Request for new bus service from Kalaburagi to Vijayapura at night

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ನಾರಾಯಣಪುರ: ನಾರಾಯಣಪುರ ಮಾರ್ಗವಾಗಿ ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹಾಗೂ ಕೊಡೇಕಲ್ ಮಾರ್ಗವಾಗಿ ತಾಳಿಕೋಟಿಗೆ ಹೊಸ ಬಸ್ ಸಂಚಾರ ಶನಿವಾರ ಯಾದಗಿರಿ ಸಾರಿಗೆ ಡಿಸಿ (ಡಿವಿಜನಲ್ ಕಂಟ್ರೋಲರ್) ಅವರಿಗೆ ಬರೆದ ಮನವಿಯನ್ನು ಸಾರಿಗೆ ನಿಯಂತ್ರಕ ಐ.ಎ ಕರಣಿ ಅವರಿಗೆ ಗ್ರಾಮಸ್ಥರ ಸಲ್ಲಿಸಿದರು.

ಈ ವೇಳೆ ಮುಖಂಡ ಸಂಗಮೇಶ ತಾಳಿಕೋಟಿ ಮಾತನಾಡಿ ಜಿಲ್ಲೆಯ ಗಡಿಗ್ರಾಮವಾಗಿರುವ
ನಾರಾಯಣಪುರ ಸೇರಿ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಗ್ರಾಮಸ್ಥರಿಗೆ ರಾತ್ರಿ ವೇಳೆ ನಾರಾಯಣಪುರ ಮಾರ್ಗವಾಗಿ ಬಸ್ಸುಗಳ ಸಂಚಾರ ಇಲ್ಲದೆ ಇರುವದು ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದೆ. ಹೀಗಾಗಿ ರಾತ್ರಿ ವೇಳೆ ನಾರಾಯಣಪೂರ ಮಾರ್ಗವಾಗಿ ಕಲಬುರಗಿಯಿಂದ ವಿಜಯಪುರಕ್ಕೆ ಹಾಗೂ ಕೊಡೇಕಲ್ ಮಾರ್ಗವಾಗಿ ತಾಳಿಕೋಟಿಗೆ ಮತ್ತು ಶಹಾಪುರದಿಂದ ಧಾರವಾಡ ಹುಬ್ಬಳ್ಳಿಗೆ ನಾರಾಯಣಪುರ ಮಾರ್ಗವಾಗಿ ಬೆಳಿಗ್ಗೆ ಹಾಗೂ ರಾತ್ರಿ ವೇಳೆಗೆ ಹೊಸ ಬಸ್ ಸಂಚಾರ ಆರಂಭಿಸುವದರಿಂದ ಈ ಭಾಗದ ವ್ಯಾಪಾರಿಗಳಿಗೆ, ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ನಗರ ಪಟ್ಟಣದ ವೈದ್ಯಕೀಯ ಸೇವೆ ಪಡೆಯಲು ರೋಗಿಗಳಿಗೆ ತುಂಬಾ ಅನುಕೂಲವಾಗುತ್ತದೆ, ಇದನ್ನು ಸಾರಿಗೆ ಅಧಿಕಾರಿಗಳು ಮನಗಂಡು ಶೀಘ್ರವೇ ಹೊಸ ಬಸ್‌ಗಳ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ಪ್ರಮುಖರಾದ ಹಣಮಗೌಡ ಪೊಲಿಸ್ ಪಾಟೀಲ್, ಪ್ರಶಾಂತ ರಾಠಿ, ಸಂಗಯ್ಯ ಹಿರೇಮಠ, ಹಣಮಂತರಾಯ, ನಾರಾಯಣ ನವಲೆ,ಗಜಾನನ ಮುತ್ತು, ಬಸವರಾಜ, ದೇವಣ್ಣ, ಶರಣು, ಇಬ್ರಾಹಿಂ, ಸದ್ದಾಂ, ವೀರಮುತ್ತು ಸೇರಿ ಇತರರು ಇದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು