SSLC ಪರೀಕ್ಷೆ : ಶಿಕ್ಷಣ ಸಚಿವರಿಗೆ ಅಭಿನಂದನೆ ತಿಳಿಸಿದ ವಿದ್ಯಾರ್ಥಿನಿ

SSLC ಪರೀಕ್ಷೆ : ಶಿಕ್ಷಣ ಸಚಿವರಿಗೆ ಅಭಿನಂದನೆ ತಿಳಿಸಿದ ವಿದ್ಯಾರ್ಥಿನಿ

ಮುದ್ದೇಬಿಹಾಳ : ಪಟ್ಟಣದ ಐದು ಪರೀಕ್ಷಾ ಕೇಂದ್ರಗಳು ಸೇರಿದಂತೆ ಮುದ್ದೇಬಿಹಾಳ,ತಾಳಿಕೋಟಿ,ನಾಗರಬೆಟ್ಟ ಪರೀಕ್ಷಾ ಕೇಂದ್ರಗಳಲ್ಲಿ ಮೊದಲ ದಿನದ ಪರೀಕ್ಷೆಗಳು ಅತ್ಯಂತ ಬಿಗಿ ಭದ್ರತೆಯಲ್ಲಿ ಕಟ್ಟುನಿಟ್ಟಾಗಿ ನಡೆದಿರುವುದಾಗಿ ವರದಿಯಾಗಿದೆ.

ಪಟ್ಟಣದ ವಿಬಿಸಿ ಪ್ರೌಢಶಾಲೆ,ಜ್ಞಾನ ಭಾರತಿ ವಿದ್ಯಾಮಂದಿರ, ಚಿನ್ಮಯ ಜೆ.ಸಿ.ಆಂಗ್ಲಮಾಧ್ಯಮ ಪ್ರೌಢಶಾಲೆ,ಸ್ವಾಮಿ ವಿವೇಕಾನಂದ ಪ್ರೌಢಶಾಲೆ ಶಿರೋಳ,ಅಭ್ಯುದಯ ಆಂಗ್ಲಮಾಧ್ಯಮ ಪ್ರೌಢಶಾಲೆ ಸೇರಿದಂತೆ ತಾಲ್ಲೂಕಿನ ಗ್ರಾಮೀಣ ಭಾಗದ ಪರೀಕ್ಷಾ ಕೇಂದ್ರಗಳಲ್ಲೂ ಯಾವುದೇ ಗೊಂದಲವಿಲ್ಲದೇ ಕಟ್ಟುನಿಟ್ಟಾಗಿ ಪರೀಕ್ಷೆಗಳು ನಡೆದಿವೆ ಎಂದು ಎಸ್.ಎಸ್.ಎಲ್.ಸಿ ಪರೀಕ್ಷೆಯ ಅಧ್ಯಕ್ಷರು,ತಹಶೀಲ್ದಾರ್ ಕೀರ್ತಿ ಚಾಲಕ ತಿಳಿಸಿದರು.

ಒಟ್ಟು 6356 ವಿದ್ಯಾರ್ಥಿಗಳು ಪ್ರಥಮ ಭಾಷೆ ಪರೀಕ್ಷೆಗೆ ನೋಂದಾಯಿಸಿಕೊAಡಿದ್ದು ಅದರಲ್ಲಿ 6233 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರೆ 123 ವಿದ್ಯಾರ್ಥಿಗಳು ಗೈರು ಉಳಿದಿದ್ದಾರೆ ಎಂದು ಎಸ್.ಎಸ್.ಎಲ್.ಸಿ ಪರೀಕ್ಷೆಯ ನೋಡಲ್ ಅಧಿಕಾರಿ ಮೊಹ್ಮದಇಲಿಯಾಸ್ ಬಾಗವಾನ ಮಾಹಿತಿ ನೀಡಿದರು.

