Rape in broad daylight in the middle of the road

Shocking news: ಕೋಲಾರದ ಮುನಿಯಪ್ಪನ ಮೊಬೈಲ್ ನಲ್ಲಿ ಹೆಣ್ಮಕ್ಕಳ 5000ಕ್ಕೂ ಹೆಚ್ಚು ನಗ್ನ ದೃಶ್ಯಗಳು!

Shocking news: ಕೋಲಾರದ ಮುನಿಯಪ್ಪನ ಮೊಬೈಲ್ ನಲ್ಲಿ ಹೆಣ್ಮಕ್ಕಳ 5000ಕ್ಕೂ ಹೆಚ್ಚು ನಗ್ನ ದೃಶ್ಯಗಳು!

ಕೋಲಾರ: ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯೊಂದರಲ್ಲಿ ಬಾಲಕಿಯರು ಬಟ್ಟೆ ಬದಲಿಸುವ ಸಮಯದ 5000ಕ್ಕೂ ಹೆಚ್ಚು ಫೋಟೋ ಹಾಗೂ ನೂರಾರು ವಿಡಿಯೋ ಸೆರೆಹಿಡಿದ ಆರೋಪ ಕೇಳಿ ಬಂದಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಪೋಕೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿಯಲ್ಲಿ ಚಿತ್ರಕಲಾ ಶಿಕ್ಷಕನೊಬ್ಬನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ಪ್ರಕರಣ ಸಂಬಂಧ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಚಿತ್ರಕಲಾ ಶಿಕ್ಷಕ ಮುನಿಯಪ್ಪ (46) ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಸಾರಾಸಗಟಾಗಿ ತಿರಸ್ಕರಿಸಿದೆ.

ಪೋಕೋ ಕಾಯ್ದೆ ಸೆಕ್ಷನ್ 11 ಪ್ರಕಾರ, ಮಕ್ಕಳ ದೇಹ ಅಥವಾ ದೇಹದ ಯಾವುದೇ ಭಾಗವನ್ನು ಅಸಭ್ಯ ರೀತಿಯಲ್ಲಿ ಪ್ರದರ್ಶಿಸು ವುದು ಲೈಂಗಿಕ ಕಿರುಕುಳವಾಗುತ್ತದೆ. ಈ ಅಪರಾಧವು ಕಾಯ್ದೆಯ ಸೆಕ್ಷನ್ 12ರಡಿ ಶಿಕ್ಷಾರ್ಹವಾಗಿದೆ.

ಪ್ರಕರಣದ ತನಿಖೆ ಮತ್ತು ವಿಧಿವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ದಾಖಲೆಗಳ ಪ್ರಕಾರ, ಅರ್ಜಿದಾರ ಐದು ಮೊಬೈಲ್ ಫೋನ್ ಹೊಂದಿದ್ದಾರೆ. ಪ್ರತಿ ಮೊಬೈಲ್‌ನಲ್ಲೂ ಸುಮಾರು ಒಂದು ಸಾವಿರ ಚಿತ್ರ ಮತ್ತು ಸಾವಿರಾರು ವಿಡಿಯೋಗಳಿರುವುದು ಆಘಾತ ಮೂಡಿಸಿದೆ.

ಇಷ್ಟು ಮೊಬೈಲ್‌ಗಳನ್ನು ಓರ್ವ ಚಿತ್ರಕಲಾ ಶಿಕ್ಷಕ ಏಕೆ ಹೊಂದಿದ್ದ? ಆ ವಿಡಿಯೋ ಹಾಗೂ ಚಿತ್ರಗಳು ಯಾವುವು? ಎಂಬುದುಪೂರ್ಣ ಪ್ರಮಾಣದತನಿಖೆ ಮತ್ತು ವಿಚಾರಣೆಯಿಂದಬಹಿರಂಗವಾಗಬೇಕಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಅಲ್ಲದೆ, ಅರ್ಜಿದಾರನ ಕೃತ್ಯವು ಭಯಾನಕತೆಗಿಂತ ಹೆಚ್ಚಿನ ಛಾಯೆ ಹೊಂದಿದೆ. ಒಬ್ಬ ಶಿಕ್ಷಕನಾಗಿ ಇಂತಹ ವಿಡಿಯೋ ಚಿತ್ರೀಕರಿಸಿರುವುದು ನಿಜಕ್ಕೂ ಅಸಭ್ಯ. ಶಿಕ್ಷಕನ ಈ ಕೃತ್ಯ ಕ್ಷಮಿಸುವಂಥದ್ದಲ್ಲ. ಈ ಕೃತ್ಯವಲ್ಲದೆ ಮತ್ಯಾವುದು ಅಪರಾಧವಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬಹುದು.

ಅರ್ಜಿದಾರ ಪೂರ್ಣ ಪ್ರಮಾಣದ ವಿಚಾರಣೆಯಿಂದ ಆರೋಪಮುಕ್ತವಾಗಿ ಬರಲಿ. ಅದು ಬಿಟ್ಟು ಈ ಹಂತದಲ್ಲಿ ಪ್ರಕರಣ ರದ್ದುಪಡಿಸಿದರೆ ಶಿಕ್ಷಕನ ಅಕ್ರಮ ಚಟುವಟಿಕೆಗಳನ್ನು ಉತ್ತೇಜಿಸಿದಂತಾಗುತ್ತದೆ ಎಂದು ತೀಕ್ಷ್ಮವಾಗಿ ನುಡಿದ ನ್ಯಾಯಪೀಠ, ಅರ್ಜಿಯನ್ನು ತಿರಸ್ಕರಿಸಿ ಆದೇಶಿಸಿದೆ.

