಡವರೂ ನೆಮ್ಮದಿಯಾಗಿ ಮೂರು ಹೊತ್ತು ಊಟ ಮಾಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೂ ಪಡಿತರ ವಿತರಿಸಿ ಕೋಟ್ಯಂತರ ಜನರಿಗೆ ಅನುಕೂಲ ಕಲ್ಪಿಸಿವೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಬಡತನ ರೇಖೆಗಿಂತ ಕೆಳಗಿನವರಿಗೆ ಬಿಪಿಎಲ್ ಪಡಿತರ ಚೀಟಿ ಮತ್ತು ಬಡತನ ರೇಖೆಗಿಂತ ಮೇಲಿನವರಿಗೆ ಎಪಿಎಲ್ ಪಡಿತರ ಚೀಟಿ. ಹೀಗೆ ಆರ್ಥಿಕವಾಗಿ ಹಿಂದುಳಿದವರಿಗೆ ಪಡಿತರ ಒದಗಿಸಲು ಕ್ರಮವಹಿಸಿದೆ.

ಬಿಪಿಎಲ್ ಕಾರ್ಡ್ ದಾರರಿಗೆ ಸರ್ಕಾರದಿಂದ ಹಲವು ಸವಲತ್ತುಗಳು ಸಿಗುತ್ತಿದ್ದು, ಉಚಿತ ಆಹಾರ ಧಾನ್ಯಗಳು, ಉಚಿತ ಆರೋಗ್ಯ ಸೇವೆ ಪ್ರಮುಖವಾಗಿವೆ‌. ಈ ಕಾರಣಕ್ಕಾಗಿ ಬಡವರು ಪಡಿತರ ಚೀಟಿ ಮಾಡಿಸಿ ಸರ್ಕಾರದ ಸವಲತ್ತು ಪಡೆಯಲು ಪ್ರಯತ್ನಿಸುತ್ತಾರೆ.

ಆದರೆ, ನಮ್ಮ ದೇಶದಲ್ಲಿ ಎಲ್ಲಾ ಅರ್ಹರು ಬಿಪಿಎಲ್ ಪಡಿತರ ಚೀಟಿ ಪಡೆಯುವುದಿಲ್ಲ. ಕೆಲವರು ತಪ್ಪು ಮಾಹಿತಿ ನೀಡಿ ಪಡಿತರ ಚೀಟಿ ಮಾಡಿಕೊಂಡಿದ್ದಾರೆ. ಪಡಿತರ ಚೀಟಿ ವಿತರಣೆಯಲ್ಲಿ ಆಗಿರುವ ಕೆಲವು ದೋಷಗಳಿಂದ ಕೆಲವೊಮ್ಮೆ ಕುಟುಂಬದ ಕೆಲವರ ಹೆಸರು ಪಡಿತರ ಚೀಟಿಯಲ್ಲಿ ನಾಪತ್ತೆಯಾಗುತ್ತಿದೆ. ಈ ಎಲ್ಲ ಕಾರಣಗಳಿಂದ ಅರ್ಹ ಫಲಾನುಭವಿಗಳಿಗೆ ಪಡಿತರ ಚೀಟಿ ಸಿಗದೆ ಸರಕಾರದ ಸೌಲಭ್ಯಗಳು ಸಿಗುತ್ತಿಲ್ಲ. ಈ ಕಾರಣಕ್ಕೆ ಪಡಿತರ ಚೀಟಿಯನ್ನು ಕಾಲಕಾಲಕ್ಕೆ ತಿದ್ದುಪಡಿ ಮಾಡಲು ಸರಕಾರ ಅನುಮತಿ ನೀಡುತ್ತದೆ.

ಕೆಲವರು ಪಡಿತರ ಚೀಟಿಗೆ ಹೆಸರು ಸೇರಿಸಲು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಇದೀಗ ಪಡಿತರ ಚೀಟಿಗೆ ಹೆಸರು ಸೇರ್ಪಡೆಯಾದವರ ಪಟ್ಟಿ ಬಿಡುಗಡೆಯಾಗಿದೆ.

