T20 World Cup 2026 ಏಳು ಆಟಗಾರರು ಔಟ್!

T20 World Cup 2026 ಏಳು ಆಟಗಾರರು ಔಟ್!

T20 World Cup 2026: ಟಿ20 ವಿಶ್ವಕಪ್​​ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ 7 ಆಟಗಾರರು ಕಾಣಿಸಿಕೊಂಡಿಲ್ಲ. ಅಂದರೆ 2024 ರಲ್ಲಿ ಟೀಮ್ ಇಂಡಿಯಾ ಪರ ಟಿ20 ವಿಶ್ವಕಪ್ ಆಡಿದ ಏಳು ಪ್ಲೇಯರ್ಸ್ ಈ ಬಾರಿ ತಂಡದಲ್ಲಿಲ್ಲ. ಹೀಗೆ ಭಾರತ ಟಿ20 ವಿಶ್ವಕಪ್ ತಂಡದಿಂದ ಹೊರಬಿದ್ದಿರುವ ಆಟಗಾರರು ಯಾರೆಂದರೆ…?

ಯಶಸ್ವಿ ಜೈಸ್ವಾಲ್: 2024 ಟಿ20 ವಿಶ್ವಕಪ್​ ತಂಡದಲ್ಲಿ ಹೆಚ್ಚುವರಿ ಆರಂಭಿಕ ದಾಂಡಿಗನಾಗಿ ಯಶಸ್ವಿ ಜೈಸ್ವಾಲ್ ಕಾಣಿಸಿಕೊಂಡಿದ್ದರು. ಎರಡು ವರ್ಷಗಳ ಹಿಂದೆ 15 ಸದಸ್ಯರುಗಳ ಬಳಗದಲ್ಲಿದ್ದ ಜೈಸ್ವಾಲ್​ ಮುಂಬರುವ ಟಿ20 ವಿಶ್ವಕಪ್​ಗೆ ಆಯ್ಕೆಯಾಗಿಲ್ಲ.

ರಿಷಭ್ ಪಂತ್: ಕಳೆದ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪರ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಣಕ್ಕಿಳಿದಿದ್ದ ರಿಷಭ್ ಪಂತ್ ಅವರನ್ನು ಸಹ ಈ ಬಾರಿ ಕೈ ಬಿಡಲಾಗಿದೆ. ಅವರ ಬದಲಿಗೆ ಈ ಬಾರಿ ಭಾರತ ತಂಡದಲ್ಲಿ ವಿಕೆಟ್ ಕೀಪರ್​​ಗಳಾಗಿ ಆಯ್ಕೆಯಾಗಿರುವುದು ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್.

ಯುಜ್ವೇಂದ್ರ ಚಹಲ್: ಟಿ20 ವಿಶ್ವಕಪ್ 2024 ರಲ್ಲಿ ಭಾರತ ತಂಡದಲ್ಲಿ ಸ್ಪಿನ್ನರ್ ಆಗಿ ಯುಜ್ವೇಂದ್ರ ಚಹಲ್ ಕಾಣಿಸಿಕೊಂಡಿದ್ದರು. ಇದಾಗ್ಯೂ ಅವರಿಗೆ ಆಡುವ ಬಳಗದಲ್ಲಿ ಸ್ಥಾನ ಲಭಿಸಿರಲಿಲ್ಲ. ಇದೀಗ ಮುಂಬರುವ ಟಿ20 ವಿಶ್ವಕಪ್​ಗೆ ಆಯ್ಕೆ ಮಾಡಲಾದ ತಂಡದಲ್ಲಿ ಚಹಲ್​ಗೆ ಸ್ಥಾನ ನೀಡಲಾಗಿಲ್ಲ.

