ದೆಹಲಿ: ಇತ್ತೀಚಿನ ದಿನಗಳಲ್ಲಿ ಆನ್ ಲೈನ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ದೇಶ ಅತಿ ದೊಡ್ಡ ರಾಷ್ಟ್ರೀಯ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ತನ್ನ ಗ್ರಾಹಕರಿಗೆ ಮಹತ್ವದ ಸೂಚನೆ ನೀಡಿದೆ.
Join Our Telegram: https://t.me/dcgkannada
ಈ ಕುರಿತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ತನ್ನ ಗ್ರಾಹಕರು ವಂಚನೆ ಬಗ್ಗೆ ಎಚ್ಚರದಿಂದ ಇರುವಂತೆ ಸೂಚಿಸಲಾಗಿದೆ. ಕ್ರೆಡಿಟ್/ಡೆಬಿಟ್ ಕಾರ್ಡ್‌ಗಳಿಗೆ ರಿವಾರ್ಡ್ ಪಾಯಿಂಟ್‌ಗಳನ್ನು ಪಡೆಯಲು, ಈ APK ಅನ್ನು ಡೌನ್‌ಲೋಡ್ ಮಾಡಿ & SMS/WhatsApp ಮೂಲಕ ಕಳುಹಿಸುವ ನಕಲಿ ಮಾಹಿತಿಯನ್ನು ನಂಬಬೇಡಿ ಎಂದು PIB ಹೊರಡಿಸಿದ ಎಚ್ಚರಿಕೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: Muda case: ಭಂಡತನ ಬಿಟ್ಟು ರಾಜೀನಾಮೆ ಕೊಡಿ: ಸಿಎಂ ಸಿದ್ದುಗೆ ವಿಜಯೇಂದ್ರ ಆಗ್ರಹ
SBI ಬ್ಯಾಂಕ್ ಅಂತಹ SMS/WhatsApp ಮಾಹಿತಿಯನ್ನು ಕಳುಹಿಸುವುದಿಲ್ಲ ಎಂದೂ ಸ್ಪಷ್ಟವಾಗಿ ತಿಳಿಸಿದೆ. ಗ್ರಾಹಕರು ಅನಗತ್ಯವಾಗಿ ಆಮಿಷಗಳಿಗೆ ಬಲಿಯಾಗಬಾರದು ವಿನಂತಿ ಮಾಡಿದೆ.
Muda case : ಸಿಎಂ ಸಿದ್ದರಾಮಯ್ಯ ರಾಜೀನಾಮೆ.. ಡಿಕೆಶಿ ಮಹತ್ವದ ಹೇಳಿಕೆ..
ಬೆಂಗಳೂರು : ಮುಡಾ ಪ್ರಕರಣ (Muda case)ದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ರಾಜೀನಾಮೆಗೆ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸುದ್ದಿಗೋಷ್ಠಿ ನಡೆಸಿ ಮಹತ್ವದ ಹೇಳಿಕೆ ನೀಡಿ, ಆದೇಶವೊಂದನ್ನು ಹೊರಡಿಸಿದ್ದಾರೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ಇಡೀ ರಾಜ್ಯದ್ಯಾಂತ ಕಾಂಗ್ರೆಸ್ ನ ಹೋರಾಟದ ಕಿಚ್ಚು ಭುಗಿಲೆದ್ದಿದೆ.
ಇನ್ನು, ರಾಜ್ಯಪಾಲರ ಈ ನಡೆಯನ್ನು ವಿರೋಧಿಸಿ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಆ.19ರಂದು ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುವಂತೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ.
ರಾಜ್ಯಪಾಲರು ಬಿಜೆಪಿ ಪರ ಧೋರಣೆ ಅನುಸರಿಸಿದ್ದು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಅಗತ್ಯ ಇಲ್ಲ. ಕಾಂಗ್ರೆಸ್ ಹೈಕಮಾಂಡ್ ಮತ್ತು ಎಲ್ಲಾ ಶಾಸಕರೂ ಸಿಎಂಗೆ ಬೆಂಬಲವಾಗಿ ನಿಂತು ಹೋರಾಟ ಮಾಡುತ್ತೆವೆ. ಈ ನಿಟ್ಟಿನಲ್ಲಿ ಆ.19ರಂದು ಪ್ರತಿಭಟನೆಗೆ ಕರೆ ಕೆಪಿಸಿಸಿಯಿಂದ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಾಸಿಕ್ಯೂಷನ್ ವಿರೋಧಿಸಿ ಈಗಾಗಲೇ ಸಿಎಂ ಬೆನ್ನಿಗೆ ಇರುವುದಾಗಿ ಸಚಿವ ಸಂಪುಟ, ಶಾಸಕರು ಮಾತ್ರವಲ್ಲ ಹೈಕಮಾಂಡ್ ನಾಯಕರು ಅಭಯ ನೀಡಿದ್ದಾರೆ. ಅಲ್ಲದೇ ಕಾನೂನು ಪ್ರಕಾರ ಹೋರಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದ್ದಾರೆ.