ಜನರ ಕೆಲಸ ಮಾಡಿದ ತೃಪ್ತಿಯಿದೆ-ಓಸ್ವಾಲ್ ಹಿರಿಯರ ಆಶಯದಂತೆ ಚುನಾವಣೆಯಲ್ಲಿ ಪೆನಲ್ ರಚನೆ

ಜನರ ಕೆಲಸ ಮಾಡಿದ ತೃಪ್ತಿಯಿದೆ-ಓಸ್ವಾಲ್ ಹಿರಿಯರ ಆಶಯದಂತೆ ಚುನಾವಣೆಯಲ್ಲಿ ಪೆನಲ್ ರಚನೆ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಹಕರ ಆಶಯದಂತೆ ನಾವು ಕರ್ತವ್ಯ ನಿರ್ವಹಿಸಿದ್ದೇವೆ ಎಂಬ ತೃಪ್ತಿಯಿದೆ.ಊರಿನ ಹಿರಿಯರು ಸೇರಿ ಕೈಗೊಳ್ಳುವ ತೀರ್ಮಾನದಂತೆ ನಾವು ಚುನಾವಣೆಗೆ ಸ್ಪರ್ಧೆ ಮಾಡುತ್ತೇವೆ.ಹಿರಿಯರು ಬ್ಯಾಂಕಿಗೆ ಎಂತಹ ಸದಸ್ಯರು ಬೇಕು ಎಂದು ನಿರ್ಣಯಿಸಿ ಮಾಡುವ ಪೆನಲ್ ಆಯ್ಕೆಗೆ ನಾವು ಶ್ರಮಿಸುತ್ತೇವೆ ಎಂದು ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸತೀಶಕುಮಾರ ಓಸ್ವಾಲ ಹೇಳಿದರು.

ಪಟ್ಟಣದ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಬ್ಯಾಂಕ್‌ನ್ನು ಕಟ್ಟಿ ಬೆಳೆಸುವಲ್ಲಿ ಹಲವು ಹಿರಿಯರ ಪರಿಶ್ರಮವಿದೆ.ಈ ಊರಿನ ವ್ಯಾಪಾರಸ್ಥರಿಗೆ, ಗ್ರಾಹಕರಿಗೆ, ಅನುಕೂಲವಾಗುವ ಸೇವೆಯನ್ನು ಬ್ಯಾಂಕಿನಿAದ ನೀಡಿದ್ದೇವೆ ಎಂಬ ತೃಪ್ತಿಯಿದೆ.ಎ.ಟಿ.ಎಂ ಸ್ಥಾಪನೆ ಕೆಲಸ ಪೂರ್ಣಗೊಳಿಸುವ ಪ್ರಕ್ರಿಯೆ ಬಾಕಿ ಉಳಿಯಿತು. ಜನರ ಪ್ರೀತಿ, ವಿಶ್ವಾಸ ನಂಬಿಕೆಯಿAದ ಬ್ಯಾಂಕ್‌ನ್ನು ಅಭಿವೃದ್ಧಿಯತ್ತ ಕೊಂಡೊಯ್ದಿದ್ದೇವೆ ಎಂದು ಹೇಳಿದರು.

ಈ ಸಲದ ಚುನಾವಣೆಯಲ್ಲಿ ಮತ್ತೊಮ್ಮೆ ಸ್ಪರ್ಧಿಸುವೀರಾ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಊರಿನ ಹಿರಿಯರು, ಬ್ಯಾಂಕಿನ ಹಿತೈಷಿಗಳು ರಚಿಸುವ ಪೆನಲ್‌ನಲ್ಲಿ ಅವಕಾಶ ಕಲ್ಪಿಸುವವರಿಗೆ ನಮ್ಮ ಸ್ಪರ್ಧೆಯ ನಿರ್ಧಾರ ಇದೆ ಎಂದು ಹೇಳಿದರು.

