SSLC Annual Exam from 21st to A.4

ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ನಿಷೇಧಾಜ್ಞೆ ಜಾರಿಗೆ ಜಿಲ್ಲಾಧಿಕಾರಿ ಸೂಚನೆ

ಯಾದಗಿರಿ: ಇದೆ ಮಾರ್ಚ್ 21 ರಿಂದ ಏಪ್ರಿಲ್ 4ರ ವರೆಗೆ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಈ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸುವಂತೆ ಯಾದಗಿರಿ ಜಿಲ್ಲಾಧಿಕಾರಿ ಡಾ. ಸುಶೀಲಾ. ಬಿ ಅವರು ಆದೇಶ ಹೊರಡಿಸಿದ್ದಾರೆ.
ಪ್ರಕ್ರಿಯೆ ಬಿ.ಎನ್.ಎಸ್.ಎಸ್ 2023ರ ಕಲಂ 163 ಅನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ 2025ರ ಮಾರ್ಚ್ 21, 24, 26, 29, ಹಾಗೂ ಏಪ್ರಿಲ್ 2, ಮತ್ತು 4 ರಂದು ಬೆಳಿಗ್ಗೆ 10.15 ರಿಂದ ಮಧ್ಯಾಹ್ನ 1.30 ಗಂಟೆಯ ವರೆಗೆ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿವೆ.
ಜಯಾದಗಿರಿ ಹಾಗೂ ಗುರುಮಠಕಲ್ ತಾಲೂಕಿನ 22 ಪರೀಕ್ಷಾ ಕೇಂದ್ರಗಳು, ಶಹಾಪೂರ, ಮತ್ತು ವಡಗೇರಾ ತಾಲೂಕಿನ 21 ಪರೀಕ್ಷಾ ಕೇಂದ್ರಗಳು ಮತ್ತು ಸುರಪುರ ತಾಲೂಕಿನ 19 ಪರೀಕ್ಷಾ ಕೇಂದ್ರಗಳು ಒಟ್ಟು ಜಿಲ್ಲೆಯಲ್ಲಿ 62 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುತ್ತಿದ್ದು, ಈ ಪರೀಕ್ಷೆಯು ಸೂಸುತ್ರವಾಗಿ ನಡೆಸುವ ಹಿತದೃಷ್ಟಿಯಿಂದ, ಪರೀಕ್ಷಾ ದಿನಗಳಂದು ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲೂ ಇರುವ ಬೆರಳಚ್ಚು ಕೇಂದ್ರ, ಝರಾಕ್ಸ್ ಮಳಿಗೆ ಹಾಗೂ ಪುಸ್ತಕದ ಮಳಿಗೆಗಳನ್ನು ಮುಚ್ಚಲು ಈ ಕೆಳಕಾಣಿಸಿದ ಷರತ್ತಿಗೊಳಪಟ್ಟು ಆದೇಶಿಸಿದೆ.
ಷರತ್ತುಗಳು : ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ ಮೊಬೈಲ್, ಬ್ಲೂಟೂತ್ ಡಿವೈಸ್, ಡಿಜಿಟಲ್ ವಾಚ್, ಪೇಜರ್, ವೈರಲೆಸ್, ಜಿರಾಕ್ಸ್, ಟೈಪಿಂಗ್ ಪುಸ್ತಕ ಮಳಿಗೆಗಳು ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ನಿಗದಿಪಡಿಸಿದ ಅಧಿಕಾರಿಗಳನ್ನು, ಶಿಕ್ಷಕರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ. 200 ಮೀಟರ್ ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ. ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಈ ಆದೇಶ ಅನ್ವಯವಾಗುವುದಿಲ್ಲ. ಲಿಂಗೇರಿ ಕೋನಪ್ಪ ಆರ್ ನಾಡಗೌಡ ಸ್ಮಾರಕ ಪ್ರೌಢ ಶಾಲೆ, ಯಾದಗಿರಿ ಪರೀಕ್ಷಾ ಕೇಂದ್ರ ಭಾಗ್ಯಲಕ್ಷೀ ಚಿತ್ರಮಂದಿರಕ್ಕೆ ಹೊಂದಿ 2025ರ ಮಾರ್ಚ್ 21, 24, 26, 29 ಹಾಗೂ ಏಪ್ರಿಲ್ 2, 4 ರಂದು ಬೆಳಿಗ್ಗೆ 10.15 ರಿಂದ ಮಧ್ಯಾಹ್ನ 1.30 ಗಂಟೆಯ ವರೆಗೆ ಯಾವುದೇ ಚಲನ ಚಿತ್ರಗಳ ಪ್ರದರ್ಶನಗಳನ್ನು ನಿಷೇಧಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.