ಅತೀ ಸೂಕ್ಷö್ಮ ಪರೀಕ್ಷಾ ಕೇಂದ್ರಗಳೆoದು ಗುರುತಿಸಲಾಗಿದ್ದ ಬಳಬಟ್ಟಿ ಸರಕಾರಿ ಪ್ರೌಢಶಾಲೆ,ಇಂಗಳಗೇರಿ ಸರ್ಕಾರಿ ಪ್ರೌಢಶಾಲೆಗಳಿಗೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.ಮುದ್ದೇಬಿಹಾಳ ಪಿಎಸ್‌ಐ ಸಂಜಯ ತಿಪರೆಡ್ಡಿ ತಮ್ಮ ಸಿಬ್ಬಂದಿಯೊoದಿಗೆ ಬಳಬಟ್ಟಿ ಪರೀಕ್ಷಾ ಕೇಂದ್ರದಲ್ಲಿ ಎರಡು ಗಂಟೆಗಳ ಕಾಲ ಬೀಡುಬಿಟ್ಟು ಹೊರಗಿನ ಜನರನ್ನು ನಿಯಂತ್ರಿಸಿದರಲ್ಲದೇ ಯಾವುದೇ ಗೊಂದಲಗಳಿಗೆ ಆಸ್ಪದ ದೊರೆಯದಂತೆ ನೋಡಿಕೊಂಡರು.

ತಾಳಿಕೋಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಇಂಗಳಗೇರಿ ಪರೀಕ್ಷಾ ಕೇಂದ್ರಕ್ಕೆ ತಾಳಿಕೋಟಿ ಪಿಎಸ್‌ಐ ಜ್ಯೋತಿ ಖೋತ ಭೇಟಿ ನೀಡಿ ಭದ್ರತೆ ಪರಿಶೀಲನೆ ನಡೆಸಿದರು.

ಇನ್ನುಳಿದಂತೆ ಮೈಲೇಶ್ವರ ಬ್ರಿಲಿಯಂಟ್ ಶಾಲೆಯಲ್ಲಿ ವಿಕಲಚೇತನ ಅಭ್ಯರ್ಥಿಯೊಬ್ಬರು ಡಿಡಿಪಿಐ ಅವರ ಅನುಮತಿ ಮೇರೆಗೆ ಸಹಾಯಕರನ್ನು ಪಡೆದುಕೊಂಡು ಪರೀಕ್ಷೆ ಎದುರಿಸಿದರು.ವಿಚಕ್ಷಣ ದಳದ ಅಧಿಕಾರಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ ಭಾವಿಕಟ್ಟಿ ಮಾತನಾಡಿ, ನಾವು ಭೇಟಿ ಕೊಟ್ಟಿರುವ ಎಲ್ಲ ಕಡೆಯೂ ಪರೀಕ್ಷೆಗಳು ಶಾಂತವಾಗಿ ಸುಸೂತ್ರವಾಗಿ ನಡೆದಿವೆ.ಯಾವುದೇ ಗೊಂದಲಗಳು ಕಂಡು ಬಂದಿಲ್ಲ ಎಂದು ತಿಳಿಸಿದರು.

ತಾಳಿಕೋಟಿಯ ಎಸ್.ಕೆ.ಪಪೂ ಕಾಲೇಜು,ಶ್ರೀ ಸಂಗಮೇಶ್ವರ ಪ್ರೌಢಶಾಲೆ,ಸರ್ವಜ್ಞ ವಿದ್ಯಾಪೀಠ ಕನ್ನಡ ಮಾಧ್ಯಮ ಪ್ರೌಢಶಾಲೆ,ನಾಲತವಾಡದ ಶ್ರೀ ವೀರೇಶ್ವರ ಪಪೂ ಕಾಲೇಜು,ಹಿರೂರ ಶ್ರೀ ಭೋಗೇಶ್ವರ ಪ್ರೌಢಶಾಲೆ,ರಕ್ಕಸಗಿ ಕರ್ನಾಟಕ ಪಬ್ಲಿಕ್ ಶಾಲೆ,ನಾಗರಬೆಟ್ಟದ ಎಸ್.ಡಿ.ಕೆ ಪ್ರೌಢಶಾಲೆ, ನಾಗರಬೆಟ್ಟ ಆಕ್ಸ್ಫರ್ಡ್ ಆಂಗ್ಲಮಾಧ್ಯಮ ಪ್ರೌಢಶಾಲೆ,ಮಿಣಜಗಿ ಕ್ರಾಸ್‌ನ ಕನಕ ಕನ್ನಡ ಮಾಧ್ಯಮ ಪ್ರೌಢಶಾಲೆ,ಮೈಲೇಶ್ವರದ ಬ್ರಿಲಿಯಂಟ್ ಕನ್ನಡ ಮಾಧ್ಯಮ ಪ್ರೌಢಶಾಲೆ,ಇಂಗಳಗೇರಿ ಸರ್ಕಾರಿ ಪ್ರೌಢಶಾಲೆ,ಬಸರಕೋಡ ಪವಾಡ ಬಸವೇಶ್ವರ ಪ್ರೌಢಶಾಲೆ,ಕೊಡಗಾನೂರದ ಜೆ.ಎಸ್.ಎಸ್.ಪ್ರೌಢಶಾಲೆ ಬ್ಯಾಲ್ಯಾಳ ಕ್ರಾಸ್‌ನ ಪರೀಕ್ಷಾ ಕೇಂದ್ರಗಳಲ್ಲಿ ಅಚ್ಚುಕಟ್ಟಾಗಿ ಪರೀಕ್ಷೆಗಳು ನಡೆದಿವೆ.

ಬಿಇಒ ಬಿ.ಎಸ್.ಸಾವಳಗಿ,ಬಿಆರ್‌ಸಿ ಆರ್.ಧಮ್ಮೂರಮಠ,ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಎA.ಬೆಳಗಲ್ ಮೊದಲಾದವರು ಪರೀಕ್ಷಾ ಕೇಂದ್ರಗಳಿಗೆ ಸಂಚರಿಸಿ ವ್ಯವಸ್ಥೆ ಪರಿಶೀಲನೆ ನಡೆಸಿದರು.
ಮುದ್ದೇಬಿಹಾಳ,ಬಳಬಟ್ಟಿ,ಕಂದಗನೂರ ಮೊದಲಾದ ಶಾಲೆಯ ವಿದ್ಯಾರ್ಥಿಗಳು ಪರೀಕ್ಷೆಯ ವ್ಯವಸ್ಥೆ ಹಾಗೂ ಪ್ರಶ್ನೆಪತ್ರಿಕೆ ಹೇಗಿತ್ತು ಎಂಬುದರ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊoಡರು.


ಶಿಕ್ಷಣ ಸಚಿವರಿಗೆ ಅಭಿನಂದನೆ ಸಲ್ಲಿಸಿದ ವಿದ್ಯಾರ್ಥಿನಿ:
‘ನಾನು ಪ್ರಥಮ ಬಾರಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಎದುರಿಸುತ್ತಿದ್ದೇನೆ.ನಮ್ಮ ಶಾಲೆಯಲ್ಲಿ ಹತ್ತನೇ ತರಗತಿ ಪೂರ್ವಸಿದ್ಧತೆ ಪರೀಕ್ಷೆ ಸಮಯದಲ್ಲಿ ತಿಳಿಸಿದ್ದಂತೆ ಅದೇ ಮಾದರಿಯಲ್ಲಿ ಪ್ರಶ್ನೆಗಳು ಸರಳವಾಗಿದ್ದ ಕಾರಣ ನಮಗೆ ಬರೆಯುವುದಕ್ಕೆ ಕಷ್ಟವೆನಿಸಲಿಲ್ಲ.ಇದಕ್ಕಾಗಿ ನಾನು ಎಲ್ಲ ವಿದ್ಯಾರ್ಥಿಗಳ ಪರವಾಗಿ ರಾಜ್ಯದ ಶಿಕ್ಷಣ ಸಚಿವರಿಗೆ ಅಭಿನಂದಿಸುತ್ತೇನೆ ಎಂದು ಮುದ್ದೇಬಿಹಾಳ ಪಟ್ಟಣದ ಜ್ಞಾನ ಭಾರತಿ ಪರೀಕ್ಷಾ ಕೇಂದ್ರದಲ್ಲಿ ಮೊದಲ ದಿನದ ಪರೀಕ್ಷೆ ಮುಗಿಸಿಕೊಂಡು ಹೊರ ಬಂದ ಪಟ್ಟಣದ ಅಭ್ಯುದಯ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿಯೊಬ್ಬರು ಹೇಳಿದರು.

Latest News

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಮುದ್ದೇಬಿಹಾಳ : ರಾಜ್ಯದ ಸಕ್ಕರೆ ಕಾರ್ಖಾನೆಗಳ ಅಸೋಶಿಯೇಷನ್‌ದಲ್ಲಿ ಯಾವ ತೀರ್ಮಾನ ಕೈಗೊಂಡಿದೆಯೋ ಅದರಂತೆ ನಮ್ಮ

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ:         ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ: ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮುದ್ದೇಬಿಹಾಳ : ತೆಲಂಗಾಣಕ್ಕೆ ಅಧಿಕೃತ ಆದೇಶವಿಲ್ಲದೆ ಸಿಎಂ ಮೌಖಿಕ ಸೂಚನೆ ಮೇರೆಗೆ ಕೃಷ್ಣಾ ನದಿ

ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ:                           ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ

ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ: ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ

ಮುದ್ದೇಬಿಹಾಳ : ದೆಹಲಿಯಲ್ಲಿ ಕೇಂದ್ರ ಸರ್ಕಾರ ರೈತ ಸಂಘಟನೆಗಳೊAದಿಗೆ ಅ.12 ರಂದು ನಡೆಯಲಿರುವ ಉನ್ನತಮಟ್ಟದ

ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜನೆ :                    ಪ್ರಜಾಪ್ರಭುತ್ವದ ಮೌಲ್ಯಗಳ ಅರಿವಿಗೆ ಯುವ ಸಂಸತ್ ಮಾದರಿ

ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜನೆ : ಪ್ರಜಾಪ್ರಭುತ್ವದ ಮೌಲ್ಯಗಳ ಅರಿವಿಗೆ ಯುವ ಸಂಸತ್ ಮಾದರಿ

ಮುದ್ದೇಬಿಹಾಳ : ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಅರಿವು ಮೂಡಿಸಲು ಯುವ ಸಂಸತ್ ಮೂಲಕ

ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ

ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮ ತಾಲ್ಲೂಕಿನ ರೈತರನ್ನು ಅಡ್ಡ ಹಾದಿಗೆಳೆಯುವ ಕುತಂತ್ರ ನಡೆದಿವೆ. ಕುತಂತ್ರಿಗಳ ಪ್ರಚೋದನೆಗೆ ಒಳಗಾಗಬೇಡಿ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಶಾಸಕರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಾನೂ ಸಹ ರೈತನೇ, ವೇದಿಕೆಯಲ್ಲಿರುವ ಇವರೆಲ್ಲ ಅಧಿಕಾರಿಗಳು ರೈತರಾಗಿದ್ದಾರೆ. ಉದ್ದೇಶಪೂರ್ವಕವಾಗಿ ಇಲ್ಲ ಸಲ್ಲದ ಅಪಪ್ರಚಾರ ನಡೆದಿದೆ. ಸರಕಾರ ನಿಮ್ಮ ಪರವಾಗಿಯೇ ಇರುತ್ತದೆ ಎನ್ನುವುದನ್ನು ಮರೆಯಬೇಡಿ. ಶಾಸಕ ನಾಡಗೌಡರಿಗೆ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ವಿತರಣೆ:                                          ನೈಜ ಭಾರತದ ಧ್ವನಿ ಗ್ರಾಮೀಣ ಪತ್ರಕರ್ತರು-ಸಚಿವ ಎಂ.ಬಿ. ಪಾಟೀಲ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ವಿತರಣೆ: ನೈಜ ಭಾರತದ ಧ್ವನಿ ಗ್ರಾಮೀಣ ಪತ್ರಕರ್ತರು-ಸಚಿವ ಎಂ.ಬಿ. ಪಾಟೀಲ

ವಿಜಯಪುರ : ಗ್ರಾಮೀಣ ಭಾಗದ ಜನರು, ರೈತರು ಹಾಗೂ ಸಾಮಾನ್ಯ ಜನರ ನೈಜ ಸಮಸ್ಯೆಗಳನ್ನು ಬೆಳಕಿಗೆ ತರುವಲ್ಲಿ ಗ್ರಾಮೀಣ ಪತ್ರಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು ನೈಜ ಭಾರತದ ಧ್ವನಿಯಾಗಿ ಗ್ರಾಮೀಣ ಪತ್ರಕರ್ತರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು. ನಗರದ ಗಾಂಧಿ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ಪತ್ರಕರ್ತರ ಉಚಿತ