ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ : ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ : ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ಮುದ್ದೇಬಿಹಾಳ : ನಗರ ಪ್ರದೇಶಗಳಲ್ಲಾದರೆ ಸಂಸ್ಥೆಗಳು ಕೇಳಿದಷ್ಟು ಶುಲ್ಕ ಕೊಡಲು ಪಾಲಕರು ಸಿದ್ಧರಿರುತ್ತಾರೆ.ಅಲ್ಲಿ ಶಿಕ್ಷಣ ಸಂಸ್ಥೆಗಳನ್ನು ಬೆಳೆಸುವುದು ದೊಡ್ಡ ಮಾತಲ್ಲ.ಆದರೆ ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಕಟ್ಟಿ ಬೆಳೆಸಿ ಅಲ್ಲಿ ಮಕ್ಕಳಿಗೆ ಶಿಕ್ಷಣವೇ ಪ್ರಧಾನವಾಗಿ ಕೊಡುವ ಸಂಸ್ಥೆಗಳನ್ನು ಬೆಳೆಸುವುದು ಸಾಹಸದ ಕಾರ್ಯ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಆರ್.ಬಿ.ಧಮ್ಮೂರಮಠ ಹೇಳಿದರು.

ತಾಲ್ಲೂಕಿನ ಹುಲ್ಲೂರು ಗ್ರಾಮದಲ್ಲಿ ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಭಾನುವಾರ ಚೆನ್ನಬಸವ ಶ್ರೀ ಎಜ್ಯುಕೇಷನ್ ರೂರಲ್ ಕಲ್ಚರಲ್ ಸೊಸೈಟಿಯಿಂದ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ ಹಾಗೂ ಚೆನ್ನಬಸವ ಶ್ರೀ ಸ್ಕಾಲರ್‌ಶಿಪ್ ಎಕ್ಸಾಮ್‌ನಲ್ಲಿ ವಿಜೇತ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಕೆಳಮಟ್ಟದಲ್ಲಿ ಬೆಳೆದು ಬಂದಿರುವ ಮಂಜುನಾಥ ಕೊಪ್ಪ ಅವರು ಇಂದು ಹಳ್ಳಿಗಾಡಿನಲ್ಲಿ ಶಿಕ್ಷಣ ಸಂಸ್ಥೆ ಕಟ್ಟಿ ಬೆಳೆಸಿ 500ಕ್ಕೂ ಅಧಿಕ ಮಕ್ಕಳಿಗೆ ಶಿಕ್ಷಣ ಕೊಡುತ್ತಿರುವುದು ಸಾಧನೆಯ ಮೈಲುಗಲ್ಲು.ಕಷ್ಟಪಟ್ಟರೆ ಎಂತಹ ಕೆಲಸವನ್ನು ಸಾಧಿಸಬಹುದು ಎಂಬುದಕ್ಕೆ ಕೊಪ್ಪ ಅವರೇ ನಿದರ್ಶನ ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಎo.ಬೆಳಗಲ್ ಮಾತನಾಡಿ, ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಹೆದರಬಾರದು.ವಿದ್ಯಾರ್ಥಿಗಳು ಹೇಗೆ ಓದಬೇಕು ಎಂದರೆ ಪರೀಕ್ಷೆಯ ಫಲಿತಾಂಶ ಬಂದಾಗ ವಿದ್ಯಾರ್ಥಿಗಳ ಹೆಸರನ್ನು ರಾಜ್ಯವೇ ಎಲ್ಲ ಕಡೆ ಓದುವಂತಾಗಬೇಕು.ಅOತಹ ಸಾಧನೆ ತೋರಬೇಕು ಎಂದರು.

ಪ್ರಶಸ್ತಿ ಪುರಸ್ಕೃತರ ಪರವಾಗಿ ಮಾತನಾಡಿದ ದಲಿತ ಸಂಘರ್ಷ ಸಮೀತಿ ಜಿಲ್ಲಾ ಸಂಘಟನಾ ಸಂಚಾಲಕ ಹರೀಶ ನಾಟೀಕಾರ , ಬಡವರ ಮಕ್ಕಳಿಗೆ ಅವರು ಕೊಟ್ಟಷ್ಟೇ ಶುಲ್ಕ ಪಡೆದುಕೊಂಡು ಶಿಕ್ಷಣದ ಸೌಲಭ್ಯ ಒದಗಿಸುತ್ತಿರುವ ಇಂತಹ ಶಿಕ್ಷಣ ಸಂಸ್ಥೆಗಳು ಹುಟ್ಟಿಕೊಂಡಿರುವುದು ಹೆಮ್ಮೆಯ ಸಂಗತಿ.ಲಕ್ಷಾoತರ ರೂಪಾಯಿ ಶುಲ್ಕ ಕೊಟ್ಟು ತಮ್ಮ ವiಕ್ಕಳನ್ನು ದೊಡ್ಡ ಶಾಲೆಗಳಿಗೆ ಕಳಿಸಲು ಆಗದ ಪಾಲಕರಿಗೆ ಗ್ರಾಮೀಣ ಭಾಗದಲ್ಲಿ ಉತ್ತಮ ಶಿಕ್ಷಣ ಕೊಡುತ್ತಿರುವ ಶಾಲೆಗಳು ವರದಾನವಾಗಿದೆ.ಈ ಪ್ರಶಸ್ತಿ ನನ್ನ ಜವಾಬ್ದಾರಿ ಹೆಚ್ಚಿಸಿದೆ ಎಂದರು.

ದಿವ್ಯ ಸಾನಿಧ್ಯ ವಹಿಸಿದ್ದ ಯರಝರಿ ಯಲ್ಲಾಲಿಂಗೇಶ್ವರ ಮಠದ ಮಲ್ಲಾರಲಿಂಗ ಪ್ರಭುಗಳು, ನಿವೃತ್ತ ಧೈಹಿಕ ಶಿಕ್ಷಣಾಧಿಕಾರಿ ಎಸ್.ಬಿ.ಚಲವಾದಿ , ಸಂಸ್ಥೆಯ ಅಧ್ಯಕ್ಷ ಮಂಜುನಾಥ ಎಸ್.ಕೊಪ್ಪ,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಎಸ್.ತುರಡಗಿ ಮಾತನಾಡಿದರು.ಮೈಲೇಶ್ವರ ಬ್ರಿಲಿಯಂಟ್ ಶಾಲೆಯ ಅಧ್ಯಕ್ಷ ನಾನಾಗೌಡ ನಡುವಿನಮನಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸನಗೌಡ ಮುದ್ನೂರ,ಶಿಕ್ಷಕಿ ಸುಮಂಗಲಾ ಕೋಳೂರ,ತಾಳಿಕೋಟಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಟಿ.ವಜ್ಜಲ, ನ್ಯಾಶನಲ್ ಎಸ್.ಎನ್.ಡಿ ಪಬ್ಲಿಕ್ ಶಾಲೆ ಮುಖ್ಯಗುರುಮಾತೆ ರೇಖಾ ಎಂ.ಎಸ್., ಇದ್ದರು.ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಹಾಡಿದರು.ಎಂ.ಎಸ್.ಕೊಪ್ಪ ಸ್ವಾಗತಿಸಿದರು.ಜಿ.ಎಚ್.ಗೌರೋಜಿ , ಎಚ್.ಆರ್.ಬಾಗಲಕೋಟ ನಿರೂಪಿಸಿದರು.

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ :
ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಿಂದ ಆಯ್ಕೆಯಾದ ಪತ್ರಕರ್ತರಾದ ಗುಲಾಮಮೊಹ್ಮದ ದಫೇದಾರ, ಸಾಗರಕುಮಾರ ಉಕ್ಕಲಿ,ಹೋರಾಟಗಾರರಾದ ಕುಮಾರಸ್ವಾಮಿ ಹಿರೇಮಠ, ಹರೀಶ ನಾಟೀಕಾರ ಹಾಗೂ ಶೈಕ್ಷಣಿಕ ಕ್ಷೇತ್ರದಿಂದ ಎಸ್.ಎಂ.ಜೋಗಿನ(ಅಡವಿ ಸೋಮನಾಳ), ಎಸ್.ಪಿ.ಢವಳಗಿ(ಆಲೂರ),ರೇಷ್ಮಾ ಶೇಖ(ಸಾಲೋಡಗಿ),ವೀರೇಶ ಹುಲಮನಿ(ಬಳಬಟ್ಟಿ),ಕಾಶೀನಾಥ ಸೂಳಿಭಾವಿ(ಬಸರಕೋಡ),VIJAYALAXMI ನಿಡಗುಂದಿ(ಢವಳಗಿ),ಎA.ಕೆ.ಪೂಜಾರಿ (ಹಡಲಗೇರಿ),ಜಯಶ್ರೀ ಕರಡ್ಡಿ(ಇಂಗಳಗೇರಿ),ಎಸ್.ಜಿ.ನೀರಲಗಿ(ಕೊಣ್ಣೂರ),ಸAಗಣ್ಣ ಹೊಸಮನಿ(ಮಡಿಕೇಶ್ವರ),ಜ್ಯೋತಿ ಬಿರಾದಾರ(ಮಿಣಜಗಿ),ಎಸ್.ಎಸ್.ಪಾಟೀಲ(ಮುದ್ದೇಬಿಹಾಳ),ಬಸಮ್ಮ ಅಮಾತೆಗೌಡರ(ನಾಲತವಾಡ),,VIJAYALAXMI ಭೋವಿ(ರಕ್ಕಸಗಿ), ಎಸ್.ಐ.ಪತ್ತಾರ(ತಾಳಿಕೋಟಿ), ವಿ.ಎಸ್.ತೆಗ್ಗಿ(ತಂಗಡಗಿ), ಜಿ.ಬಿ.ಬಿರಾದಾರ(ತುಂಬಗಿ), ಭೀಮಪ್ಪ ಮಾದರ(ಹುಲ್ಲೂರ), ಎಂ.ಬಿ.ಪಾಟೀಲ(ಹಿರೇಮುರಾಳ), ಆರ್.ಎಂ.ಲಮಾಣಿ(ಯರಝರಿ),ಬಿ.ಎ.ಉಡಚಣಕರ(ಹುಲ್ಲೂರ ಉರ್ದು),ವಾಯ್.ಎಸ್.ಖಾದ್ರಿ(ಬಿದರಕುಂದಿ ಉರ್ದು),ಎಚ್.ಎಂ.ಮಕಾನದಾರ(ಕೊಣ್ಣೂರ ಉರ್ದು),ಯಮನಪ್ಪ ಬಾಗೇವಾಡಿ(ಹುಲ್ಲೂರ),ಎಂ.ಬಿ.ಗುಡಗುOಟಿ(ಹಡಲಗೇರಿ),ನಿOಗಪ್ಪ ದೊಡಮನಿ(ಹಡಲಗೇರಿ),ಅಬ್ದುಲರಶೀದ ಜಮಾದಾರ(ಮುದ್ದೇಬಿಹಾಳ ಉರ್ದು ),ಚಿದಾನಂದ ಗುಡ್ಡದ(ಕೊಡಗಾನೂರ) ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,