ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ವಿತರಣೆ: ನೈಜ ಭಾರತದ ಧ್ವನಿ ಗ್ರಾಮೀಣ ಪತ್ರಕರ್ತರು-ಸಚಿವ ಎಂ.ಬಿ. ಪಾಟೀಲ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ವಿತರಣೆ: ನೈಜ ಭಾರತದ ಧ್ವನಿ ಗ್ರಾಮೀಣ ಪತ್ರಕರ್ತರು-ಸಚಿವ ಎಂ.ಬಿ. ಪಾಟೀಲ

ವಿಜಯಪುರ : ಗ್ರಾಮೀಣ ಭಾಗದ ಜನರು, ರೈತರು ಹಾಗೂ ಸಾಮಾನ್ಯ ಜನರ ನೈಜ ಸಮಸ್ಯೆಗಳನ್ನು ಬೆಳಕಿಗೆ ತರುವಲ್ಲಿ ಗ್ರಾಮೀಣ ಪತ್ರಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು ನೈಜ ಭಾರತದ ಧ್ವನಿಯಾಗಿ ಗ್ರಾಮೀಣ ಪತ್ರಕರ್ತರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.

ನಗರದ ಗಾಂಧಿ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಹಾತ್ಮ ಗಾಂಧೀಜಿಯವರ ಕನಸಿನಂತೆ ಭಾರತ ಗ್ರಾಮಗಳ ದೇಶವಾಗಿದೆ. ದೇಶದ ಬಹುಪಾಲು ಜನರು ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುತ್ತಿದ್ದು, ಗ್ರಾಮಗಳ ಅಭಿವೃದ್ಧಿಯಾದಾಗ ಮಾತ್ರ ನೈಜ ಭಾರತದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿನ ಕುಡಿಯುವ ನೀರು, ರೈತರ ಸಮಸ್ಯೆಗಳು, ರಸ್ತೆ, ಬಸ್ ಸಾರಿಗೆ, ಶಾಲಾ-ಕಾಲೇಜುಗಳಲ್ಲಿ ಶಿಕ್ಷಕರ ಕೊರತೆ, ನೀರಾವರಿ, ವಿದ್ಯುತ್ ಸೇರಿದಂತೆ ನೂರಾರು ಸಮಸ್ಯೆಗಳನ್ನು ಗ್ರಾಮೀಣ ಪತ್ರಕರ್ತರು ತಮ್ಮ ವರದಿಗಳ ಮೂಲಕ ಸರ್ಕಾರ, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತರುತ್ತಿದ್ದಾರೆ. ಇದರಿಂದ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲು ಸಾಧ್ಯವಾಗುತ್ತಿದೆ ಎಂದು ಹೇಳಿದರು.

ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ನೀಡುವ ಪ್ರಸ್ತಾವನೆಯನ್ನು ಅನುಷ್ಠಾನಕ್ಕೆ ಶ್ರಮಿಸಿದ್ದಾರೆ.ವಿವಿಧ ನಿಯಮಾವಳಿಗಳ ಕಾರಣದಿಂದ ಅದು ವಿಳಂಬವಾಗಿತ್ತು. ಇದೀಗ ಅದನ್ನು ಸರಳೀಕರಿಸಿ ಅರ್ಹ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಸಿಗುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಇತ್ತೀಚಿನ ದಿನಗಳಲ್ಲಿ ಕೃತಕ ಬುದ್ಧಿಮತ್ತೆ (ಎಐ) ಡಿಜಿಟಲ್ ಮಾಧ್ಯಮ ಹಾಗೂ ವಿವಿಧ ತಂತ್ರಜ್ಞಾನಗಳ ಬೆಳವಣಿಗೆಯಿಂದ ಮಾಧ್ಯಮ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿವೆ. ಮೊಬೈಲ್, ವಾಟ್ಸ್ಆ್ಯಪ್ ಹಾಗೂ ಇ-ಮೇಲ್ ಮೂಲಕ ಮಾಹಿತಿ ವಿನಿಮಯ ಅತ್ಯಂತ ವೇಗವಾಗಿ ನಡೆಯುತ್ತಿದೆ. ಪ್ರಿಂಟ್ ಮಾಧ್ಯಮದ ಜೊತೆಗೆ ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮಗಳ ವ್ಯಾಪ್ತಿಯೂ ಹೆಚ್ಚಾಗಿದೆ ಎಂದರು.

ವಿದೇಶಗಳಲ್ಲಿ ಡಿಜಿಟಲ್ ಮಾಧ್ಯಮದ ಬಳಕೆ ಹೆಚ್ಚಾಗಿದ್ದರೂ, ಭಾರತದಲ್ಲಿ ಪತ್ರಿಕೆಗಳನ್ನು ಕೈಯಲ್ಲಿ ಹಿಡಿದು ಓದುವ ಸಂಸ್ಕೃತಿ ಇನ್ನೂ ಜೀವಂತವಾಗಿದೆ. ತಂತ್ರಜ್ಞಾನ ಎಷ್ಟೇ ಮುಂದುವರಿದರೂ ಪತ್ರಿಕೋದ್ಯಮದ ಮೂಲ ಉದ್ದೇಶವಾದ ಜನರ ಸಮಸ್ಯೆಗಳನ್ನು ಸಮಾಜದ ಮುಂದಿಡುವ ಕಾರ್ಯ ಮುಂದುವರಿಯಬೇಕು ಎಂದು ಹೇಳಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ಒಟ್ಟು 40 ಜನರಿಗೆ ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಸೌಲಭ್ಯ ದೊರಕಿದೆ.ಇನ್ನುಳಿದವರ ಅರ್ಜಿಗಳು ಕೆಲವು ತಾಂತ್ರಿಕ ಸಮಸ್ಯೆಗಳಿಂದ ತಿರಸ್ಕೃತಗೊಂಡಿದ್ದು ಸಚಿವರ ಸೂಚನೆಯಂತೆ ಅರ್ಹರಿಗೆ ಪಾಸ್ ದೊರಕಿಸಿಕೊಡಲು ಇಲಾಖೆ ಶ್ರಮಿಸಲಿದೆ.ರಾಜ್ಯದಲ್ಲಿಯೇ ಅತೀ ಹೆಚ್ಚು ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಪಡೆದುಕೊಂಡಿರುವ ಜಿಲ್ಲೆ ನಮ್ಮದಾಗಿದೆ ಎಂದರು. ಜಿಲ್ಲಾ ಪಂಚಾಯಿತಿ ನೂತನ ಸಿಇಒ ಆನಂದ ಪ್ರಕಾಶ ಮೀನಾ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಹೇಶ ಪೋತದಾರ,ರಾಜಶೇಖರ ದೈವಾಡಿ,ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ,ಉಪಾಧ್ಯಕ್ಷ ಶಶಿಕಾಂತ ಮೆಂಡೇಗಾರ,ಕಾರ್ಯಕಾರಿಣಿ ಸದಸ್ಯ ಪ್ರಕಾಶ ಬೆಣ್ಣೂರ ಇದ್ದರು.

40 ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಈ ಹಿಂದೆ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ನೀಡುವ ಸಂದರ್ಭದಲ್ಲಿ 11 ತಿಂಗಳ ಬ್ಯಾಂಕ್ ಅಕೌಂಟ್ಸ್ ಹಾಗೂ ನಿಯಮಾವಳಿಗಳ ಮಾನದಂಡದಿoದಾಗಿ ಪ್ರಕ್ರಿಯೆ ವಿಳಂಬವಾಗಿತ್ತು. ಇದೀಗ ನಿಯಮವನ್ನು ಸರಳೀಕರಿಸಲಾಗಿದೆ.ಇದರ ಪರಿಣಾಮವಾಗಿ ರಾಜ್ಯದಾದ್ಯಂತ ಸುಮಾರು 400 ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಿಸಲಾಗುತ್ತಿದ್ದು, ವಿಜಯಪುರ ಜಿಲ್ಲೆಯ 40 ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ವಿತರಿಸುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದು ಸಚಿವ ಪಾಟೀಲ ತಿಳಿಸಿದರು.

ಸರ್ಕಾರಕ್ಕೆ,ಸಚಿವರಿಗೆ ಅಭಿನಂದನೆ : ಗ್ರಾಮೀಣ ಭಾಗದಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಒದಗಿಸುವ ಕಾರ್ಯ ಮಾಡಿರುವ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಕಾರ್ಯನಿರತ ಪತ್ರಕರ್ತರ ಧ್ವನಿ ಜಿಲ್ಲಾಧ್ಯಕ್ಷ ವಿನಾಯಕ ಸೊಂಡೂರ,ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷ ಶಂಕರ ಹೆಬ್ಬಾಳ ತಿಳಿಸಿದರು.ಕಾನಿಪ ಧ್ವನಿ ಸಂಘಟನೆ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಅವರ ನೇತೃತ್ವದಲ್ಲಿ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ,ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಹೋರಾಟಕ್ಕೆ ಸ್ಪಂದಿಸಿ ಸರ್ಕಾರ ಗ್ರಾಮೀಣ ಪತ್ರಕರ್ತರಿಗೆ ಬಸ್‌ಪಾಸ್ ನೀಡಿದೆ.ಇದಕ್ಕೆ ಕಾರಣೀಕರ್ತರಾದ ಹಿಂದಿನ ಸಿಎಂ ಸಿದ್ಧರಾಮಯ್ಯ,ಈಗಿನ ಸಿಎಂ ಡಿ.ಕೆ.ಶಿವಕುಮಾರ,ಹಿಂದಿನ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

Latest News

ಬಿಜೆಪಿ ಕಾರ್ಯಕರ್ತರಿಂದ ಕೂಲಿ ಪ್ರಹಾರ :                             ಸರ್ಕಾರದ ಪ್ರತಿಕೃತಿಗೆ ಚಿಲ್ಲರೆ ನೋಟಿನ ಹಾರ ಹಾಕಿ ಪ್ರತಿಭಟನೆ

ಬಿಜೆಪಿ ಕಾರ್ಯಕರ್ತರಿಂದ ಕೂಲಿ ಪ್ರಹಾರ : ಸರ್ಕಾರದ ಪ್ರತಿಕೃತಿಗೆ ಚಿಲ್ಲರೆ ನೋಟಿನ ಹಾರ ಹಾಕಿ ಪ್ರತಿಭಟನೆ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಬರ ಪರಿಹಾರದ ಹಣವಾಗಿ 2500 ರೂ.ನೀಡಲು ಮುಂದಾಗಿರುವ ಕ್ರಮವನ್ನು

Dasara Vacation 2026: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಈ ಬಾರಿ ಬರೋಬ್ಬರಿ 20 ದಿನ ರಜೆ, ಯಾವಾಗಿಂದ?

Dasara Vacation 2026: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಈ ಬಾರಿ ಬರೋಬ್ಬರಿ 20 ದಿನ ರಜೆ, ಯಾವಾಗಿಂದ?

ಬೆಂಗಳೂರು: ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಶಿಕ್ಷಣ ಇಲಾಖೆ ಭರ್ಜರಿ ಸಿಹಿಸುದ್ದಿಯೊಂದನ್ನ ನೀಡಿದೆ. ಶಾಲಾ

ಔಷಧ ತಜ್ಞರು ಜೀವ ಉಳಿಸುವ ಮಾರ್ಗದರ್ಶಕರು-ಸಿದ್ಧಲಿಂಗ ದೇವರು

ಔಷಧ ತಜ್ಞರು ಜೀವ ಉಳಿಸುವ ಮಾರ್ಗದರ್ಶಕರು-ಸಿದ್ಧಲಿಂಗ ದೇವರು

ಮುದ್ದೇಬಿಹಾಳ : ಔಷಧ ತಜ್ಞರು ವೈದ್ಯರ ಬೆನ್ನೆಲುಬಾಗಿದ್ದು ಜೀವ ಉಳಿಸುವ ಮಾರ್ಗದರ್ಶಕರಂತೆ ಕೆಲಸ ಮಾಡುತ್ತಿದ್ದಾರೆ

ರೈತರು ಭಿಕ್ಷುಕರಲ್ಲ ; ಸಿಎಂ ಡಿಕೆಶಿ ರೈತರ ಕ್ಷಮೆಯಾಚಿಸಲಿ – ಎ.ಎಸ್.ಪಾಟೀಲ ನಡಹಳ್ಳಿ

ರೈತರು ಭಿಕ್ಷುಕರಲ್ಲ ; ಸಿಎಂ ಡಿಕೆಶಿ ರೈತರ ಕ್ಷಮೆಯಾಚಿಸಲಿ – ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ಬರಗಾಲದ ಕುರಿತು ಕರೆದಿದ್ದ ನಾಲ್ಕು ದಿನಗಳ ವಿಶೇಷ ಅಧಿವೇಶನದಲ್ಲಿ ರಾಜ್ಯದ ರೈತರಿಗೆ

ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಸಂಸ್ಥೆ ಹೊಸ ಇತಿಹಾಸ:   ಟೀಕೆಗಳಿಗೆ ಸಾಧನೆಯೇ ಉತ್ತರ : ಒಂದೇ ಶಾಖೆಯಿಂದ 225 ಮೆಡಿಕಲ್ ಸೀಟು..!

ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಸಂಸ್ಥೆ ಹೊಸ ಇತಿಹಾಸ: ಟೀಕೆಗಳಿಗೆ ಸಾಧನೆಯೇ ಉತ್ತರ : ಒಂದೇ ಶಾಖೆಯಿಂದ 225 ಮೆಡಿಕಲ್ ಸೀಟು..!

ಮುದ್ದೇಬಿಹಾಳ : ಗ್ರಾಮೀಣ ಭಾಗದ ಶಿಕ್ಷಣ ಸಂಸ್ಥೆಯೊoದು ಶೈಕ್ಷಣಿಕ ಕ್ಷೇತ್ರದಲ್ಲಿ ಅಭೂತಪೂರ್ವ ಇತಿಹಾಸ ನಿರ್ಮಿಸಿದೆ. ತಾಲ್ಲೂಕಿನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯು ಸನ್ 2025-26ನೇ ಸಾಲಿನಲ್ಲಿ ಒಂದೇ ಶಾಖೆಯಿಂದ ಬರೊಬ್ಬರಿ 225 ವೈದ್ಯಕೀಯ (ಮೆಡಿಕಲ್) ಸೀಟುಗಳು ಪಡೆದುಕೊಳ್ಳುವ ಮೂಲಕ ಇಡೀ ರಾಜ್ಯಕ್ಕೆ ಮೊದಲ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಸoಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಪಾಟೀಲ್ ಹೇಳಿದರು. ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಆಕ್ಸಫರ್ಡ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಗುರುವಾರ ಕರೆದಿದ್ದ

ಪೌರಕಾರ್ಮಿಕರಿಗೆ 3.50 ಲಕ್ಷ ರೂ.ವಿಶೇಷ ಭತ್ಯೆ: ಪೌರಕಾರ್ಮಿಕರು ನಗರಗಳ ಸ್ವಚ್ಛತೆಯ ಸೈನಿಕರು-ಬಿರಾದಾರ

ಪೌರಕಾರ್ಮಿಕರಿಗೆ 3.50 ಲಕ್ಷ ರೂ.ವಿಶೇಷ ಭತ್ಯೆ: ಪೌರಕಾರ್ಮಿಕರು ನಗರಗಳ ಸ್ವಚ್ಛತೆಯ ಸೈನಿಕರು-ಬಿರಾದಾರ

ಮುದ್ದೇಬಿಹಾಳ : ಪೌರಕಾರ್ಮಿಕರು ನಗರಗಳ ಸ್ವಚ್ಛತೆಯ ಸೈನಿಕರಂತೆ ಕಾರ್ಯನಿರ್ವಹಿಸುತ್ತಿದ್ದು ಅವರ ಸೇವೆ ಅನನ್ಯವಾದದ್ದು ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಹೇಳಿದರು. ಪಟ್ಟಣದ ಅಂಬೇಡ್ಕರ್ ಸಭಾಂಗಣದಲ್ಲಿ ಬುಧವಾರ ಪುರಸಭೆಯಿಂದ ಹಮ್ಮಿಕೊಂಡಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸರ್ಕಾರದಿಂದ ಪ್ರತಿ ವರ್ಷ ಪೌರಕಾರ್ಮಿಕರಿಗೆ ವಿಶೇಷ ಭತ್ಯೆಯಾಗಿ 7500 ರೂ.ಅವರ ಖಾತೆಗಳಿಗೆ ನೀಡಲಾಗುತ್ತಿದೆ ಎಂದು ಹೇಳಿದರು. ಪೌರಕಾರ್ಮಿಕರ ಸಂಘದ ಉಪಾಧ್ಯಕ್ಷ ರಾಮಣ್ಣ ಚಲವಾದಿ ಮಾತನಾಡಿ, ಪುರಸಭೆಯಿಂದ ನಮ್ಮ ಪೌರಕಾರ್ಮಿಕರಿಗೆ ವಿವಿಧ ಕ್ರೀಡಾಕೂಟಗಳನ್ನು