ವಿಶೇಷ ವರದಿ-ಶಂಕರ ಹೆಬ್ಬಾಳ
ಮುದ್ದೇಬಿಹಾಳ : ತೀವ್ರ ಕುತೂಹಲ ಕೆರಳಿಸಿದ್ದ ಮುದ್ದೇಬಿಹಾಳ ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಕೃಷಿ ಇಲಾಖೆಯ ಅಧಿಕಾರಿ ಅರವಿಂದ ಹೂಗಾರ ಅವಿರೋಧ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029 ನೇ ಅವಧಿಗೆ ಮುದ್ದೇಬಿಹಾಳ ತಾಲೂಕಿನ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಆರೋಗ್ಯ ಇಲಾಖೆಯಿಂದ ಆನಂದಗೌಡ ಬಿರಾದಾರ, ಕೃಷಿ ಇಲಾಖೆಯಿಂದ ಅರವಿಂದ ಹೂಗಾರ ಹಾಗೂ ಶಿಕ್ಷಣ ಇಲಾಖೆಯಿಂದ ಬಸನಗೌಡ ಮುದ್ನೂರ ನಾಮಪತ್ರ ಸಲ್ಲಿಸಿದ್ದರು.
ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳಲು ಸೋಮವಾರ ಸಂಜೆಯವರೆಗೂ ನಡೆದ ಪ್ರಕ್ರಿಯೆಯಲ್ಲಿ ಪ್ರಬಲ ಆಕಾಂಕ್ಷಿಯಾಗಿದ್ದ ಬಸನಗೌಡ ಮುದ್ನೂರ ಹಾಗೂ ಆನಂದಗೌಡ ಬಿರಾದಾರ ಅವರಿಬ್ಬರು ಹೂಗಾರ ಅವರನ್ನು ಬೆಂಬಲಿಸಿ ತಮ್ಮ ನಾಮಪತ್ರಗಳನ್ನು ಹಿಂದಕ್ಕೆ ಪಡೆದ ಕಾರಣ ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾಧಿಕಾರಿ ಎಸ್.ಆರ್.ಕಟ್ಟೀಮನಿ ತಿಳಿಸಿದರು.
ಸಹಾಯಕರಾಗಿ ಭೀಮಸಿ ಹೂಗಾರ ಕಾರ್ಯನಿರ್ವಹಿಸಿದರು.
ನೂತನ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಅರವಿಂದ ಹೂಗಾರ ಅವರನ್ನು ಆರೋಗ್ಯ ಇಲಾಖೆಯ ನೌಕರರು ಅಭಿನಂದಿಸಿದರು.
—
ಸಂಘಟನಾ ಚತುರರು, ಸದ್ದಿಲ್ಲದೇ ನೌಕರರ ಹಿತ ಬಯುಸುವವರು :
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ತಾಲ್ಲೂಕು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಅರವಿಂದ ಹೂಗಾರ ಸಂಘಟನಾ ಚತುರರು.ಸರಳ ಜೀವಿಗಳು ಮೃದು ಸ್ವಭಾವದವರು.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಬ್ಯಾಂಕ್ ನ ಅಧ್ಯಕ್ಷರಾಗಿ, ಹಾಲಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಿಶೇಷ ಎಂದರೆ ಹಾಲಿ ಶಾಸಕ ಅಪ್ಪಾಜಿ ನಾಡಗೌಡರ ಆಪ್ತರಾಗಿ, ಸಚಿವ ಎಚ್.ಕೆ.ಪಾಟೀಲ್ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ. ಇದೀಗ ಹೂಗಾರ ಅವರಿಗೆ ತಾಲ್ಲೂಕು ನೌಕರರ ಸಂಘದ ಅಧ್ಯಕ್ಷ ಸ್ಥಾನ ಅನಾಯಾಸವಾಗಿ ಲಭಿಸಿರುವುದು ಅವರ ಸಂಘಟನಾ ಚಾತುರ್ಯಕ್ಕೆ ದೊರೆತ ಮನ್ನಣೆ ಎಂದೇ ವಿಶ್ಲೇಷಿಸಲಾಗುತ್ತಿದೆ.
