ಮಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ (Road Accident) ಎರೆಡು ದಿನ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ ಮೃತಪಟ್ಟಿದ್ದು, ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಎಂಬಲ್ಲಿ ಘಟನೆ ಸಂಭವಿಸಿದೆ.
ಕಾರು ಅಪಘಾತದಲ್ಲಿ ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬುವವರ ಪತ್ನಿ ಮಾನಸ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನವ ದಂಪತಿ ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದಾಗ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್ ಹಾರಿ ಕೆ.ಎಸ್.ಆರ್‌ಟಿ.ಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ನಜ್ಜುಗುಜ್ಜಾಗಿದ್ದು, ಮಾನಸ ತೀವ್ರ ರಕ್ತಸ್ರಾವವಾಗಿ ಮೃತಪಟ್ಟರೆ, ಅನಿಶ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಸ್ಥಳೀಯರು ಕಾರಿನಿಂದ ಹೊರತೆಗೆದು ಆಸ್ಪತ್ರೆಗೆ ರವಾನಿಸಿದ್ದಾರೆ.
ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಇವರಿಬ್ಬರ ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದಿದ್ದರು. ವಾಪಸು ಮನೆಗೆ ಹೋಗುವ ವೇಳೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ: ಪ್ರಧಾನಿ ಮೋದಿಗೆ BIG SHOCK!
ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದ್ದು, ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.