Share in Diesel Cess to Unorganized Workers Council: Minister Santosh S Lad

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಕಾರವಾರ, ಜು.29 :- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ವಿಧಿಸುತ್ತಿರುವ ಸುಂಕದಲ್ಲಿನ ಸ್ವಲ್ಪ ಮೊತ್ತವನ್ನು ಅಸಂಘಟಿತ ಕಾರ್ಮಿಕರ ಮಂಡಳಿಗೆ ನೀಡುವಂತೆ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್ ಲಾಡ್ ತಿಳಿಸಿದರು.

ಇಲ್ಲಿನ ಅಜ್ಜಿ ಓಷಿಯನ್ ಹೋಟೆಲ್ ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ʼಸ್ಮಾರ್ಟ್ ಕಾರ್ಡ್ʼ ವಿತರಣೆ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಸಂಘಟಿತ ವಲಯದ ಕಾರ್ಮಿಕರು ಆರ್ಥಿಕ ಮತ್ತು ಸಾಮಾಜಿಕವಾಗಿ ದುರ್ಬಲರಾಗಿದ್ದು, ಸಂಘಟಿತ ಕಾರ್ಮಿಕರಿಗೆ ದೊರೆಯುವ ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಇವರಿಗೆ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ ಸಾಮಾಜಿಕ ಭದ್ರತಾ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಈ ಮಂಡಳಿಗೆ ಹೆಚ್ಚಿನ ಆರ್ಥಿಕ ನೆರವು ಒದಗಿಸುವ ಉದ್ದೇಶದಿಂದ ರಾಜ್ಯದಲ್ಲಿನ ಡೀಸೆಲ್ ಹಾಗೂ ಪೆಟ್ರೋಲ್ ಮೇಲೆ ವಿಧಿಸುತ್ತಿರುವ ಸುಂಕದಲ್ಲಿನ ನಿರ್ದಿಷ್ಟ ಮೊತ್ತವನ್ನು ವರ್ಗಾಯಿಸುವ ಕುರಿತು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗುವುದು. ಈ ವರ್ಗದ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಗರಿಷ್ಠ ನೆರವು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಈಗಾಗಲೇ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ, ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ, ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ದೇಶದಲ್ಲೇ ಪ್ರಥಮ ಬಾರಿಗೆ ಇ ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗಾಗಿ ಗಿಗ್ ಕಾರ್ಮಿಕರ ವಿಮಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಸಿನಿಮಾ ಮತ್ತು ಸಾಂಸ್ಕತಿಕ ಚವಟುವಟಿಕೆಗಳಲ್ಲಿ ತೊಡಗಿರುವ ಕಾರ್ಮಿಕರ ಸುಂಕ ಅಧಿನಿಯಮ, ಕರ್ನಾಟಕ ಪ್ಲಾಟ್ ಫಾರ್ಮ್‌ ಆಧಾರಿತ ಗಿಗ್ ಕಾರ್ಮಿಕರ ಅಧಿನಿಯಮ ಮತ್ತು ಕರ್ನಾಟಕ ಗೃಹ ಕಾರ್ಮಿಕರ ಅಧಿನಿಯಮ ರೂಪಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.

ರಾಜ್ಯದಲ್ಲಿ ಕಾರ್ಮಿಕರ ಮಕ್ಕಳಿಗಾಗಿ 6 ರಿಂದ 12 ತರಗತಿಯವರಿಗೆ ಉಚಿತ ಶಿಕ್ಷಣ ನಿಡುವ ಶಾಲೆಗಳನ್ನು ತೆರೆಯಲಾಗುತ್ತಿದ್ದು, ಪ್ರತೀ ಜಿಲ್ಲೆಗೊಂದು ಈ ಶಾಲೆಗಳನ್ನು ತೆರೆಯುವ ಬಗ್ಗೆ ಮುಖ್ಯಮಂತ್ರಿಗಳ ಬಗ್ಗೆ ಚರ್ಚಿಸುವುದಾಗಿ ತಿಳಿಸಿದ ಸಚಿವರು, ಕನಿಷ್ಠ ವೇತನ ಪಾವತಿಯನ್ನು ಕಡ್ಡಾ ಯಗೊಳಿಸಿದ್ದು ಈ ಬಗ್ಗೆ ದೂರುಗಳಿದ್ದಲ್ಲಿ ಲಿಖಿತವಾಗಿ ನೇರವಾಗಿ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಸಲ್ಲಿ ಸಬೇಕು, ರಾಜ್ಯದಲ್ಲಿನ ಸರ್ಕಾರಿ ಇಲಾಖೆಗಳಲ್ಲಿನ ಹೊರಗುತ್ತಿಗೆ ನೌಕರರ ನೇಮಕಾತಿಗಾಗಿ ಜಿಲ್ಲಾ ಮಟ್ಟದಲ್ಲಿ ಸೊಸೈಟಿಗಳನ್ನು ರಚಿಸಲಾಗುತ್ತಿದೆ, ನಿರ್ದಿಷ್ಟ ಅವಧಿಗೆ ಸೇವೆ ಸಲ್ಲಿಸಿದ ನೌಕರರರಿಗೆ ಗ್ಯಾಚ್ಯುಯಿಟಿ ಮತ್ತು ಕಡ್ಡಾಯವಾಗಿ ವಿಮೆ ಮಾಡಿಸುವ ಕುರಿತಂತೆ ನಿಯಮಗಳನ್ನು ರೂಪಿಸಲಾಗುತ್ತಿದ್ದು, ರಾಜ್ಯದಲ್ಲಿ ಕಾರ್ಮಿಕರ ಕಲ್ಯಾಣಕ್ಕೆ ಪೂರಕವಾದ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಸಮಾರಂಭದಲ್ಲಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಹಾಗೂ ಶಾಸಕ ಸತೀಶ್ ಸೈಲ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕೇರಳದ ಮಂಜೇಶ್ವರ ಶಾಸಕ ಅಶ್ಪಾಕ್, ನಗರಸಭೆ ಅಧ್ಯಕ್ಷ ರವಿರಾಜ್ ಅಂಕೊಲೆಕರ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ ರಾಣೆ, ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಪ್‌ ಶಶಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ದೀಪನ್, ಧಾರವಾಡ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಸಚಿನ್ ವೈ ಹಳೇಮನಿ, ಅಸಂಘಟಿತ
ಕಾರ್ಮಿಕ ಮಂಡಳಿಯ ಸಹಾಯಕ ಕಾರ್ಮಿಕ ಆಯುಕ್ತೆ ಮೀನಾ ಪಾಟೀಲ್, ಬೆಳಗಾವಿ ವಿಭಾಗದ ಉಪ ಕಾರ್ಮಿಕ ಆಯುಕ್ತ ನಾಗೇಶ್, ಜಿಲ್ಲಾ ಕಾರ್ಮಿಕ ಅಧಿಕಾರಿ ಲಲಿತಾ ಸಾತೇನಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು