Road accident: Father and daughter died on the spot

ರಸ್ತೆ ಅಪಘಾತ: ತಂದೆ ಮಗಳು ಸ್ಥಳದಲ್ಲೇ ಸಾವು

ರಸ್ತೆ ಅಪಘಾತ: ತಂದೆ ಮಗಳು ಸ್ಥಳದಲ್ಲೇ ಸಾವು

ಕುಳಗೇರಿ ಕ್ರಾಸ್: ಮೂರು ವರ್ಷದ ಮಗು ಜೊತೆ ದೇವರ ದರ್ಶನಕ್ಕೆ ಹೊರಟಿದ್ದ ತಂದೆ ರತೆ ಅಪಘಾತದಲ್ಲಿ ಸ್ಥಳದಲ್ಲೇ ಸಾವಿನ್ನಪ್ಪಿದ ಘಟನೆ ಶನಿವಾರ ಬೆಳಿಗ್ಗೆ ಗ್ರಾಮದ ಕೆಇಬಿ ಹತ್ತಿರ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಸಂಭವಿಸಿದೆ.

ಎಸ್‌ಎನ್ ತಿಮ್ಮಾಪೂರ ಗ್ರಾಮದ ನಿವಾಸಿ ಬಸವರಾಜ ವಿಠಲ ಬಂಡಿವಡ್ಡರ (27) ಹಾಗೂ ಆತನ ಐದು ವರ್ಷದ ಮಗಳು ಸಂಜನಾ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತನ್ನ ಮೂರು ವರ್ಷದ ಮಗು ಹುಲಿಗೆಮ್ಮಳನ್ನು ಬೈಕ್ ಮುಂಬಾಗದಲ್ಲಿ ಕೂಡ್ರಿಸಿಕೊಂಡು ಹಳಗೇರಿ ಗ್ರಾಮದ ಹನಮಂತ ದೇವರ ದರ್ಶನಕ್ಕೆ ಹೊರಟಿದ್ದರು ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಅಮರನಾಥ ರೆಡ್ಡಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರಸನ್ನ ದೇಸಾಯಿ, ಮಾಂತೇಶ್ವರ್ ಜಿದ್ದಿ, ಡಿಎಸ್‌ಪಿ ವಿಶ್ವನಾಥರಾವ್ ಕುಲಕರ್ಣಿ, ಬಾದಾಮಿ ಸಿಪಿಐ ಕರಿಯಪ್ಪ ಬನ್ನೆ, ಪಿಎಸ್‌ಐ ವಿಠಲ ನಾಯಿಕ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

ದೇವರೆ ಈ ಸಾವು ನ್ಯಾಯವೇ: ದೇವರು ಇದ್ದಾನಾ…? ಅವನಿಗೆ ಕರುಣೆ ಇಲ್ಲವೇ…? ದೇವರು ಇರುವುದು ನೀಜವೇ…? ಇಂದು ನಡೆದ ಅಪಘಾತ ಸ್ಥಳದಲ್ಲಿ ಇಂತ ಪ್ರಶ್ನೇಗಳು ಸಹಜವಾಗಿ ಕೇಳಿಬಂದವು. ದೇವರ ದರ್ಶನಕ್ಕೆ ಹೊರಟವರಿಗೆ ಯಾಕೆ ಈ ಶಿಕ್ಷೆ…? ಏನೂ ಅರಿಯದ ಮೂರು ವರ್ಷದ ಈ ಪುಟ್ಟ ಕಂದಮ್ಮ ಮಾಡಿರುವ ತಪ್ಪಾದರೂ ಏನು…? ಕರುಣೆ ಬರಲಿಲ್ಲವೇ ಎಂದು ಹೆತ್ತವರ ಗೋಳಾಟ ಆಕ್ರಂದನ ಮುಗಿಲು ಮುಟ್ಟಿತ್ತು.

ಅಂಬ್ಯೂಲೆನ್ಸ್ ವಾಹನಕ್ಕಾಗಿ ಪರದಾಟ: ಗ್ರಾಮದಲ್ಲಿ ಹುಬ್ಬಳ್ಳಿ-ಸೊಲ್ಲಾಪೂರ ರಾಷ್ಟ್ರೀಯ ಹೆದ್ದಾರಿ ಸವದತ್ತಿ-ಕೂಡಲಸಂಗಮ ರಾಜ್ಯ ಹೆದ್ದಾರಿ. ಹೀಗೆ ಇಕ್ಕಟ್ಟಾದ ಹೆದ್ದಾರಿಗಳಲ್ಲಿ ನಿತ್ಯ ಸಾಕಷ್ಟು ಅಪಘಾತಗಳು ಸಂಭವಿಸುತ್ತಿವೆ. ಅಪಘಾತಗೊಂಡ ಜನರು ಅಂಬ್ಯೂಲೆನ್ಸ್ ಇಲ್ಲದೆ ಸಾವು ಬದುಕಿನ ಮದ್ಯ ಹೋರಾಡುವಂತಾಗಿದೆ.

ಸರಿಯಾದ ಸಮಯಕ್ಕೆ ಅಂಬ್ಯೂಲೆನ್ಸ್ ಬಾರದೆ ಅದೆಷ್ಟೋ ಪ್ರಾಣಪಕ್ಷಿ ಹಾರಿ ಹೋಗಿವೆ. ಸದ್ಯ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಬ್ಯೂಲೆನ್ಸ್ ಬೇಕೇ ಬೇಕು ಎಂದು ಆಗ್ರಹಿಸಿದ ಗ್ರಾಮಸ್ಥರು ಅಪಘಾತಗೊಂಡು ಒದ್ದಾಡುವ ಜೀವಗಳನ್ನ ಉಳಿಸಿ ಎಂದು ಕೇಳಿಕೊಳ್ಳುತ್ತಿದ್ದಾರೆ.

ಬಾದಾಮಿ ಶಾಸಕರಾದ ಭೀಮಸೇನ ಚಿಮ್ಮನಕಟ್ಟಿಯವರು ಆದಷ್ಟು ಬೇಗ ಈ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಬ್ಯೂಲೆನ್ಸ್ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.

Latest News

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಬಣಜಿಗ ಸಮಾಜದ ನೂತನ ಕಾರ್ಯಕಾರಿಣಿ ಮಂಡಳಿಯನ್ನು ಸರ್ವಾನುಮತದಿಂದ ಭಾನುವಾರ ಆಯ್ಕೆ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ರಾಯಚೂರು,ಜೂ 15- ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಡೆದಿರುವ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ನಾರಾಯಣಪುರ: ಕೊಡೇಕಲ್ ಪಟ್ಟಣದ ಸರರ್ಕಾರಿ ಪ್ರೌಢಶಾಲೆಯಲ್ಲಿ ವಲಯ ವ್ಯಾಪ್ತಿಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರ ಸಭೆ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸುರುಪುರ ಬಿಇಒ ಯಲ್ಲಪ್ಪ ಕಾಡ್ಲೂರ ಮಾತನಾಡಿ ಮಕ್ಕಳಿಗೆ ಕಲಿಕೆಗೆ ಪೂರಕವಾದ ವಾತವರಣ ನಿರ್ಮಾಣದ ಜೊತೆಗೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವದು ಹಾಗೂ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಸೇರಿ ಅನುದಾನಿತ ಶಾಲೆಗಳಲ್ಲಿ ಸಿಗುವ ಬಿಸಿಯೂಟ, ಸಮವಸ್ತ್ರ ಪಠ್ಯಪುಸ್ತಕಗಳ ವಿತರಣೆ ಸೇರಿ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಮುದ್ದೇಬಿಹಾಳ : ಜನೌಷಧಿ ಕೇಂದ್ರಗಳು, ಉಚಿತ ಅಕ್ಕಿ ಕೊಡುವ ಯೋಜನೆ, ಆಯುಷ್ಮಾನ್ ಆರೋಗ್ಯ ಕಾರ್ಡ ಇಂತಹ ನೂರಾರು ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಮಾಡಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಬಿಜೆಪಿ ಸರ್ಕಾರ ಕೇಂದ್ರದಲ್ಲಿ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಐದು ಲಕ್ಷ ರೂ.ಗಳವರೆಗೆ ಆರೋಗ್ಯ ವಿಮೆ ಕಲ್ಪಿಸುವ ಯೋಜನೆಯನ್ನು ಮೋದಿ