Shakti Yojana: Rs 88.43 crore income, 2.24 crore women travel

ಶಕ್ತಿ ಯೋಜನೆ : 88.43 ಕೋಟಿ ರೂ.ಆದಾಯ, 2.24 ಕೋಟಿ ಮಹಿಳೆಯರ ಪ್ರಯಾಣ

ಶಕ್ತಿ ಯೋಜನೆ : 88.43 ಕೋಟಿ ರೂ.ಆದಾಯ, 2.24 ಕೋಟಿ ಮಹಿಳೆಯರ ಪ್ರಯಾಣ

ಮುದ್ದೇಬಿಹಾಳ : ಸಾರಿಗೆ ಘಟಕದಿಂದ ಶಕ್ತಿ ಯೋಜನೆ ಆರಂಭದಿಂದ ಈವರೆಗೂ 2.24 ಕೋಟಿ ಮಹಿಳೆಯರು ಪ್ರಯಾಣಿಸಿದ್ದು 88.43 ಕೋಟಿ ರೂ.ಆದಾಯ ತಂದು ಕೊಟ್ಟಿದ್ದಾರೆ ಎಂದು ಸಾರಿಗೆ ಘಟಕ ವ್ಯವಸ್ಥಾಪಕ ಎ. ಎಚ್. ಮದಭಾವಿ ಹೇಳಿದರು.

ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಶಕ್ತಿ ಯೋಜನೆಯಡಿ ರಾಜ್ಯದಲ್ಲಿ 500ಕೋಟಿ ಮಹಿಳೆಯರು ಪ್ರಯಾಣಿಸಿದ ಹಿನ್ನೆಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಸ್‌ನ ಪೂಜಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗ್ಯಾರಂಟಿ ಅನುಷ್ಠಾನ ಸಮೀತಿ ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ, ಜಿಲ್ಲಾ ಉಪಾಧ್ಯಕ್ಷ ಸದ್ದಾಂ ಕುಂಟೋಜಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಪುರಸಭೆ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಶೆಳ್ಳಗಿ ಗ್ಯಾರಂಟಿ ಸಮಿತಿಯ ಪದಾಧಿಕಾರಿಗಳು ಇದ್ದರು.ಇದೇ ವೇಳೆ ಘಟಕ ವ್ಯವಸ್ಥಾಪಕ ಎ.ಎಚ್.ಮದಭಾವಿ ಅವರಿಗೆ ಸನ್ಮಾನಿಸಿದರು.

Latest News

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮುದ್ದೇಬಿಹಾಳ : ಮಕ್ಕಳ ಮನಸ್ಸಿನಲ್ಲಿ ಬಾಲ್ಯದಿಂದಲೇ ದೇಶಪ್ರೇಮದ ಬೀಜ ಬಿತ್ತಿ ಅವರನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಮುದ್ದೇಬಿಹಾಳ : ಕುಲಶಾಸ್ತ್ರಿಯ ಅಧ್ಯಯನದ ಕೊರತೆ, ಬಲಗೈ ಸಮುದಾಯದ ವಿರುದ್ಧ ದ್ವೇಷಪೂರಿತ ನಿರ್ಧಾರವಾಗಿರುವ ಒಳಮೀಸಲಾತಿ ಕೊಡುವ ಹಿನ್ನೆಲೆಯಲ್ಲಿ ನ್ಯಾ. ನಾಗಮೋಹನದಾಸ್ ನೀಡಿರುವ ವರದಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ತಾಲ್ಲೂಕು ಒಕ್ಕೂಟದ ನೇತೃತ್ವದಲ್ಲಿ ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಅಂಬೇಡ್ಕರ್ ಸರ್ಕಲ್‌ದಿಂದ ಆರಂಭಗೊಂಡ ಪ್ರತಿಭಟನೆ ಸಂಗೊಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ವೃತ್ತ, ತಹಸೀಲ್ದಾರ್ ಕಚೇರಿಗೆ ಆಗಮಿಸಿತು. ಮುಖಂಡ ಹರೀಶ ನಾಟೀಕಾರ, ಚೆನ್ನಪ್ಪ ವಿಜಯಕರ್