ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದ ಫಲಿತಾಂಶ : ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಂಸ್ಥೆಯ ಶೃತಿ ರಾಜ್ಯಕ್ಕೆ 2ನೇ ರ‍್ಯಾಂಕ್

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದ ಫಲಿತಾಂಶ : ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಂಸ್ಥೆಯ ಶೃತಿ ರಾಜ್ಯಕ್ಕೆ 2ನೇ ರ‍್ಯಾಂಕ್

ಮುದ್ದೇಬಿಹಾಳ : ಸನ್ 2026 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮರು ಮೌಲ್ಯಮಾಪನದಲ್ಲಿ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ ಮಠ್ಸ್ ಸಮೂಹ ಸಂಸ್ಥೆಯ ಎಸ್.ಡಿ.ಕೆ ಪ್ರೌಢಶಾಲೆಯ ವಿದ್ಯಾರ್ಥಿನಿ ಶೃತಿ ಶಿವನಗೌಡ ಪೀರಾಪೂರ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾಳೆ.

ಈ ಮೊದಲು ಫಲಿತಾಂಶ ಪ್ರಕಟಗೊಂಡಾಗ ಶೃತಿಗೆ 617 ಅಂಕ ಪಡೆದುಕೊಂಡಿದ್ದಳು.ಶಾಲೆಯ ಆಡಳಿತ ಮಂಡಳಿ ಹಾಗೂ ಪಾಲಕರು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದಾಗ ಮತ್ತೆ ಏಳು ಅಂಕಗಳು ಶೃತಿಗೆ ಲಭಿಸಿವೆ.ಆ ಮೂಲಕ ಶೃತಿ ಕನ್ನಡ ಮಾಧ್ಯಮದಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನವನ್ನು ಪಡೆದುಕೊಂಡು ಸಂಸ್ಥೆಯ,ಊರಿನ ಕೀರ್ತಿ ಹೆಚ್ಚಿಸಿದ್ದಾಳೆ.

ಆಂಗ್ಲ ಮಾಧ್ಯಮ ವಿಭಾಗದಲ್ಲಿ ಹರ್ಷಿತಾ ನಾಗೂರ ಈ ಮುಂಚೆ 620 ಅಂಕ ಪಡೆದುಕೊಂಡಿದ್ದು ಮರುಮೌಲ್ಯಪಾಲನದಲ್ಲಿ ಮತ್ತೆ ಎರಡು ಅಂಕ ಬಂದಿದ್ದು 622 ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್ ಪಡೆದುಕೊಂಡಿದ್ದಾಳೆ.ಕನ್ನಡ ಮಾಧ್ಯಮದಲ್ಲಿ ಸವಿತಾ ಲೊಟಗೇರಿ ಮೊದಲು ಫಲಿತಾಂಶ ಪ್ರಕಟಗೊಂಡಾಗ 612 ಅಂಕ ಪಡೆದುಕೊಂಡಿದ್ದು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದಾಗ 10 ಅಂಕಗಳು ಬಂದಿದ್ದು ಒಟ್ಟು 622 ಅಂಕಗಳೊoದಿಗೆ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದುಕೊಂಡು ಸಂಸ್ಥೆಯ ಕೀರ್ತಿ ಹೆಚ್ಚಿಸಿದ್ದಾಳೆ. ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ ವಿದ್ಯಾರ್ಥಿಗಳನ್ನು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಬಿ. ಜಿ. ಮಠ, ಆಡಳಿತಾಧಿಕಾರಿ ಪ್ರಜ್ವಲ್ ಬಿ. ಮಠ, ಕಾರ್ಯದರ್ಶಿ ಸಿದ್ದಯ್ಯ ಮಠ,ಮುಖ್ಯಗುರು ಹೀರೂ ನಾಯಕ,ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿನ ಪ್ರಾಚಾರ್ಯ ಇರ್ಫಾನ್ ಬಾಗವಾನ್,ಮಾರ್ಗದರ್ಶಕ ಎಂ.ಎ.ನದಾಫ ಅಭಿನಂದಿಸಿದ್ದಾರೆ.

ಮೌಲ್ಯಮಾಪಕರ ವಿರುದ್ಧ ಕ್ರಮ-ವಿದ್ಯಾರ್ಥಿಗಳಿಗೆ ಶುಲ್ಕ ವಾಪಸ್:
ಆಕ್ಸಫರ್ಡ್ ಮಠ್ಸ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದಾಗ ಇಬ್ಬರು ವಿದ್ಯಾರ್ಥಿಗಳಿಗೆ ಆರಕ್ಕಿಂತ ಹೆಚ್ಚು ಅಂಕ ಲಭಿಸಿದ್ದು ತಪ್ಪು ಮೌಲ್ಯಮಾಪನ ಮಾಡಿದ ಮೌಲ್ಯಮಾಪಕರಿಗೆ ದಂಡ ವಿಧಿಸಲು ಅವಕಾಶ ಇದೆ.ನಿಯಮದಂತೆ ಆರಕ್ಕಿಂತ ಹೆಚ್ಚು ಅಂಕ ವಿದ್ಯಾರ್ಥಿ ಪಡೆದರೆ ಆ ಪತ್ರಿಕೆಯನ್ನು ಮೌಲ್ಯಮಾಪನ ಮಾಡಿದ ತಪ್ಪಿತಸ್ಥ ಮೌಲ್ಯಮಾಪಕರಿಂದ ದಂಡ ವಸೂಲಿ ಮಾಡಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಶುಲ್ಕ ವಾಪಸ್ ಮಾಡಲಾಗುತ್ತದೆ ಎಂದು ಬಿಇಒ ಬಿ.ಎಸ್.ಸಾವಳಗಿ ತಿಳಿಸಿದ್ದಾರೆ.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