‘ಕಾಲುವೆಗೆ ನೀರು ಬಿಡಿ,ಇಲ್ಲವೇ ಸಾಯಲು ವಿಷ ಕೊಡಿ’

‘ಕಾಲುವೆಗೆ ನೀರು ಬಿಡಿ,ಇಲ್ಲವೇ ಸಾಯಲು ವಿಷ ಕೊಡಿ’

ಮುದ್ದೇಬಿಹಾಳ : ಬರಗಾಲ ಬಿದ್ದಿದೆ.ಹೊಲದಲ್ಲಿ ಬಿತ್ತಿರುವ ಬೆಳೆಗಳು ಒಣಗಿ ಹೋಗುತ್ತಿವೆ.ದನ-ಕರುಗಳಿಗೆ ಕುಡಿಯಲು ನೀರಿಲ್ಲ. ಹೊಲಕ್ಕೆ ಹೋದಾಗ ಒಣಗಿದ ಬೆಳೆಗಳನ್ನು ನೋಡಿದರೆ ಕಣ್ಣೀರು ಬರುತ್ತದೆ. ಅಧಿಕಾರಿಗಳು ಕಾಲುವೆಗೆ ನೀರು ಬಿಡಿ ಎಂದರೆ ತಯಾರಿಲ್ಲ.ಹೀಗೆ ಬದುಕುವ ಬದಲು ಸಾಯಲು ಅಧಿಕಾರಿಗಳೇ ವಿಷ ಕೊಡಿ ಎಂದು ರೈತ ಸಿದ್ದಪ್ಪ ಮಾದರ ಕೆಬಿಜೆಎನ್‌ಎಲ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಕೃಷ್ಣಾ ಭಾಗ್ಯ ಜಲ ನಿಗಮದ ಎ.ಎಲ್.ಬಿ.ಸಿ. ಉಪ ವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಗೆ ಬುಧವಾರ ಆಗಮಿಸಿದ್ದ ತಾಲ್ಲೂಕಿನ ಚವನಭಾವಿ ಗ್ರಾಮದ ರೈತರು,ಇಲಾಖೆಯ ಎಂಜಿನಿಯರ್‌ಗಳಾದ ಬಿ.ಎಂ. ಸಾತಿಹಾಳ ಹಾಗೂ ಎಸ್.ಕೆ. ದೊಡಮನಿ ಅವರಿಗೆ ಮನವಿ ಸಲ್ಲಿಸಿದರು.

ಅಲಮಟ್ಟಿ ಜಲಾಶಯದ ಚಿಮ್ಮಲಗಿ ಎ.ಎಲ್.ಬಿ.ಸಿ. ಎಡದಂಡೆ ಕಾಲುವೆಯ ಡಿಸ್ಟ್ರಿಬ್ಯೂಟರ್-40ನೇ ಕಾಲುವೆಗೆ ಸಮರ್ಪಕವಾಗಿ ನೀರು ಹರಿಯುತ್ತಿಲ್ಲ ಎಂಬ ಸಮಸ್ಯೆಯನ್ನು ಸಂಬAಧಪಟ್ಟ ಅಧಿಕಾರಿಗಳ ಗಮನಕ್ಕೆ ಹಲವು ಬಾರಿ ತಂದಿದ್ದರೂ ಶಾಶ್ವತ ಪರಿಹಾರ ದೊರೆತಿಲ್ಲ.ಮಾಧ್ಯಮಗಳಲ್ಲಿ ವರದಿ ಆದರೂ ಗಣನೆಗೆ ತೆಗೆದುಕೊಳ್ಳದೇ ನಿರ್ಲಕ್ಷö್ಯ ವಹಿಸಿದ್ದಾರೆ.

ನೀರಿಲ್ಲದೆ ಬೆಳೆಗಳು ಒಣಗಿ ಹೋಗಿದ್ದು, ಸಾಲದ ಹೊರೆ ಹೆಚ್ಚಾಗಿ ರೈತರು ಕಣ್ಣೀರಿನಲ್ಲಿ ದಿನ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಎ.ಎಲ್.ಬಿ.ಸಿ. ಕಾಲುವೆ ಮೂಲಕ ರೈತರ ಜಮೀನುಗಳಿಗೆ ನೀರು ಹರಿಸಿ ಬೆಳೆಗಳನ್ನು ಉಳಿಸುವ ಜತೆಗೆ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಿದರು.

ನೀರು ಹರಿಯುವ ಸಂದರ್ಭದಲ್ಲಿ ಟೇಲ್ ಎಂಡ್‌ಗೆ ತೆರಳಿ ಫೋಟೋ ತೆಗೆದು ಕಾಲುವೆಯಲ್ಲಿ ನೀರು ಹರಿಯುತ್ತಿದೆ ಎಂಬ ದಾಖಲೆ ಸೃಷ್ಟಿಸುವ ಬದಲು, ನಿಜವಾದ ನೀರಾವರಿ ಅವಧಿಯಲ್ಲಿ ಡ್ಯಾಂನಿAದ ಬಿಡುವ ನೀರು ಟೇಲ್ ಎಂಡ್‌ವರೆಗೆ ಸಮರ್ಪಕವಾಗಿ ತಲುಪುತ್ತಿದೆಯೇ ಎಂಬುದನ್ನು ಸ್ಥಳದಲ್ಲೇ ಅಳತೆ ಮಾಡಿ ದಾಖಲಿಸಬೇಕು ಎಂದು ರೈತರು ಒತ್ತಾಯಿಸಿದರು.

. ಕಾಲುವೆಯಲ್ಲಿನ ಹೂಳು, ಕಳೆ, ಅಡಚಣೆ, ಸೋರಿಕೆ, ಒಡೆತ ಹಾಗೂ ತಾಂತ್ರಿಕ ಸಮಸ್ಯೆಗಳನ್ನು ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಸ್ಥಳ ಪರಿಶೀಲನಾ ವರದಿ ಹಾಗೂ ಪಂಚನಾಮೆ ಸಿದ್ಧಪಡಿಸಿ ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಿದ್ದಪ್ಪ ಗುರಿಕಾರ, ಮಲ್ಲಪ್ಪ ಮಾಲಿನ, ಹುಲಪ್ಪ ಗುಂಡಕರಜಗಿ, ಯಮನಪ್ಪ ಬಿರಾದಾರ, ಸಂಗಪ್ಪ ಬಿರಾದಾರ, ಮೌನೇಶ ಬಿರಾದಾರ, ಸಿದ್ದಪ್ಪ ಮದರಿ, ದೇವಪ್ಪ ಜಂಗಡಭಾವಿ, ಸಿದ್ದಪ್ಪ ವಾಲಿಕಾರ, ಹಣಮಂತ ಗೋಗಿ, ಜಕ್ಕಪ್ಪ ನಾಲತವಾಡ ಸೇರಿದಂತೆ ಚವನಬಾವಿ ಗ್ರಾಮದ ರೈತರು ಉಪಸ್ಥಿತರಿದ್ದರು.

Latest News

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಗದಗ: ನಗರದ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಯುವ ಮೋರ್ಚಾ ವತಿಯಿಂದ

ನನಗೆ ಸಚಿವ ಸ್ಥಾನ ಕೈ ತಪ್ಪಲು ಸಚಿವ ಎಂ.ಬಿ.ಪಾಟೀಲ್ ನೇರ ಕಾರಣ-ಸಿ.ಎಸ್.ನಾಡಗೌಡ

ನನಗೆ ಸಚಿವ ಸ್ಥಾನ ಕೈ ತಪ್ಪಲು ಸಚಿವ ಎಂ.ಬಿ.ಪಾಟೀಲ್ ನೇರ ಕಾರಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಜಿಲ್ಲೆಯ ರಾಜಕಾರಣದಲ್ಲಿ ಸಾಸನೂರ ಬಿ.ಎಸ್.ಪಾಟೀಲ,ಪ್ರಕಾಶ ರಾಠೋಡ ,ಶರಣಪ್ಪ ಸುಣಗಾರ,ಮನೋಹರ ಐನಾಪೂರ ಅವರನ್ನು

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಮುದ್ದೇಬಿಹಾಳ : ಮಹತ್ವದ ಬೆಳವಣಿಗೆಯೊಂದರಲ್ಲಿ ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ತಿರಸ್ಕಾರಗೊಂಡಿದ್ದ ನಾಲ್ವರ ನಾಮಪತ್ರಗಳನ್ನು ಕ್ರಮಬದ್ಧಗೊಳಿಸಿ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸುವಂತೆ ಕಲ್ಬುರ್ಗಿ ಉಚ್ಛ ನ್ಯಾಯಾಲಯ ಮಧ್ಯಂತರ ಆದೇಶ ನೀಡಿರುವ ಬೆಳವಣಿಗೆ ಮಂಗಳವಾರ ಜರುಗಿದೆ. ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತ ವಿವರಣೆ ನೀಡಿದ ಮುಖಂಡ ಹಾಗೂ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅಬ್ದುಲಗಫೂರ ಮಕಾನದಾರ ಅವರು, ಚುನಾವಣಾಧಿಕಾರಿಗಳು ನಮ್ಮ ನಾಮಪತ್ರಗಳನ್ನು ತಿರಸ್ಕರಿಸಿ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿ

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಸಮೀತಿ ರಚನೆಯಲ್ಲಿ ಅಕ್ರಮ ನಡೆದಿದ್ದು ತನಿಖೆ ನಡೆಸಿ ನಿಯಮಾನುಸಾರ ಸಮೀತಿಯನ್ನು ಮರು ರಚಿಸಬೇಕು ಎಂದು ಆಗ್ರಹಿಸಿ ಗ್ರಾಮದ ಯುವಕರು,ಕೆಲ ಮುಖಂಡರು ಬಿಇಓಗೆ ಸೋಮವಾರ ಮನವಿ ಪತ್ರ ಸಲ್ಲಿಸಿದ್ದಾರೆ. ಪಟ್ಟಣದ ಬಿಇಓ ಕಚೇರಿಗೆ ಆಗಮಿಸಿದ್ದ ಗ್ರಾಮದ ಯುವಕರು,ಮುಖಂಡರು ಬಿಇಓ ಬಿ.ಎಸ್.ಸಾವಳಗಿ ಅವರಿಗೆ ಮನವಿ ಸಲ್ಲಿಸಿದರು.ಈ ಕುರಿತು ಸಲ್ಲಿಸಿದ ಮನವಿಯಲ್ಲಿ, ಕುಂಟೋಜಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