ಮೊಹಮ್ಮದ್ ಸಿರಾಜ್: 2024ರ ಟಿ20 ವಿಶ್ವಕಪ್​ನಲ್ಲಿ ಜಸ್​ಪ್ರೀತ್ ಬುಮ್ರಾ ಜೊತೆಗೂಡಿ ಮೊಹಮ್ಮದ್ ಸಿರಾಜ್ ಕೂಡ ದಾಳಿ ಸಂಘಟಿಸಿದ್ದರು. ಆದರೆ ಈ ಬಾರಿ ಟೀಮ್ ಇಂಡಿಯಾದ 15 ಸದಸ್ಯರುಗಳ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಸಿರಾಜ್ ವಿಫಲರಾಗಿದ್ದಾರೆ.

ರೋಹಿತ್ ಶರ್ಮಾ: ಟಿ20 ವಿಶ್ವಕಪ್ 2024 ರಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದು ರೋಹಿತ್ ಶರ್ಮಾ. ಹಿಟ್​ಮ್ಯಾನ್ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರಿತ್ತು. ಭಾರತ ತಂಡವು ಚಾಂಪಿಯನ್ ಪಟ್ಟಕ್ಕೇರಿದ ಬೆನ್ನಲ್ಲೇ ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಹೀಗಾಗಿ ಈ ಬಾರಿಯ ಭಾರತ ತಂಡದಲ್ಲಿ ಅವರು ಕಾಣಿಸಿಕೊಂಡಿಲ್ಲ.

ವಿರಾಟ್ ಕೊಹ್ಲಿ: ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರಿದ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಮತ್ತೋರ್ವ ಆಟಗಾರ ವಿರಾಟ್ ಕೊಹ್ಲಿ. 2024 ರ ಟಿ20 ವಿಶ್ವಕಪ್​ ಫೈನಲ್ ಪಂದ್ಯದೊಂದಿಗೆ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದರು. ಹೀಗಾಗಿ ಅವರು ಸಹ ಪ್ರಸ್ತುತ ಟಿ20 ತಂಡದಲ್ಲಿ ಕಾಣಿಸಿಕೊಂಡಿಲ್ಲ.

ರವೀಂದ್ರ ಜಡೇಜಾ: ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಬಳಿಕ ಟಿ20 ವಿಶ್ವಕಪ್ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಮೂರನೇ ಆಟಗಾರ ರವೀಂದ್ರ ಜಡೇಜಾ. 2024 ರಲ್ಲಿ ಭಾರತ ತಂಡ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಜಡ್ಡು ಸದ್ಯ ಟೆಸ್ಟ್ ಹಾಗೂ ಏಕದಿನ ತಂಡಗಳಲ್ಲಿ ಮಾತ್ರ ಮುಂದುವರೆದಿದ್ದಾರೆ. ಹೀಗಾಗಿ ಅವರು ಸಹ 2026ರ ಟಿ20 ವಿಶ್ವಕಪ್ ತಂಡದಲ್ಲಿ ಕಾಣಿಸಿಕೊಂಡಿಲ್ಲ.

2026ರ ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

Latest News

T20 World Cup 2026 ಏಳು ಆಟಗಾರರು ಔಟ್!

T20 World Cup 2026 ಏಳು ಆಟಗಾರರು ಔಟ್!

T20 World Cup 2026: ಟಿ20 ವಿಶ್ವಕಪ್​​ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ

Good News: Gruha Lakshmi ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವೆ Lakshmi Hebbalkar ​​

Good News: Gruha Lakshmi ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವೆ Lakshmi Hebbalkar ​​

ಬೆಳಗಾವಿ: ಗೃಹಲಕ್ಷ್ಮೀ ಯೋಜನೆಯ (Gruha Lakshmi) ಹಣ ಬಿಡುಗಡೆ ವಿಚಾರವಾಗಿ ಇತ್ತೀಚೆಗೆ ಅಧಿವೇಶನದಲ್ಲಿ ಚರ್ಚೆಗೆ

BREAKING: ರೈಲ್ವೆ ಪ್ರಯಾಣಿಕರಿಗೆ ಬಿಗ್‌ಶಾಕ್‌; ಟಿಕೇಟ್‌ ದರದಲ್ಲಿ (Train ticket rate) ಭಾರೀ ಹೆಚ್ಚಳ

BREAKING: ರೈಲ್ವೆ ಪ್ರಯಾಣಿಕರಿಗೆ ಬಿಗ್‌ಶಾಕ್‌; ಟಿಕೇಟ್‌ ದರದಲ್ಲಿ (Train ticket rate) ಭಾರೀ ಹೆಚ್ಚಳ

ನವದೆಹಲಿ: ಡಿಸೆಂಬರ್ 26 ರಿಂದ ರೈಲ್ವೇ ಪ್ರಯಾಣ ದರ ಏರಿಕೆಯನ್ನು ಜಾರಿಗೆ ತರುವುದರಿಂದ ರೈಲು

DCM DK Shivakumar – ಮಾಜಿ ಸಚಿವ KN Rajanna ಭೇಟಿ; ರಾಜಕೀಯ ಸಂಚಲನ

DCM DK Shivakumar – ಮಾಜಿ ಸಚಿವ KN Rajanna ಭೇಟಿ; ರಾಜಕೀಯ ಸಂಚಲನ

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಸಿಎಂ ಬದಲಾವಣೆ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ, ಸಿದ್ದರಾಮಯ್ಯ ಅವರ ಆಪ್ತರಾದ

ಸೂಕ್ತ ಸಮಯದಲ್ಲಿ ಹೈಕಮಾಂಡ್ ಕರೆ; ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

ಸೂಕ್ತ ಸಮಯದಲ್ಲಿ ಹೈಕಮಾಂಡ್ ಕರೆ; ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

ಬೆಂಗಳೂರು: “ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ದೆಹಲಿ ನಾಯಕರು ನಿಮಗೆ ಆಹ್ವಾನ ನೀಡಿದ್ದಾರಾ ಎಂದು ಕೇಳಿದಾಗ ಈ ರೀತಿ ಉತ್ತರಿಸಿದರು. “ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ

ಡಿ.24 ರಂದು ದಲಿತ ಚಳವಳಿಯ ನಾಯಕ ಡಿ.ಬಿ.ಮುದೂರ ನುಡಿನಮನ

ಡಿ.24 ರಂದು ದಲಿತ ಚಳವಳಿಯ ನಾಯಕ ಡಿ.ಬಿ.ಮುದೂರ ನುಡಿನಮನ

ಮುದ್ದೇಬಿಹಾಳ ; ಕರ್ನಾಟಕ ದಲಿತ ಸಂಘರ್ಷ ಸಮೀತಿ ರಾಜ್ಯ ಸಂಘಟನಾ ಸಂಚಾಲಕ ಡಿ.ಬಿ.ಮುದೂರ ಅವರ ನುಡಿನಮನ ಕಾರ್ಯಕ್ರಮ ಡಿ.24 ರಂದು ಬೆಳಗ್ಗೆ 10.30ಕ್ಕೆ ಇಲ್ಲಿನ ಹುಡ್ಕೋದ ಟಾಪ್ ಇನ್ ಟೌನ್ ಫಂಕ್ಷನ್ ಹಾಲ್‌ದಲ್ಲಿ ಹಮ್ಮಿಕೊಳ್ಳಲಾಗಿದೆ. ಬಾಗಲಕೋಟ ಬುದ್ಧವಿಹಾರದ ಧಮ್ಮಪಾಲ ಬಂತೇಜಿ, ಅಂಕಲಿಮಠದ ವೀರಭದ್ರ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು.ಸಂಸದ ರಮೇಶ ಜಿಗಜಿಣಗಿ , ಶಾಸಕ ಸಿ.ಎಸ್.ನಾಡಗೌಡ, ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಾಜಿ ಶಾಸಕಿ ನಂದಿನಿ ದೇಶಮುಖ,ಮಾಜಿ