ಈ ಪಟ್ಟಿಯನ್ನು ಪರಿಶೀಲಿಸಿ, ಅದರಲ್ಲಿ ನಿಮ್ಮ ಹೆಸರಿದೆಯೇ? ಅದರ ಬಗ್ಗೆ ನೀವು ತಿಳಿದುಕೊಳ್ಳಬಹುದು. ಕರ್ನಾಟಕ ಪಡಿತರ ಚೀಟಿ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಅದನ್ನು ಪರಿಶೀಲಿಸುವುದು ಹೇಗೆ ಎಂದು ತಿಳಿಯಿರಿ.

ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ ನೀಡಿದ ಆಹಾರ ಇಲಾಖೆ, ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದವರ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅರ್ಜಿ ಸಲ್ಲಿಸಿದವರು ಅಧಿಕಾರಿಗೆ ಭೇಟಿ ನೀಡಿ ನಿಮ್ಮ ಹೆಸರನ್ನು ಪರಿಶೀಲಿಸಬಹುದು.

ಕರ್ನಾಟಕ ಪಡಿತರ ಚೀಟಿ (Ration card) ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸಲು ನೀವು ಕೆಳಗಿನ ಸರಳ ಹಂತಗಳನ್ನು ಅನುಸರಿಸಬೇಕು:

– ಮೊದಲು, ಇಲ್ಲಿ ನೀಡಿರುವ ಅಧಿಕೃತ ವೆಬ್‌ಸೈಟ್ https://ahara.kar.nic.in/Home/EServices ಗೆ ಭೇಟಿ ನೀಡಿ
– ಮೆನು ಬಾರ್‌ನಿಂದ, “ಇ-ಸೇವೆಗಳು” ಟ್ಯಾಬ್ ಅನ್ನು ಕ್ಲಿಕ್ ಮಾಡಿ.
– “ಇ-ರೇಷನ್ ಕಾರ್ಡ್” ಲಿಂಕ್ ಅನ್ನು ಕ್ಲಿಕ್ ಮಾಡಿ.

  • ಗ್ರಾಮ ಪಟ್ಟಿ” ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
    – ಕೆಳಗಿನ ಮಾಹಿತಿಯನ್ನು ಆಯ್ಕೆಮಾಡಿ-
  • ಜಿಲ್ಲೆ
  • ತಾಲ್ಲೂಕು
  • ಗ್ರಾಮ ಪಂಚಾಯಿತಿ
  • ಗ್ರಾಮ
    – “ಹೋಗಿ” ಬಟನ್ ಕ್ಲಿಕ್ ಮಾಡಿ.
    – ಪಡಿತರ ಚೀಟಿದಾರರ ಪಟ್ಟಿಯನ್ನು ನಿಮ್ಮ ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.
  • ಇದನ್ನೂ ಓದಿ: Astrology: ಈ ರಾಶಿಯವರು ವಾಹನ ಚಾಲನೆ ವೇಳೆ ಎಚ್ಚರದಿಂದಿರಿ

Latest News

ಡಿ.22 ರಂದು ದಿನದರ್ಶಿಕೆ ಲೋಕಾರ್ಪಣೆ

ಡಿ.22 ರಂದು ದಿನದರ್ಶಿಕೆ ಲೋಕಾರ್ಪಣೆ

ಮುದ್ದೇಬಿಹಾಳ : ಪ್ರಜಾನಾಡು ಡಿಜಿಟಲ್ ಸುದ್ದಿವಾಹಿನಿಯ ದಿನದರ್ಶಿಕೆ ಲೋಕಾರ್ಪಣೆ ಕಾರ್ಯಕ್ರಮ ಡಿ.22 ರಂದು ಸಂಜೆ

ಅಂಗವೈಕಲ್ಯ ತಡೆಗೆ ಪೊಲೀಯೋ ಲಸಿಕೆ ಹಾಕಿಸಿ

ಅಂಗವೈಕಲ್ಯ ತಡೆಗೆ ಪೊಲೀಯೋ ಲಸಿಕೆ ಹಾಕಿಸಿ

ಮುದ್ದೇಬಿಹಾಳ : ಮಕ್ಕಳು ಹುಟ್ಟಿನಿಂದಲೇ ಅಂಗವೈಕಲ್ಯತೆ ಹೊಂದುವುದನ್ನು ತಪ್ಪಿಸಲು ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ

T20 World Cup 2026 ಏಳು ಆಟಗಾರರು ಔಟ್!

T20 World Cup 2026 ಏಳು ಆಟಗಾರರು ಔಟ್!

T20 World Cup 2026: ಟಿ20 ವಿಶ್ವಕಪ್​​ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ

Good News: Gruha Lakshmi ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವೆ Lakshmi Hebbalkar ​​

Good News: Gruha Lakshmi ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವೆ Lakshmi Hebbalkar ​​

ಬೆಳಗಾವಿ: ಗೃಹಲಕ್ಷ್ಮೀ ಯೋಜನೆಯ (Gruha Lakshmi) ಹಣ ಬಿಡುಗಡೆ ವಿಚಾರವಾಗಿ ಇತ್ತೀಚೆಗೆ ಅಧಿವೇಶನದಲ್ಲಿ ಚರ್ಚೆಗೆ

Shocking News: ಬಿಸಿನೀರಿನ ಪಾತ್ರೆಗೆ ಬಿದ್ದು 2 ವರ್ಷದ ಪುಟಾಣಿ ದುರ್ಮರಣ

Shocking News: ಬಿಸಿನೀರಿನ ಪಾತ್ರೆಗೆ ಬಿದ್ದು 2 ವರ್ಷದ ಪುಟಾಣಿ ದುರ್ಮರಣ

ಮೈಸೂರು: ರಾಜ್ಯದಲ್ಲಿ ಘೋರ ದುರಂತ ಎನ್ನುವಂತೆ ಬಿಸಿನೀರಿನ ಪಾತ್ರೆಗೆ ಬಿದ್ದು ಎರಡು ವರ್ಷದ ಮಗು ಧಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಮೈಸೂರಲ್ಲಿ ಸಂಭವಿಸಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಜಯಗಿರಿ ಹಾಡಿಯಲ್ಲಿ ಈ ದುರಂತ ಸಂಭವಿಸಿದೆ. ರಮ್ಯಾ ಮತ್ತು ಬಸಪ್ಪ ಎಂಬುವರ ದಂಪತಿಗಳ ಪುತ್ರಿ ವೇದಾ(2) ಬಿಸಿ ನೀರಿನ ಪಾತ್ರೆಗೆ ಬಿದ್ದು ಸಾವನ್ನಪ್ಪಿದ್ದಾಳೆ. ತಾಯಿ ಸ್ನಾನ ಮಾಡಿಸೋದಕ್ಕೆ ಬಿಸಿ ನೀರು ತೋಡಿ, ತಣ್ಣೀರು ಬೆರೆಸೋದಕ್ಕೆ ತರಲು ಹೋಗಿದ್ದಾರೆ. ಈ ವೇಳೆ ವೇದಾ

ಡಿ.21 ರಂದು ರಾಷ್ಟೀಯ ಪಲ್ಸ್ ಪೋಲಿಯೋ : ವಿದ್ಯಾರ್ಥಿಗಳಿಂದ ಜಾಥಾ

ಡಿ.21 ರಂದು ರಾಷ್ಟೀಯ ಪಲ್ಸ್ ಪೋಲಿಯೋ : ವಿದ್ಯಾರ್ಥಿಗಳಿಂದ ಜಾಥಾ

ಮುದ್ದೇಬಿಹಾಳ : ಪ್ರಾಥಮಿಕ ಆರೋಗ್ಯ ಕೇಂದ್ರ ಗರಸಂಗಿ ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗರಸಂಗಿ ಸಂಯುಕ್ತಾಶ್ರಯದಲ್ಲಿ ರಾಷ್ಟಿçÃಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದಂಗವಾಗಿ ಶನಿವಾರ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಸಲಾಯಿತು. ಆರೋಗ್ಯ ಇಲಾಖೆಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಗೌಡರ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, "ಪೋಲಿಯೋ ಮಾರಕ ರೋಗವಾಗಿದ್ದು, ಐದು ವರ್ಷದೊಳಗಿನ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತರಾಗದAತೆ ನೋಡಿಕೊಳ್ಳಬೇಕು ಎಂದರು. ಆರೋಗ್ಯ ಇಲಾಖೆ ಸಿಬ್ಬಂದಿಗಳು ಆಶಾ ಕಾರ್ಯಕರ್ತೆಯರು ಹಾಗೂ