ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ ಭೇದಿಸಿರುವ ವಿಜಯಪುರ ಜಿಲ್ಲೆಯ ಪೊಲೀಸರು ಗುಜರಾತ ಮೂಲದ ಅಂತರಾಜ್ಯ ಮಟ್ಟದ ಮೂವರು ಕಳ್ಳರನ್ನು ಬಂಧಿಸಿ ಅವರಿಂದ ತುಂಡರಿಸಿದ ಬೆಳ್ಳಿ ಹಾಗೂ ಬೆಳ್ಳಿ ತುಣುಕು ಸೇರಿ ಹಲವು ಸಾಮಗ್ರಿ ವಶಕ್ಕೆ ಪಡೆದಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬೆಳಗಾವಿ ಉತ್ತರ ವಲಯದ ಐಜಿಪಿ ಸಂದೀಪ ಪಾಟೀಲ ಅವರು,
ಕಳೆದ ಜು. 5 ರಂದು ರಾತ್ರಿ ಬಸರಕೋಡದ ಪವಾಡಬಸವೇಶ್ವರ ದೇವಸ್ಥಾನದ ಕಬ್ಬಿಣದ ಬಾಗಿಲುಗಳಿಗೆ ಹಾಕಿದ ಕೀಲಿಗಳನ್ನು ಮುರಿದು ದೇವಸ್ಥಾನದಲ್ಲಿದ್ದ 32 ಕೆಜಿ ತೂಕದ ಬೆಳ್ಳಿಯ ಮೂರ್ತಿ ಕಳವು ಮಾಡಲಾಗಿತ್ತು. ಇದರ ಮೌಲ್ಯ 51.20 ಲಕ್ಷ ರೂ. ಎಂದು ಅಂದಾಜಿಸಲಾಗಿತ್ತು. ಈ ಕುರಿತು ದೇವಸ್ಥಾನದ ಕಮೀಟಿ ಅಧ್ಯಕ್ಷ ಕರನಂದೆಪ್ಪ ಯಮನಪ್ಪ ಬಿರಾದಾರ ಮುದ್ದೇಬಿಹಾಳ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣದ ಪತ್ತೆಗೆ ಎಸ್‌ಪಿ ಲಕ್ಷ್ಮಣ ನಿಂಬರಗಿ ಅವರ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡ ರಚಿಸಿದ್ದರು. ಬ.ಬಾಗೇವಾಡಿ ಡಿಎಸ್‌ಪಿ ಚಂದ್ರಕಾoತ ನಂದರೆಡ್ಡಿ, ಮುದ್ದೇಬಿಹಾಳ ಸಿಪಿಐ ಮಹಮ್ಮದ್ ಫಸಿಯುದ್ದೀನ, ಪಿಎಸ್‌ಐ ಸಂಜಯ ತಿಪ್ಪರೆಡ್ಡಿ, ಅಪರಾಧ ವಿಭಾಗದ ಪಿಎಸೈ ಆರ್.ಎಸ್. ಭಂಗಿ ಹಾಗೂ ನುರಿತ ಸಿಬ್ಬಂದಿಯನ್ನೊಳಗೊAಡ ಒಟ್ಟು 4 ತನಿಖಾ ತಂಡಗಳನ್ನು ರಚಿಸಿದ್ದರು. ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡು ಅಧಿಕಾರಿಗಳು ಗುಜರಾತ್‌ವರೆಗೂ ತೆರಳಿ ಕಳ್ಳರನ್ನು ಪತ್ತೆ ಹಚ್ಚುವಲ್ಲಿ ಸಫಲರಾಗಿದ್ದಾರೆ ಎಂದು ತಿಳಿಸಿದರು. ಬಂಧಿತರ ಪೈಕಿ ಗುಜರಾತ್ ಮೂಲದ ಸುರೇಶಕುಮಾರ ಶಾಂತಿಲಾಲ ಸೋನಿ(51) ಈತನ ಮೇಲೆ ಈಗಾಗಲೇ ಗುಜರಾತ್ ರಾಜಸ್ತಾನದ ವಿವಿಧ ಪೊಲೀಸ್ ಠಾಣೆಗಳಲ್ಲಿ ಐದು ಪ್ರಕರಣಗಳು ದಾಖಲಾಗಿವೆ.