ಮುಧೋಳ : ನಗರದ ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಕೋ ಅರ್ಡಿನೆಟರ್ ಅಗಿದ್ದ ನಗರದ ಸದುಗೌಡ ಲಕ್ಷ್ಮಣಗೌಡ ಪಾಟೀಲ್ ಅವರನ್ನು ಮುಧೋಳ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದ ಅವರು ರಾಜ್ಯದ ಗಣ್ಯರು, ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖನಾಗಿ ಕಾರ್ಯನಿರ್ವಹಣೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.