—
ಕೃಷಿ ಇಲಾಖೆಯ ಹಿಂದಿನ ಅಧಿಕಾರಿ ಎಸ್.ಆರ್.ಕಟ್ಟೀಮನಿ ಕಳೆದ 4 ಅವಧಿಯಲ್ಲಿ ತಾಲ್ಲೂಕು ಅಧ್ಯಕ್ಷ ಸ್ಥಾನ ಅಲಂಕರಿಸಿದ್ದರು.ಇದೀಗ ಹೂಗಾರ ಅವರೂ ಅದೇ ಇಲಾಖೆಯಿಂದ ಬಂದಿದ್ದು ಅಧ್ಯಕ್ಷ ಸ್ಥಾನ ಕೃಷಿ ಇಲಾಖೆಯಲ್ಲಿ ಉಳಿದಂತಾಗಿದೆ.
ಕೃಷಿ ಇಲಾಖೆಯಲ್ಲೇ ಉಳಿದ ಅಧ್ಯಕ್ಷ ಸ್ಥಾನ: ಅರವಿಂದ ಹೂಗಾರ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಅವಿರೋಧ ಆಯ್ಕೆ .
ಕೃಷಿ ಇಲಾಖೆಯಲ್ಲೇ ಉಳಿದ ಅಧ್ಯಕ್ಷ ಸ್ಥಾನ: ಅರವಿಂದ ಹೂಗಾರ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಅವಿರೋಧ ಆಯ್ಕೆ .
Latest News
ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ
ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು
ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ
ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ
ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ
ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2025-26ನೇ ಸಾಲಿನ ಮಾರ್ಚ ಅಂತ್ಯಕ್ಕೆ ನಮ್ಮ ಸಂಘವು
ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ
ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ
ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ
ಮುದ್ದೇಬಿಹಾಳ : ಬರಪರಿಸ್ಥಿತಿ,ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಚರ್ಚೆ ನಡೆಸಲು ಸೆ.9 ರಂದು ಬೆಳಗ್ಗೆ 9 ಕ್ಕೆ ಪಟ್ಟಣದ ಪ್ರವಾಸಿ ಮಂದಿರದ ಸಭಾಭವನದಲ್ಲಿ ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷರು, ಶಾಸಕ ಸಿ.ಎಸ್.ನಾಡಗೌಡ ಅಧ್ಯಕ್ಷತೆಯಲ್ಲಿ ಟಾಸ್ಕಫೋರ್ಸ್ ಸಭೆ ನಿಗದಿಪಡಿಸಲಾಗಿದೆ. ಟಾಸ್ಕಫರ‍್ಸ್ ಸಭೆಗೆ ಎಲ್ಲ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಜರಾಗುವಂತೆ ತಹಶೀಲ್ದಾರ್‌ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ಷೇತ್ರದ ಅವಳಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳು ಎಂದು ಘೋಷಣೆ ಮಾಡುವಂತೆ ಮಾಜಿ ಶಾಸಕ ಎ.ಎಸ್.ಪಾಟೀಲ
ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ
ಮುದ್ದೇಬಿಹಾಳ : ಮತಕ್ಷೇತ್ರದ ರೈತರಿಂದ ಆಯ್ಕೆಯಾಗಿರುವ ನೀವು ಅವರ ಬದುಕಿಗೆ ಸಂಕಷ್ಟ ಎದುರಾದಾಗ ಸ್ಪಂದಿಸುವ ಕೆಲಸ ಮಾಡಬೇಕು.ಅದು ಬಿಟ್ಟು ಮೂವ್ವತ್ತು ವರ್ಷಗಳಿಂದ ಹಸಿ ಸುಳ್ಳುಗಳನ್ನೇ ಹೇಳುತ್ತಾ ರಾಜಕಾರಣ ಮಾಡಿಕೊಂಡು ಬಂದಿದ್ದೀರಿ.ಜನ ಇನ್ನು ಮುಂದೆ ನಿಮ್ಮನ್ನು ನಂಬುವುದಿಲ್ಲ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ಬರ ಘೋಷಣೆಗೆ ಆಗ್ರಹಿಸಿ ನಡೆದಿರುವ ಬಿಜೆಪಿಯ ಎರಡನೇ ದಿನದ ಧರಣಿ ಸತ್ಯಾಗ್ರಹವನ್ನುದ್ದೇಶಿಸಿ ಅವರು







