Seminar on Buddha, Basava and Ambedkar by Santosh Lad Foundation

ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ

ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ

ದಾವಣಗೆರೆ, ಜುಲೈ 13: ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ದಾವಣಗೆರೆಯ ತ್ರಿಶೂಲ ಭವನದಲ್ಲಿ ಹಮ್ಮಿಕೊಂಡಿದ್ದ ಬುದ್ಧ, ಬಸವ ಮತ್ತು ಅಂಬೇಡ್ಕರ: ಹೊಸ ದೃಷ್ಟಿಕೋನ ಕುರಿತು ಒಂದು ದಿನದ ವಿಚಾರ ಸಂಕಿರಣ ಅಭೂತಪೂರ್ವ ಯಶಸ್ಸು ಕಂಡಿತು.

ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ವಿಚಾರ ಸಂಕಿರಣ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಸಮಾರಂಭದಲ್ಲಿ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಗಳು, ತರಳಬಾಳು ಪಂಡಿತಾರಾದ್ಯ ಶಿವಾಚಾರ್ಯ ಸ್ವಾಮೀಜಿ, ಕಾಗಿನೆಲೆ ಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಶಾಂತವೀರ ಮಹಾಸ್ವಾಮೀಜಿ, ಮಾದಾರ ಚೆನ್ನಯ್ಯ ಸ್ವಾಮೀಜಿ, ಪುರುಷೋತ್ತಮಾನಂದ ಸ್ವಾಮೀಜಿ, ಮುರುಘೇಂದ್ರ ಸ್ವಾಮೀಜಿ, ಬಸವಾನಂದ ಸ್ವಾಮೀಜಿ, ಬಸವ ಶಾಂತಲಿಂಗ ಸ್ವಾಮೀಜಿ, ಚೆನ್ನಮಲ್ಲಿಕಾರ್ಜುನ ಸ್ವಾಮೀಜಿ, ಬಸವಪ್ರಭು ಸ್ವಾಮೀಜಿ ಹಾಗೂ ಹಡಪದ ಗುರುಪೀಠ, ಅಂಬಿಗರ ಗುರುಪೀಠದ, ಮೇದಾರ ಗುರುಪೀಠ, ಹೆಳವ ಗುರುಪೀಠದ, ನೇಕಾರ ಗುರುಪೀಠದ ಸ್ವಾಮೀಜಿಗಳು, ಶಾಸಕರಾದ ಶ್ರೀ ಕೆ ಎಸ್‌ ಬಸವಂತಪ್ಪ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು.

ಶಂಭುಹೆಗಡೆ, ವಿನಯಾ ಒಕ್ಕುಂದ, ರಂಜಾನ್‌ ದರ್ಗಾ, ಡಾ. ಎಂ ವಿಶ್ವನಾಥ್‌, ಡಾ. ಅನಸೂಯ ಕಾಂಬ್ಳೆ, ಸಂಜೀವ ಕುಲಕರ್ಣಿ ಸೇರಿದಂತೆ ಒಂಬತ್ತು ಮಂದಿ ತಜ್ಞರು ಬುದ್ಧ, ಬಸವ ಹಾಗೂ ಅಂಬೇಡ್ಕರ್‌ ಕುರಿತು ವಿವಿಧ ವಿಷಯಗಳನ್ನು ಮಂಡಿಸಿದರು.

ಸಮಾರೋಪ ಸಮಾರಂಭ: ಸಂಜೆ ನಡೆದ ಸಮಾರಂಭದಲ್ಲಿ ವಿವಿಧ ಮಠಾಧೀಶರು ಉಪಸ್ಥಿತರಿದ್ದು ಮಾತನಾಡಿದರು. ಸಚಿವ ಸಂತೋಷ್‌ ಲಾಡ್‌ ಅವರು, ಧನ್ಯವಾದಗಳನ್ನು ಸಮರ್ಪಿಸಿದರು.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