ಪ್ರಕರಣವೇನು?:

ಕೋಲಾರಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿಶಾಲೆಯೊಂದರಲ್ಲಿ ಚಿತ್ರಕಲಾ ಶಿಕ್ಷಕನಾಗಿ ಮುನಿಯಪ್ಪ ನೇಮಕಗೊಂಡಿದ್ದರು. ಈಗಲೂ ಅದೇ ಹುದ್ದೆಯಲ್ಲಿದ್ದಾರೆ. ವಸತಿ ಶಾಲೆಯಲ್ಲಿ ಬಟ್ಟೆ ಬದಲಿಸುವ ಸಮಯದಲ್ಲಿ ಬಾಲಕಿಯರ ಚಿತ್ರ ಹಾಗೂ ವಿಡಿಯೋವನ್ನು ತೆಗೆದ ಆರೋಪದ ಮೇಲೆ ಅರ್ಜಿದಾರರ ಬಗ್ಗೆ 2023ರ ಡಿ.15ರಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ನಿಯಂತ್ರಣ ಕೊಠಡಿ ಮೂಲಕ ದೂರು ಸ್ವೀಕರಿಸಿದ್ದರು. ನಂತರ ಮಾಸ್ತಿ ಪೊಲೀಸ್ ಠಾಣೆಯಲ್ಲಿ 2023ರ ಡಿ.17ರಂದು ಅರ್ಜಿದಾರರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಇದನ್ನೂ ಓದಿ: ಇಂದು ಈ‌ ರಾಶಿಯವರಿಗೆ ಭಾರೀ ಸಂಕಷ್ಟ!

ಈ ಎಫ್‌ಐಆರ್ ಮತ್ತು ಆ ಕುರಿತ ಕೋಲಾರ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ (ಪೋಕ್ಟೋ ವಿಶೇಷ ಕೋರ್ಟ್)ದ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಮುನಿಯಪ್ಪ ಹೈಕೋರ್ಟ್‌ಗೆ ಕ್ರಿಮಿನಲ್‌ ಅರ್ಜಿ ಸಲ್ಲಿಸಿದ್ದರು.

Latest News

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: ನಿಮಗೆ ತಕ್ಷಣ ಹಣದ ಅವಶ್ಯಕತೆ ಇದೆಯಾ? ಶ್ಯೂರಿಟಿ ಇಲ್ಲದೆ ಸಾಲ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಮುದ್ದೇಬಿಹಾಳ : ಅನಿರೀಕ್ಷಿತ ಫಲಿತಾಂಶವನ್ನು ಇಲ್ಲಿನ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ನೂತನ

Prize Money Scholarship: ವಿದ್ಯಾರ್ಥಿಗಳ ಖಾತೆಗೆ 35 ಸಾವಿರ ಜಮಾ!

Prize Money Scholarship: ವಿದ್ಯಾರ್ಥಿಗಳ ಖಾತೆಗೆ 35 ಸಾವಿರ ಜಮಾ!

Prize Money Scholarship 2025: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ಕಡೆಯಿಂದ ಗುಡ್ ನ್ಯೂಸ್ ನೀಡಿದೆ. 2024 ಮತ್ತು 2025 ನೇ ಸಾಲಿನ ಮೆಟ್ರಿಕ್ ನಂತರ ವಿದ್ಯಾರ್ಥಿಗಳು ಹಾಗೂ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಅರ್ಜಿಯನ್ನು ಕರೆಯಲಾಗಿದೆ. Join Our Telegram: https://t.me/dcgkannada ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಶಿಕ್ಷಣ ಅನುಕೂಲಕ್ಕಾಗಿ ಸಾಕಷ್ಟು ಯೋಜನೆ ಮತ್ತು ಸ್ಕಾಲರ್ಶಿಪ್ ಗಳನ್ನು ಜಾರಿಗೆ ತರುತ್ತಿದೆ ಮತ್ತು ಅವರ ಪರೀಕ್ಷೆ ಉತ್ತಮವಾಗಿ ಪಾಸಾಗಿದ್ದರೆ ಸಾಕು.

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ₹601 5G ರೀಚಾರ್ಜ್ ಯೋಜನೆಯು Jio ಬಳಕೆದಾರರಿಗೆ, ವಿಶೇಷವಾಗಿ ಇಡೀ ವರ್ಷಕ್ಕೆ ಅನಿಯಮಿತ 5G ಡೇಟಾವನ್ನು ಬಯಸುವವರಿಗೆ ಆಕರ್ಷಕ ಕೊಡುಗೆಯಾಗಿದೆ. Jio ₹601 5G ರೀಚಾರ್ಜ್ ಯೋಜನೆ ಮುಖ್ಯಾಂಶಗಳು ವೆಚ್ಚ : ಒಂದು ವರ್ಷಕ್ಕೆ ₹601.ಪ್ರಯೋಜನಗಳು : 12 ತಿಂಗಳವರೆಗೆ ಅನಿಯಮಿತ 5G ಡೇಟಾ.ಅರ್ಹತೆ : Jio 5G ಸಿಮ್ ಬಳಕೆದಾರರಿಗೆ ಮಾತ್ರ ಲಭ್ಯವಿದೆ.ವಿನಾಯಿತಿಗಳು : 4G ಸಿಮ್ ಬಳಕೆದಾರರಿಗೆ ಅನ್ವಯಿಸುವುದಿಲ್ಲ. Join Our Telegram: https://t.me/dcgkannada ಈ