ಮುದ್ದೇಬಿಹಾಳ: ದಸರಾ ರಜೆ ವಿಸ್ತರಣೆಯನ್ನು ಸರಕಾರಿ ಮತ್ತು ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳ ರಜೆಯನ್ನು ವಿಸ್ತರಿಸಲಾಗಿದೆ. ಅನುದಾನ ರಹಿತ ಶಾಲೆಗಳು ಯತಾಸ್ಥಿತಿಯಲ್ಲಿ ಆರಂಭವಾಗಿದ್ದು, ಈ ಶಾಲೆಗಳಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳು ಆರಂಭವಾಗದೇ ಇರುವುದರಿಂದ ಸಮಸ್ಯೆಯಾಗಿದೆ ಎಂದು ಖಾಸಗಿ ಶಾಲೆಗಳ ಒಕ್ಕೂಟದ ಪದಾಧಿಕಾರಿಗಳು ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಗೆ ಆಗಮಿಸಿದ್ದ ಖಾಸಗಿ ಶಾಲಾ ಆಡಳಿತ ಮಂಡಳಿ ಪದಾಧಿಕಾರಿಗಳು ತಹಶೀಲ್ದಾರ್ ಕೀರ್ತಿ ಚಾಲಕ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ವಸತಿ ನಿಲಯಗಳು ಗಣತಿ ಕಾರ್ಯದ ರಜೆಯನ್ನು ಮುಂದುವರೆಸಿದ ಆದೇಶದ ಮೇಲೆ ಆರಂಭಗೊಂಡಿಲ್ಲ. ಇದರಿಂದ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆದು ವಸತಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗಿದೆ. ಕೂಡಲೇ ವಸತಿ ನಿಲಯಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಖಾಸಗಿ ಆಡಳಿತ ಮಂಡಳಿಯವರು ಹಾಗೂ ಶಿಕ್ಷಕರು ಮನವಿ ಪತ್ರ ಸಲ್ಲಿಸಿದರು. ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ ಬಿರಾದಾರ, ಬಿ.ಪಿ.ಕುಲಕರ್ಣಿ, ಪ್ರಭುರಾಜ ಕಲ್ಬುರ್ಗಿ, ಆರ್.ಎಸ್.ಲಮಾಣಿ, ಬೋಳಿಶೆಟ್ಟಿ ಇದ್ದರು.