ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ ಮಾರ್ಗದರ್ಶನ ಸಿಬ್ಬಂದಿ ವರ್ಗದವರ ನಿರಂತರ ಪರಿಶ್ರಮದಿಂದ ಬ್ಯಾಂಕಿಗೆ 1.15 ಕೋಟಿ ರೂ.ಲಾಭ ಗಳಿಸಿದೆ ಎಂದು ನಾಲತವಾಡದ ಶ್ರೀ ಶರಣ ವೀರೇಶ್ವರ ಪಟ್ಟಣ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಎಂ.ಎಸ್.ಪಾಟೀಲ ಹೇಳಿದರು.

ಇಲ್ಲಿಯ ರತ್ನ ಸಂಗಮ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ಸಂಘದ 30ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಂಘವು ಸುಮಾರು ಇಲ್ಲಿಯವರೆಗೆ 114 ಕೋಟಿ ರೂ. ಮಿಕ್ಕಿ ವ್ಯವಹಾರ ನಡೆಸಿದ್ದು 1.15 ರೂ.ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ 12 ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.ಇಲ್ಲಿಯವರೆಗೆ ಬ್ಯಾಂಕ್ 199.50 ಕೋಟಿ ರೂ. ಠೇವಣಿ ಹೊಂದಿದ್ದು 114 ಕೋಟಿ ಸಾಲ ನೀಡಿದೆ. 99 ಕೋಟಿ ರೂ. ವಿವಿಧ ಕಡೆಗಳಲ್ಲಿ ಹೂಡಿಕೆ ಇದೆ ಎಂದು ತಿಳಿಸಿದರು.

ಸಂಘದ ಪ್ರಧಾನ ವ್ಯವಸ್ಥಾಪಕ ನಾಗರಾಜ ಗಂಗನಗೌಡರ ಮಾತನಾಡಿ, ಬ್ಯಾಂಕಿನ ಪ್ರಧಾನ ಕಚೇರಿ ಹಾಗೂ ಮುದ್ದೇಬಿಹಾಳ ಶಾಖೆಗಳು ಸ್ವಂತ ನಿವೇಶನ, ಕಟ್ಟಡ ಹೊಂದಿದ್ದು, ಪ್ರಧಾನ ಕಟ್ಟಡದ ನವೀಕರಣ ಮಾಡಲಾಗಿದೆ. ಸದಸ್ಯರ ಸ್ವಾವಲಂಬಿ ಬದುಕಿಗೆ ಆರ್ಥಿಕ ಶಕ್ತಿ ನೀಡುವ ಜೊತೆಗೆ ಶಿಕ್ಷಣ, ಆರೋಗ್ಯ ಸೇವೆ, ಮಾಹಿತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದ ಸೃಷ್ಟಿ ಸಿದ್ದನಗೌಡ ಪಾಟೀಲ, ದ್ವಿತೀಯ ರ‍್ಯಾಂಕ್ ಪಡೆದ ಪಡೆದ ಪೂಜಾ ಈರಪ್ಪ ಲಮಾಣಿ, ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಅಮರೇಶ ಶರಣಪ್ಪ ಟಕ್ಕಳಕಿ, ಸೃಷ್ಟಿ ಅ.ದೇಶಮುಖ ಸೇರಿದಂತೆ ಎಂಟು ಜನ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಗೌರವಿಸಲಾಯಿತು.

ನಾಲತವಾಡ, ಹುಣಸಗಿ, ಮುದ್ದೇಬಿಹಾಳ, ಲಿಂಗಸೂಗೂರು, ತಾಳಿಕೋಟಿ ಶಾಖೆಗಳ ಉತ್ತಮ ಗ್ರಾಹಕರನ್ನು, ಸಾಧಕರನ್ನು ಸನ್ಮಾನಿಸಲಾಯಿತು.ಪ್ರಾಸ್ತಾವಿಕವಾಗಿ ಸಂಗಣ್ಣ ಹಡಲಗೇರಿ ಮಾತನಾಡಿದರು. ಬ್ಯಾಂಕಿನ ಉಪಾಧ್ಯಕ್ಷ ಎಂ.ಬಿ.ಅoಗಡಿ, ಬಸವರಾಜ ಎಂ.ತಾಳಿಕೋಟಿ ವಕೀಲರು,ಕುಮಾರ ಚಿಂಚೋಳಿ,ಬಿ.ಎ.ಗAಗನಗೌಡ, ಶಿವಪುತ್ರಯ್ಯ ಸ್ಥಾವರಮಠ, ಕೆ.ಆರ್.ಎತ್ತಿನಮನಿ, ಬಿ.ಟಿ.ತಿರಮುಖೆ,ಎಸ್.ಸಿ.ನಾಗರದಿನ್ನಿ,ಜಿ.ಎಸ್.ಗಡೇದ,ಬಿ.ಎಚ್.ಹಟ್ಟಿ,ಎಸ್.ಸಿ.ದೇಶಮುಖ,ಬಿ.ಎಸ್.ಪಾಟೀಲ,ಐ.ಬಿ.ಚಿನಿವಾರ, ಎಸ್.ಎಸ್.ಮಣ್ಣೂರ,ಸಂಗಣ್ಣ ವೈಲಿ,ಪ್ರಕಾಶ ಅಂಗಡಿ, ಶಶಿಧರ ಬೆಣ್ಣೂರ ಇದ್ದರು.

Latest News

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಸಮೀತಿ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ ಸ್ಥಾಪಿಸುವ ಯತ್ನ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸಿರುವುದಾಗಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ,ಕಮೀಟಿಗೆ ಸ್ಪರ್ಧಿಸಿರುವ ಅಬ್ದುಲಗಫೂರ ಮಕಾನದಾರ ಹೇಳಿದರು. ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1936ರಲ್ಲಿ ಇಲ್ಲಿನ ಅಂಜುಮನ್ ಸಂಸ್ಥೆಯನ್ನು ಹಿರಿಯರು ಹುಟ್ಟು ಹಾಕಿದ್ದಾರೆ.ಅಂಜುಮನ್ ಸಂಸ್ಥೆಯ ಬೆಳವಣಿಗೆಯಲ್ಲಿ ಹಿಂದೂ ಬಾಂಧವರ ಸಹಕಾರವೂ ಇತ್ತು.ಆದರೆ ಕಾರಣಾಂತರಗಳಿAದ ಸಂಸ್ಥೆಯ ಅಭಿವೃದ್ಧಿ ಕುಂಠಿತಗoಡಿದೆ. ಹೊಸಬರು,ಒಳ್ಳೆಯವರ ಆಯ್ಕೆಗೆ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ ಪ್ರತಿ ಎಕರೆ ಜಮೀನಿಗೆ 50 ಸಾವಿರ ರೂ.ಬರ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ ಆಗ್ರಹಿಸಿದರು. ಬಿಜೆಪಿ ನಿಯೋಗದಿಂದ ಬರ ಅಧ್ಯಯನ ಪ್ರವಾಸ ನಡೆಸುವ ಮುನ್ನ ತಾಲ್ಲೂಕಿನ ಕುಂಟೋಜಿ ಬಸವೇಶ್ವರ ದೇವಸ್ಥಾನದಲ್ಲಿ ಗುರುವಾರ ರೈತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಕೇವಲ ಕೇಂದ್ರದತ್ತ ಬೆರಳು ಮಾಡದೇ