ಇನ್ನುಳಿದಂತೆ ಬ್ರಹ್ಮಾರ್ ಟೋಪಿಯಾ ನೇಟ್ (35) ಹಾಗೂ ಇಂದ್ರಜೀತ್ ಮನಿಯಾರ್ ನೇಟ್(33) ಬಂಧಿತರಾಗಿದ್ದಾರೆ. ವಿಚಾರಣೆ ವೇಳೆ ಇವರು ಕಳ್ಳತನ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಕಳ್ಳತನ ಮಾಡಿದ ಬಸವೇಶ್ವರ ಮೂರ್ತಿ ಪೈಕಿ ಮೂರ್ತಿಯ ಪ್ರಮುಖ ಭಾಗವನ್ನು 4 ಭಾಗಗಳಾಗಿ ತುಂಡರಿಸಿ, ಇನ್ನುಳಿದ ಭಾಗವನ್ನು ಕರಗಿಸಿ ಗಟ್ಟಿಗಳನ್ನಾಗಿ ಮಾಡಿ ಮಾರಾಟ ಮಾಡಿದ ಬಗ್ಗೆ ಹೇಳಿದ್ದು, ಆ ಪ್ರಕಾರ ತನಿಖೆ ಕೈಗೊಂಡು ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್‌ಪಿ ಲಕ್ಷ್ಮಣ ನಿಂಬರಗಿ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಡಿವೈಎಸ್ಪಿ ಚಂದ್ರಕಾoತ ನಂದರೆಡ್ಡಿ,ಸಿಪಿಐ ಮೊಹ್ಮದ ಫಸಿವುದ್ದೀನ್,ಪಿಎಸೈ ಸಂಜಯ ತಿಪರೆಡ್ಡಿ,ಆರ್.ಎಸ್.ಭಂಗಿ, ಆರೀಫ ಮುಶಾಪುರಿ ಸೇರಿದಂತೆ ಹಲವರು ಇದ್ದರು.

ವಶಪಡಿಸಿಕೊಂಡ ಸಾಮಗ್ರಿ :4 ಕೆಜಿಯ ಮೂರ್ತಿಯ ತುಂಡರಿಸಿದ ತುಣುಕುಗಳು, 23 ಕೆಜಿ ತೂಕದ ಬೆಳ್ಳಿಯ ತುಣುಕು, 67,600 ರೂ. ನಗದು, 2 ಮೊಬೈಲ್ ಫೋನ್, ಕೃತ್ಯಕ್ಕೆ ಬಳಸಿದ ಕಾರ್, ಕೃತ್ಯಕ್ಕೆ ಬಳಸಿದ 2 ಕಬ್ಬಿಣದ ರಾಡ್‌ಗಳನ್ನು ವಶಕ್ಕೆ ಪಡೆಯಲಾಗಿದೆ.ಒಟ್ಟು 52,70,000 ರೂ. ಮೌಲ್ಯದ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನೂ ಕೆಲವು ಆರೋಪಿತರು ಕೃತ್ಯದಲ್ಲಿ ಭಾಗಿಯಾದ ಬಗ್ಗೆ ತಿಳಿದು ಬಂದಿದ್ದು ಅವರ ಪತ್ತೆ ಕಾರ್ಯ ಮುಂದುವರೆದಿದೆ ಎಂದು ಎಸ್‌ಪಿ ಎಸ್‌ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

ಕಳ್ಳರನ್ನು ಬಂಧಿಸಿದ ಪೊಲೀಸರಿಗೆ ಸನ್ಮಾನ ಪತ್ರ,ಅಭಿನಂದನೆ: ಒಂದು ತಿಂಗಳುಗಳ ಕಾಲ ಪವಾಡ ಬಸವೇಶ್ವರ ಬೆಳ್ಳಿ ಮೂರ್ತಿ ಕಳ್ಳತನದ ಪ್ರಕರಣವನ್ನು ಬೆನ್ನತ್ತಿ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸ ತಂಡಕ್ಕೆ ಐಜಿಪಿ,ಎಸ್ಪಿ ಅವರು ಪ್ರಶಂಸನಾ ಪತ್ರ ನೀಡಿ ಗೌರವಿಸಿದರು.ಅಲ್ಲದೇ ಈ ಘಟನೆಯ ಯಶಸ್ಸನ್ನು ಡಿಐಜಿ ಕಚೇರಿಗೆ ಪತ್ರ ಬರೆದು ತಿಳಿಸಲಾಗುವುದು ಎಂದು ಐಜಿಪಿಯವರು ಮಾಹಿತಿ ನೀಡಿದರು.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,