Sneha Sangam is the anniversary of the circle of friends

ಸ್ನೇಹ ಸಂಗಮ ಗೆಳೆಯರ ಬಳಗದ ವಾರ್ಷಿಕೋತ್ಸವ

ಸ್ನೇಹ ಸಂಗಮ ಗೆಳೆಯರ ಬಳಗದ ವಾರ್ಷಿಕೋತ್ಸವ

ಸ್ನೇಹಿತರ ಬಳಗದಿಂದ ಸಮಾಜಮುಖಿ ಕಾರ್ಯಗಳಾಗಲಿ-ಹಂಚಲಿ

ಮುದ್ದೇಬಿಹಾಳ : ಸ್ನೇಹಿತರ ಬಳಗಗಳು ಕೇವಲ ವೈಯಕ್ತಿಕ ಸಮಸ್ಯೆಗಳಿಗೆ ಬಳಕೆಯಾಗದೇ ಸಮಾಜಮುಖಿ ಕಾರ್ಯಗಳಿಗೂ ಕೈ ಜೋಡಿಸುವ ಕಾರ್ಯ ಆಗಬೇಕು ಎಂದು ಬ.ಬಾಗೇವಾಡಿ ಸರಕಾರಿ ಪ್ರೌಢಶಾಲೆ ಸಹ ಶಿಕ್ಷಕ ಅಶೋಕ ಹಂಚಲಿ ಹೇಳಿದರು.

ಪಟ್ಟಣದ ಟಾಪ್ ಇನ್ ಟೌನ್ ಫಂಕ್ಷನ್ ಹಾಲ್‌ನಲ್ಲಿ ಭಾನುವಾರ ಸ್ನೇಹ ಸಂಗಮ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ,1990-91ನೇ ಸಾಲಿನ ಎಸ್.ಎಸ್.ಎಲ್.ಸಿ ಗೆಳೆಯರ 50ನೇ ವರ್ಷದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿ ತುಳಿತಕ್ಕೊಳಗಾದವರಿಗೆ ನೆರವು ನೀಡುವ ಕಾರ್ಯಕ್ಕೆ ಮುಂದಾದಲ್ಲಿ ದೂರದಲ್ಲಿ ಇರುವವ ಸ್ನೇಹಿತರು ಅಂತಹದ್ದಕ್ಕೆ ಬೆಂಬಲಿಸುತ್ತಾರೆ. ಗೆಳೆಯರು ಸೇರಿದ್ದಲ್ಲಿ ಸ್ವರ್ಗ ನಿರ್ಮಾಣ ಆಗುತ್ತದೆ. ಸ್ನೇಹಕ್ಕೆ ಕೃಷ್ಣ ಕುಚೇಲರ ಗೆಳೆತನ ಮಾದರಿಯಾದದ್ದು ಎಂದರು.

ಸಾನಿಧ್ಯ ವಹಿಸಿದ್ದ ಹಿರೂರು ಅನ್ನದಾನೇಶ್ವರ ಹಿರೇಮಠದ ಜಯಸಿದ್ಧೇಶ್ವರ ಶಿವಾಚಾರ್ಯರು ಮಾತನಾಡಿ, ಗೆಳೆಯರು ಎಂದರೆ ಅಲ್ಲಿ ನಗು, ಆತ್ಮೀಯ, ಸುಖ, ದುಃಖದ ಭಾವ ಸೇರಿ ಎಲ್ಲವೂ ಇದೆ. ಆಗಿನ ಶಾಲೆಯಲ್ಲಿ ಬಾಂಧವ್ಯ ಇತ್ತು. ಇಂದಿನ ಶಾಲೆಯಲ್ಲಿ ಆ ಬಾಂಧವ್ಯ ಇಲ್ಲ. ಕಷ್ಟದಲ್ಲಿ ಇರುತ್ತೇನೆ ಎಂದಾಗಲಷ್ಟೇ ಸಹಾಯ ಮಾಡುತ್ತೇನೆ ಎನ್ನುವುದು ಗೆಳೆತನ ಅಲ್ಲ. ದುಃಖ ನನಗೆ ಇರಲಿ, ನೀನು ಆರೋಗ್ಯವಾಗಿರು ಎಂದು ಹೇಳುವುದು ನಿಜವಾದ ಸ್ನೇಹ ಎಂದರು.

ಗೆಳೆಯರ ಬಳಗದ ನೂತನ ಅಧ್ಯಕ್ಷ ವಿಶ್ವನಾಥ ಪಾಟೀಲ, ನಿಕಟಪೂರ್ವ ಅಧ್ಯಕ್ಷ ಶಿವಾಜಿ ಬಿಜಾಪೂರ, ಉಪಾಧ್ಯಕ್ಷ ಡಾ. ಸಿ. ಕೆ. ಶಿವಯೋಗಿಮಠ, ಪ್ರಧಾನ ಕಾರ್ಯದರ್ಶಿ ನಬಿರಸೂಲ ಮುದ್ನಾಳ, ಸಹ ಕಾರ್ಯದರ್ಶಿ ಮುಸ್ತಾಕ ಬಾಗವಾನ, ಖಜಾಂಚಿ ಆನಂದ ಜಂಬಗಿ, ಲೋಹಿತ ನಾಲತವಾಡ, ಶ್ರೀಶೈಲ ಭಾವಿಕಟ್ಟಿ ಮೊದಲಾದವರು ಇದ್ದರು. ಕಾರ್ಯಕ್ರಮದಲ್ಲಿ ಬೇರೆ ಜಿಲ್ಲೆ, ರಾಜ್ಯ, ವಿದೇಶದಲ್ಲಿರುವ ಗೆಳೆಯರು ಭಾಗವಹಿಸಿದ್ದರು.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು