ಮುದ್ದೇಬಿಹಾಳ : ಜೂ.27 ರಿಂದ ಮೊಹರಂ ಹಬ್ಬದ ಆಚರಣೆ ಆರಂಭಗೊಳ್ಳಲಿದ್ದು ಶಾಂತಿಯುತವಾಗಿ ಆಚರಿಸುವಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮೊಹರಂ ಶಾಂತಿಸಭೆಯಲ್ಲಿ ಅವರು ಮಾತನಾಡಿದರು.
ಜೂ.27 ರಂದು ಮೊಹರಂ ಹಬ್ಬದ ಆಚರಣೆ ಆರಂಭಗೊಂಡು 29 ರಂದು ದಫನ್ ಮಾಡಲಾಗುತ್ತದೆ. ಈ ಸಮಯದಲ್ಲಿ ಅಲಾಯ್ ದೇವರುಗಳನ್ನು ಪ್ರತಿಷ್ಠಾಪಿಸುವ ಸಮಿತಿಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು.
ಮೊಹರಂ ಹಬ್ಬ ಭಾವೈಕ್ಯತೆಯ ಸಂಕೇತವಾಗಿದ್ದು ಉಭಯ ದರ್ಮೀಯರು ಸೌಹಾರ್ದತೆಯಿಂದ ಹಬ್ಬದಾಚರಣೆ ಮಾಡುವಂತೆ ಸಲಹೆ ಮಾಡಿದರು. ಮುಖಂಡ ಹಾಫೀಜ ಪಡೇಕನೂರ ಮಾತನಾಡಿದರು. ಪಟ್ಟಣದ ವಿವಿಧ ಸಮಾಜದ ಮುಖಂಡರು ಪಾಲ್ಗೊಂಡಿದ್ದರು.