Shramik Residential School: Action to review MLA's demand: Minister Santosh Lad

ಶ್ರಮಿಕ ವಸತಿ ಶಾಲೆ: ಶಾಸಕರ ಬೇಡಿಕೆ ಪರಿಶೀಲನೆಗೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಶ್ರಮಿಕ ವಸತಿ ಶಾಲೆ: ಶಾಸಕರ ಬೇಡಿಕೆ ಪರಿಶೀಲನೆಗೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಬೆಂಗಳೂರು, ಆಗಸ್ಟ್‌ 13: ಕಾರ್ಮಿಕ ಇಲಾಖೆ ವತಿಯಿಂದ ರಾಜ್ಯದ 31 ಜಿಲ್ಲೆಗಳಲ್ಲಿ ಶ್ರಮಿಕ ವಸತಿ ಶಾಲೆಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ತಮ್ಮ ತಮ್ಮ ಕ್ಷೇತ್ರದಲ್ಲೂ ಶಾಲೆಗಳನ್ನು ಆರಂಭಿಸಬೇಕು ಎಂದು ಕೆಲವು ಶಾಸಕರು ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ವಿಧಾನಸಭೆಯಲ್ಲಿ ಇಂದು ತಿಳಿಸಿದರು.

ಪ್ರಶ್ನೋತ್ತರ ಕಲಾಪದ ವೇಳೆ ಕಾಂಗ್ರೆಸ್‌ ಯು. ಬಿ. ಬಣಕಾರ್‌ ಅವರ ಪ್ರಶ್ನೆಗೆ ಉತ್ತರಿಸಿದ ಅವರು, 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಣೆ ಮಾಡಿದಂತೆ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ರಾಜ್ಯದ 31 ಜಿಲ್ಲೆಗಳಲ್ಲಿ ಶ್ರಮಿಕ ವಸತಿ ಶಾಲೆಗಳನ್ನು ಆರಂಭಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಿದ್ದಾರೆ. ಈ ಶಾಲೆಗಳ ಕಟ್ಟಡ ನಿರ್ಮಾಣ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಸಹ ಪ್ರಗತಿಯಲ್ಲಿದೆ. ರಾಜ್ಯದ ಬಜೆಟ್‌ನಲ್ಲಿ ಘೋಷಣೆ ಮಾಡಿರುವಂತೆ ಪ್ರತಿ ಜಿಲ್ಲೆಗೆ ಒಂದು ವಸತಿ ಶಾಲೆ ನಿರ್ಮಾಣ ಮಾಡಲು ಅವಕಾಶ ಇರುತ್ತದೆ ಎಂದು ವಿವರಿಸಿದರು.

ರಾಜ್ಯದ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ಭವಿಷ್ಯಕ್ಕಾಗಿ ಹಂತ ಹಂತವಾಗಿ ರಾಜ್ಯದಾದ್ಯಂತ ಶ್ರಮಿಕ ವಸತಿ ಶಾಲೆಗಳನ್ನು ಆರಂಭಿಸಲಾಗುವುದು.

“ಹಿರೇಕೆರೂರು ಗ್ರಾಮದ ಗ್ರಾಮಸ್ಥರು ಸುಮಾರು ಹತ್ತು ಎಕರೆ ಜಮೀನನ್ನು ಶಾಲೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಮುಂದೆ ನಿಟ್ಟೂರು ಗ್ರಾಮದಲ್ಲಿ ಶ್ರಮಿಕ ವಸತಿ ಶಾಲೆ ನಿರ್ಮಿಸಲು ಸಚಿವರು ಕ್ರಮ ಕೈಗೊಳ್ಳಬೇಕು ಎಂದು ವಿನಂತಿ ಮಾಡಬೇಕು” ಎಂದು ಯು.ಬಿ. ಬಣಕಾರ್‌ ಅವರು ಕಲಾಪದ ವೇಳೆ ಮನವಿ ಮಾಡಿದ್ದರು.

ಬಹುತೇಕ ಶಾಸಕರಿಂದ ಶ್ರಮಿಕ ವಸತಿ ಶಾಲೆಗಳ ಆರಂಭಕ್ಕೆ ಹೆಚ್ಚಿನ ಬೇಡಿಕೆಗಳು ಬರುತ್ತಿವೆ. ಮುಂದಿನ ದಿನಗಳಲ್ಲಿ ಸರ್ಕಾರ ಹೆಚ್ಚಿನ ವಸತಿ ಶಾಲೆಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಲಾಡ್‌ ಅವರು ತಿಳಿಸಿದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು