Karnataka state budget cm siddaramaiah

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ.

ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500 ರೂ.ಗಳಿಗೆ ಅನುಗುಣವಾಗಿ, ಸಂಬಳ ಅಥವಾ ಮಜೂರಿ ಪಡೆಯುವ ವ್ಯಕ್ತಿಗಳು ಫೆಬ್ರವರಿ ತಿಂಗಳಲ್ಲಿ ಪಾವತಿಸುತ್ತಿರುವ ವೃತ್ತಿ ತೆರಿಗೆಯನ್ನು ಪ್ರಸ್ತುತ 200 ರೂ.ಗಳಿಂದ 300 ರೂ.ಗಳಿಗೆ ಹೆಚ್ಚಿಸಲು ಸೂಕ್ತ ತಿದ್ದುಪಡಿ ಮಾಡುತ್ತಿರುವುದು ನಿರಾಶಾದಾಯಕವಾಗಿದೆ ಎಂದು ತಿಳಿಸಿದ್ದಾರೆ.

ಬಾರ್ ಅಸೋಸಿಯೇಷನ್ ಸದಸ್ಯರಿಗೆ ಚಂದಾದಾರಿಕೆಯೊಂದಿಗೆ ಕಾಯಿದೆ/ ನಿಯಮಗಳು / ಕಾನೂನು ಪುಸ್ತಕಗಳು ಸುಲಭವಾಗಿ ದೊರಕುವಂತೆ ಮಾಡಲು ಅಡ್ವಕೇಟ್ ಜನರಲ್ ಕಛೇರಿ ಸಹಯೋಗದೊಂದಿಗೆ ಆನ್‌ಲೈನ್ ಗ್ರಂಥಾಲಯವನ್ನು 50 ಲಕ್ಷ ರೂ. ವೆಚ್ಚದಲ್ಲಿ ಸ್ಥಾಪಿಸುತ್ತಿರುವುದು ಕಾನೂನು ವಿದ್ಯಾರ್ಥಿಗಳಿಗೆ ಅಭ್ಯಾವೇಶನ ಮಾಡುವರಿಗೆ ಸ್ಪೂರ್ತಿದಾಯಕ ವಿಷಯವಾಗಿದೆ ಎಂದು ತಿಳಿಸಿದ್ದಾರೆ.

ಬಂದೋಬಸ್ತ ಗೆ ನಿಯೋಜಿಸುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರಸ್ತುತ ಚಾಲ್ತಿಯಲ್ಲಿರುವ ಆಹಾರ ಭತ್ಯೆಯ ದರವನ್ನು 200 ರೂ. ರಿಂದ 500 ರೂ.ವರೆಗೆ ಹೆಚ್ಚಿಸಬಹುದೆಂಬ ನಿರೀಕ್ಷೆ ಹುಸಿಯಾಗಿದೆ.ಅಲ್ಲದೇ
ಹೂಗಾರ ಸಮಾಜ ನಿಗಮದ ಬಗ್ಗೆ ಯಾವುದೇ ಕಾಳಜಿಯನ್ನು ಮತ್ತು ಅಭಿವೃದ್ಧಿಯನ್ನು ಈ ಬಜೆಟ್ ನಲ್ಲಿ ನೀಡಿರುವುದಿಲ್ಲ.ತೆರಿಗೆ ಸಲಹೆಗಾರರ ಪ್ರೋತ್ಸಾಹಕ್ಕೆ ಯಾವುದೇ ಅನುದಾನದ ಬಗ್ಗೆ ಅಭಿವೃದ್ಧಿಯ ಬಗ್ಗೆ ಪ್ರಸ್ತಾವನೆ ನೀಡಿರುವುದಿಲ್ಲ ಎಂದು ತಿಳಿಸಿದ್ದಾರೆ.

ದೇವಾಲಯಗಳ ನಿಧಿಯಿಂದ ಭರಿಸಲಾಗುತ್ತಿರುವ ದತ್ತಿ ಇಲಾಖೆಯ ಸರಕಾರಿ ನೌಕರರ ಭತ್ಯೆಗಳನ್ನು ಇವಾಗ ಸರ್ಕಾರವೇ ಪಾವತಿಸಲು ಮುಂದಾಗುತ್ತಿರುವುದು ಒಳ್ಳೆಯ ಅಭಿವೃದ್ಧಿ ಸಂಗತಿ ಎಂದು ತಿಳಿಸಿದ್ದಾರೆ.

Latest News

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ನೂತನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು, ಜೂನ್‌ 26: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ವಿವಿಧ ಕಾರ್ಖಾನೆಗಳು ಹಾಗೂ ಮನೆ ಕೆಲಸದ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಕಾರ್ಮಿಕರ ಸಮಸ್ಯೆ ಚರ್ಚೆ:ಕರ್ನಾಟಕ ಜನರಲ್ ಲೇಬರ್ ಯೂನಿಯನ್ ಬೆಂಗಳೂರು ಇವರ ಮನವಿ ಮೇರೆಗೆ ಮೆ. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಲಿಮಿಟೆಡ್.. ಕಾರ್ಮಿಕರ ಸಮಸ್ಯೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಮುದ್ದೇಬಿಹಾಳ : ಜೂ.27 ರಿಂದ ಮೊಹರಂ ಹಬ್ಬದ ಆಚರಣೆ ಆರಂಭಗೊಳ್ಳಲಿದ್ದು ಶಾಂತಿಯುತವಾಗಿ ಆಚರಿಸುವಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮೊಹರಂ ಶಾಂತಿಸಭೆಯಲ್ಲಿ ಅವರು ಮಾತನಾಡಿದರು. ಜೂ.27 ರಂದು ಮೊಹರಂ ಹಬ್ಬದ ಆಚರಣೆ ಆರಂಭಗೊಂಡು 29 ರಂದು ದಫನ್ ಮಾಡಲಾಗುತ್ತದೆ. ಈ ಸಮಯದಲ್ಲಿ ಅಲಾಯ್ ದೇವರುಗಳನ್ನು ಪ್ರತಿಷ್ಠಾಪಿಸುವ ಸಮಿತಿಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಮೊಹರಂ ಹಬ್ಬ ಭಾವೈಕ್ಯತೆಯ ಸಂಕೇತವಾಗಿದ್ದು ಉಭಯ