BREAKING : ವಿಶ್ವ ಒಕ್ಕಲಿಗರ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಲಿಂಗೈಕ್ಯ

BREAKING : ವಿಶ್ವ ಒಕ್ಕಲಿಗರ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಲಿಂಗೈಕ್ಯ

ಬೆಂಗಳೂರು : ರಾಜ್ಯದ ಮತ್ತೊಬ್ಬ ಸ್ವಾಮೀಜಿ ಇಹಲೋಕ ತ್ಯಜಿಸಿದ ಸುದ್ದಿ ಕರುನಾಡಿನ ಜನರಿಗೆ ದಿಗ್ಭ್ರಮೆಗೊಳಿಸಿದೆ.

ಆಗಸ್ಟ್ 14 ರಂದು ಕಲಬುರ್ಗಿಯ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿಯಾಗಿದ್ದ ಡಾ. ಶರಣಬಸವಪ್ಪ ಅಪ್ಪಾಜಿಯವರು ಇಹಲೋಕ ತ್ಯಜಿಸಿದ್ದರು. ಇದೀಗ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿಗಳು ಕೂಡ ಇದೀಗ ಇಹಲೋಕ ತ್ಯಜಿಸಿರುವ ಮಾಹಿತಿ ಹೊರಬಿದ್ದಿದೆ.

ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂದು ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಅವರು ಇದೀಗ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಈಗ ಅವರು ಇಂದು ಇಹಲೋಕಾ ತ್ಯಜಿಸಿದ್ದಾರೆ.

ವಕ್ಫ್ ಬೋರ್ಡ್ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ, “ಮುಸ್ಲಿಂ ಸಮುದಾಯಕ್ಕೆ ಮತದಾನದ ಹಕ್ಕು ನಿರಾಕರಿಸುವ ಕಾನೂನು ತರಬೇಕು” ಎಂದು ಹೇಳಿದ್ದರು. ಕೆಲ ತಿಂಗಳ ಹಿಂದೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಇಬ್ಬರೂ ಇರುವ ವೇದಿಕೆಯಲ್ಲಿ, “ಸಿದ್ದರಾಮಯ್ಯ ಅವರು ಮನಸ್ಸು ಮಾಡಿದ್ರೆ ಡಿ ಕೆ ಶಿವಕುಮಾರ್‌ ಅವರು ಸಿಎಂ ಆಗ್ತಾರೆ. ಸಿಎಂ ಕುರ್ಚಿ ಬಿಟ್ಟುಕೊಡಬೇಕು” ಎಂಬ ಹೇಳಿಕೆ ನೀಡಿ ಮುಜುಗರ ಉಂಟು ಮಾಡಿದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು