Request to Tahsildar to start hostel

ವಸತಿ ನಿಲಯ ಆರಂಭಿಸುವಂತೆ ತಹಶೀಲ್ದಾರಗೆ ಮನವಿ

ವಸತಿ ನಿಲಯ ಆರಂಭಿಸುವಂತೆ ತಹಶೀಲ್ದಾರಗೆ ಮನವಿ

ಮುದ್ದೇಬಿಹಾಳ: ದಸರಾ ರಜೆ ವಿಸ್ತರಣೆಯನ್ನು ಸರಕಾರಿ ಮತ್ತು ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳ ರಜೆಯನ್ನು ವಿಸ್ತರಿಸಲಾಗಿದೆ. ಅನುದಾನ ರಹಿತ ಶಾಲೆಗಳು ಯತಾಸ್ಥಿತಿಯಲ್ಲಿ ಆರಂಭವಾಗಿದ್ದು, ಈ ಶಾಲೆಗಳಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳು ಆರಂಭವಾಗದೇ ಇರುವುದರಿಂದ ಸಮಸ್ಯೆಯಾಗಿದೆ ಎಂದು ಖಾಸಗಿ ಶಾಲೆಗಳ ಒಕ್ಕೂಟದ ಪದಾಧಿಕಾರಿಗಳು ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಗೆ ಆಗಮಿಸಿದ್ದ ಖಾಸಗಿ ಶಾಲಾ ಆಡಳಿತ ಮಂಡಳಿ ಪದಾಧಿಕಾರಿಗಳು ತಹಶೀಲ್ದಾರ್ ಕೀರ್ತಿ ಚಾಲಕ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ವಸತಿ ನಿಲಯಗಳು ಗಣತಿ ಕಾರ್ಯದ ರಜೆಯನ್ನು ಮುಂದುವರೆಸಿದ ಆದೇಶದ ಮೇಲೆ ಆರಂಭಗೊಂಡಿಲ್ಲ. ಇದರಿಂದ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆದು ವಸತಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗಿದೆ. ಕೂಡಲೇ ವಸತಿ ನಿಲಯಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಖಾಸಗಿ ಆಡಳಿತ ಮಂಡಳಿಯವರು ಹಾಗೂ ಶಿಕ್ಷಕರು ಮನವಿ ಪತ್ರ ಸಲ್ಲಿಸಿದರು. ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ ಬಿರಾದಾರ, ಬಿ.ಪಿ.ಕುಲಕರ್ಣಿ, ಪ್ರಭುರಾಜ ಕಲ್ಬುರ್ಗಿ, ಆರ್.ಎಸ್.ಲಮಾಣಿ, ಬೋಳಿಶೆಟ್ಟಿ ಇದ್ದರು.

Latest News

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ನಾಲತವಾಡ: ಸಮೀಪದ ಲೊಟಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಕೃತಿಯ ಕಾಂತಿ ಮಕ್ಕಳ ಮೂಲಕ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಎರಡು ದಿನಗಳ ಹಿಂದಷ್ಟೇ ರಾಜ್ಯದ ಸರ್ಕಾರಿ,ಖಾಸಗಿ.ಗುತ್ತಿಗೆ,ಹೊರಗುತ್ತಿಗೆ ಕ್ಷೇತ್ರದಲ್ಲಿ ಸೇವೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ  :       ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ : ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ಮುದ್ದೇಬಿಹಾಳ : ಬಂಜಾರಾ ಸಮಾಜದ ಸಂಘಟನೆಯನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಲು, ಸಮಾಜದ ಮಕ್ಕಳು ಶೈಕ್ಷಣಿಕ,ಔದ್ಯೋಗಿಕ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಮುದ್ದೇಬಿಹಾಳ : ತಂಗಡಗಿ ಇಳಿಜಾರಿನಿಂದ ಶಿರೋಳ ಗ್ರಾಮದ ಬಳಿ ಹಾಯ್ದು ಹೋಗಿರುವ ಕೆಬಿಜೆಎನ್‌ಎಲ್‌ನ ಎಡದಂಡೆ

MUDDEBIHAL :  ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

MUDDEBIHAL : ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

ಮುದ್ದೇಬಿಹಾಳ ತಾಲ್ಲೂಕಿನ ಶಿರೋಳ ಗ್ರಾಮದ ಸಮೀಪದಲ್ಲಿ ಕಾಲುವೆಯಲ್ಲಿ ಕಾಲು ಜಾರಿ ಮೂವರು ಬಿದ್ದಿರುವ ಘಟನೆ ಮಂಗಳವಾರ ಮದ್ಯಾಹ್ನ ನಡೆದಿದೆ. ಈ ಘಟನೆ ಹಿನ್ನೆಲೆಯಲ್ಲಿ ಅಗ್ನಿಶಾಮಕ ಠಾಣೆ ಹಾಗೂ ಪೊಲೀಸ್ ಇಲಾಖೆಯಿಂದ ಶೋಧ ಕಾರ್ಯ ಮುಂದುವರೆದಿದೆ. ಮಹೆಬೂಬ ನಗರದ ಪಕ್ಕದಲ್ಲಿರುವ ಆಶ್ರಯ ಕಾಲನಿಯಲ್ಲಿ ವಾಸವಿದ್ದ ಸುಡಗಾಡ ಸಿದ್ಧ ಜನಾಂಗದ ಇಬ್ಬರು ಯುವಕರು, ಓರ್ವ ಯುವತಿ ಕಾಲುವೆಯಲ್ಲಿ ಮುಳುಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರಿಂದ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ. ಬಸಮ್ಮ ಚೆನ್ನಪ್ಪ ಕೊಣ್ಣೂರ(21),

ಐದು ದಿನಗಳ ಹೋರಾಟ ಅಂತ್ಯ :                                       ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ  ಅಧಿಕೃತ ಘೋಷಣೆ

ಐದು ದಿನಗಳ ಹೋರಾಟ ಅಂತ್ಯ : ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಅಧಿಕೃತ ಘೋಷಣೆ

ಮುದ್ದೇಬಿಹಾಳ : ಕಬ್ಬಿನ ರಿಕವರಿ ಆಧಾರದ ಮೇಲೆ ಟನ್ ಕಬ್ಬಿಗೆ 3264 ರೂ.ನೀಡುವುದಾಗಿ ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಶನಿವಾರ ಅಧಿಕೃತ ಘೋಷಣೆ ಮಾಡಿದ್ದು ಕಳೆದ ಐದು ದಿನಗಳಿಂದ ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ನಡೆಯುತ್ತಿದ್ದ ರೈತರ ಹೋರಾಟ ಅಂತ್ಯಗೊAಡಿದೆ. ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ಕಬ್ಬಿನ ವಾಹನಗಳನ್ನು ತಡೆದು ನಿಲ್ಲಿಸಿ ಕರ್ನಾಟಕ ರೈತ ಸಂಘ ಹಾಗೂ ರೈತಪರ ಸಂಘಟನೆಯ ಮುಖಂಡರು ಹೋರಾಟ ಆರಂಭಿಸಿದ್ದರು.ಇಲ್ಲಿನ