ನಿರ್ದೇಶಕರಾದ ವೆಂಕನಗೌಡ ಪಾಟೀಲ್, ಶಶಿಕಾಂತ ಮಾಲಗತ್ತಿ ಮಾತನಾಡಿ,
ಕರ್ನಾಟಕ ಬ್ಯಾಂಕ್‌ನ್ನು ಕಟ್ಟಿ ಬೆಳೆಸಿದ ಹಿರಿಯರ ನಂಬಿಕೆಗೆ ಪಾತ್ರವಾಗುವಂತೆ ಆಡಳಿತ ನಡೆಸಿದ್ದೇವೆ.ನಮ್ಮ ಅವಧಿಯಲ್ಲಿ ಹೂವಿನ ಹಿಪ್ಪರಗಿಯಲ್ಲಿ ಹೊಸ ಶಾಖೆ, ಮುದ್ದೇಬಿಹಾಳದಲ್ಲಿ ಜನರಿಗೆ ಉಪಯುಕ್ತವಾಗುವಂತಹ ಸಭಾಭವನ ನಿರ್ಮಾಣಕ್ಕೆ ಶ್ರಮಿಸಿದ್ದೇವೆ ಎಂದರು.

ಸಭೆಯಲ್ಲಿ ನಿರ್ದೇಶಕರಾದ ನಾಗಭೂಷಣ ನಾವದಗಿ, ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಮಲ್ಲಿಕಾರ್ಜುನ ಬಿದರಕುಂದಿ, ಗುರುಲಿಂಗಪ್ಪಗೌಡ ಪಾಟೀಲ್ ಮಾತನಾಡಿದರು. ಬ್ಯಾಂಕಿನ ಉಪಾಧ್ಯಕ್ಷ ಸಿ.ಎಲ್.ಬಿರಾದಾರ, ನಿರ್ದೇಶಕರಾದ ರವಿ ಕಮತ, ರಾಜಶೇಖರ ಕರಡ್ಡಿ, ಪ್ರಭುರಾಜ ಕಲ್ಬುರ್ಗಿ, ಸುನೀಲ ಇಲ್ಲೂರ, ಮುತ್ತಣ್ಣ ಕಡಿ ಮೊದಲಾದವರು ಇದ್ದರು.

ಇದೇ ವೇಳೆ ಮಾಜಿ ಸಿಎಂ ಎಸ್.ಎಂ.ಕೃಷ್ಣಾ ಅವರ ನಿಧನಕ್ಕೆ ಬ್ಯಾಂಕಿನ ಪರವಾಗಿ ಒಂದು ನಿಮಿಷ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

Latest News

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮುದ್ದೇಬಿಹಾಳ : ಮಕ್ಕಳ ಮನಸ್ಸಿನಲ್ಲಿ ಬಾಲ್ಯದಿಂದಲೇ ದೇಶಪ್ರೇಮದ ಬೀಜ ಬಿತ್ತಿ ಅವರನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಮುದ್ದೇಬಿಹಾಳ : ಕುಲಶಾಸ್ತ್ರಿಯ ಅಧ್ಯಯನದ ಕೊರತೆ, ಬಲಗೈ ಸಮುದಾಯದ ವಿರುದ್ಧ ದ್ವೇಷಪೂರಿತ ನಿರ್ಧಾರವಾಗಿರುವ ಒಳಮೀಸಲಾತಿ ಕೊಡುವ ಹಿನ್ನೆಲೆಯಲ್ಲಿ ನ್ಯಾ. ನಾಗಮೋಹನದಾಸ್ ನೀಡಿರುವ ವರದಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ತಾಲ್ಲೂಕು ಒಕ್ಕೂಟದ ನೇತೃತ್ವದಲ್ಲಿ ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಅಂಬೇಡ್ಕರ್ ಸರ್ಕಲ್‌ದಿಂದ ಆರಂಭಗೊಂಡ ಪ್ರತಿಭಟನೆ ಸಂಗೊಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ವೃತ್ತ, ತಹಸೀಲ್ದಾರ್ ಕಚೇರಿಗೆ ಆಗಮಿಸಿತು. ಮುಖಂಡ ಹರೀಶ ನಾಟೀಕಾರ, ಚೆನ್ನಪ್ಪ ವಿಜಯಕರ್