ನಾರಾಯಣಾಪುರ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ (PAN-INDIA Rescue and Rehabilitation Campaign) ಬಾಲ/ಕಿಶೋರ ಕಾರ್ಮಿಕರ ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ ನಡೆಸಲಾಯಿತು.
Join Our telegram: https://t.me/dcgkannada
ಈ ಕುರಿತು ನಗರದಲ್ಲಿ ಆಯೋಜಿಸಿದ್ದ ಅಭಿಯಾನದಲ್ಲಿ ಮಾತನಾಡಿದ ಉಪ ತಹಶೀಲ್ದಾರ್ ಕಲ್ಲಪ್ಪ ಅವರು, ಸರಕಾರದ ಪ್ರತಿಯೊಂದು ಇಲಾಖೆಯು ಕೈಜೊಡಿಸಿದಾಗ ಮಾತ್ರ ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಎಂಬ ಅನಿಷ್ಠ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸಾಧ್ಯ ಎಂದು ತಿಳಿಸಿದರು.
ನಂತರ ಮಾತನಾಡಿದ ಕಾರ್ಮಿಕ ನಿರೀಕ್ಷಕ ಶಿವರಾಜ್ ಜಮಾದಾರ್, ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಪ್ರತಿ ತಿಂಗಳು 15 ತಪಾಸಣೆ ಮತ್ತು ಹಠಾತ್ ದಾಳಿ/ತಪಾಸಣೆ ಆಯೋಜಿಸಿವುದು. ಮತ್ತು ಪ್ರತಿ ತಿಂಗಳು 2 ಕಾನೂನು ಅರಿವು-ನೆರವು ಮತ್ತು ಜನ-ಜಾಗೃತಿ ಕಾರ್ಯಕ್ರಮ ಆಯೋಜಿಸುವುದು. ಶಾಲೆ ಬಿಟ್ಟು ಕೃಷಿ ಮತ್ತು ಇತರೆ ಕೆಲಸಗಳಿಗೆ ಮಕ್ಕಳು ಹೋಗದಂತೆ ಶಾಲಾ ಶಿಕ್ಷಕರಿಂದ ಪಾಲಕ ಪೋಷಕರಿಗೆ ಜಾಗೃತಿ ಮೂಡಿಸಬೇಕು. ಬಾಲಕಾರ್ಮಿಕ ಪದ್ಧತಿ ತಡೆಗಟ್ಟಲು ಇಲಾಖೆಯಿಂದ ನಿರಂತರವಾಗಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಇದನ್ನೂ ಓದಿ: Sexual Abuse: ಇಬ್ಬರು ಹುಡಿಗೀಯರ ಜೊತೆಗೆ ಪತಿ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ! (ವಿಡಿಯೋ ನೋಡಿ)
ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರ ರಿಯಾಜ್ ಪಟೇಲ್ ವರ್ಕನಳ್ಳಿ ಮಾತನಾಡಿ, ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಬೇಕೆಂದು ಕಾರ್ಮಿಕ ಇಲಾಖೆಯಿಂದ ನಿಯಂತ್ರಣವಾಗಿ ಜನ-ಜಾಗೃತಿ, ಕಾನೂನು ಅರಿವು-ನೆರವು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಇದನ್ನು ಮೀರಿಯೂ ಸಹ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಲ್ಲಿ ಅಂತಹ ಅಂಗಡಿ ಮಾಲೀಕರಿಗೆ ರೂ. 20,000 ರೂಗಳಿಂದ 50,000 ರೂ. ಗಳವರೆಗೆ ದಂಡ ಮತ್ತು 6 ತಿಂಗಳುಗಳಿಂದ 2 ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನು ಸಹ ವಿಧಿಸಲಾಗುವುದು ಎಂದು ತಿಳಿಸಿದರು.
ಪಟ್ಟಣದ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಹಠಾತ್ ದಾಳಿ/ತಪಾಸಣೆ ನಡೆಸಿ ಒಂದು ಮಗುವನ್ನು ಬಾಲ ಕಾರ್ಮಿಕ ಪದ್ಧತಿಯಿಂದ ರಕ್ಷಿಸಲಾಯಿತು.