ಅಂಗನವಾಡಿ ನೌಕರರಿಂದ ಧರಣಿ ಸತ್ಯಾಗ್ರಹ:ಸಿಡಿಪಿಒ, ಮೇಲ್ವಿಚಾರಕಿ ಅಮಾನತಿಗೆ ಆಗ್ರಹಿಸಿ ಧರಣಿ

ಅಂಗನವಾಡಿ ನೌಕರರಿಂದ ಧರಣಿ ಸತ್ಯಾಗ್ರಹ:ಸಿಡಿಪಿಒ, ಮೇಲ್ವಿಚಾರಕಿ ಅಮಾನತಿಗೆ ಆಗ್ರಹಿಸಿ ಧರಣಿ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರ ಸಂಖ್ಯೆ 1 ಕಾರ್ಯಕರ್ತೆ ಶಾಂತಾ ಮಾಮನಿ ಅವರಿಗೆ ಆಗಿರುವ ಅನ್ಯಾಯ ಸರಿಪಡಿಸಬೇಕು. ಕಾರ್ಯಕರ್ತೆಯರ ಮಧ್ಯೆ ಜಗಳ ಹಚ್ಚಿರುವ ಸಿಡಿಪಿಒ ಶಿವಮೂರ್ತಿ ಕುಂಬಾರ ಹಾಗೂ ಮೇಲ್ವಿಚಾರಕಿ ಶಾಂತಾ ಗುಮಶೆಟ್ಟಿ ಅವರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಸೋಮವಾರದಿಂದ ಇಲ್ಲಿನ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಹಾಗೂ ಸಹಾಯಕಿಯರ ಸೇವಾ ಸಂಘದ ಪದಾಧಿಕಾರಿಗಳು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದರು.

ಅಂಗನವಾಡಿ ಕೇಂದ್ರಗಳಲ್ಲಿ ಸೇವೆ ಸಲ್ಲಿಸಿ ಕೇಂದ್ರಗಳ ಅವಧಿ ಮುಗಿದ ನಂತರ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಧರಣಿಯಲ್ಲಿ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷೆ ನೀಲಮ್ಮ ಪಾಟೀಲ್(ಬೋರಾವತ್) ಮಾತನಾಡಿ, ಶಾಂತಾ ಮಾಮನಿ ಅವರು ಕಾನೂನು ಬದ್ಧವಾಗಿ ಅಲ್ಲಿನ ನಿವಾಸಿಗಳಿಗೆ ಒಳ್ಳೆಯ ಸೇವೆ ನೀಡಿದ್ದರೂ ಸಿಡಿಪಿಒ ಅವರ ಕುತಂತ್ರದಿAದ ರೇಣುಕಾ ಎಂಬ ಕಾರ್ಯಕರ್ತೆಗೆ ಅನುಕೂಲ ಮಾಡಿಕೊಡಲು ಹೆಚ್ಚುವರಿ ಆದೇಶ ಮಾಡಿ ಅನ್ಯಾಯ ಎಸಗಿದ್ದಾರೆ. ಈ ಬಗ್ಗೆ ಕೇಳಲು ಹೋದ ಕಾರ್ಯಕರ್ತೆ ಶಾಂತಾ ಮಾಮನಿ ಅವರಿಗೆ ರೇಣುಕಾ ಹಾಗೂ ಸಹಾಯಕಿ, ಅವರ ಪುತ್ರಿ ಆಗಮಿಸಿ ಕೇಂದ್ರದಲ್ಲಿ ಬಡಿದಿದ್ದಾರೆ. ಹೊಡೆದಾಡುವ ಮುನ್ನ ರೇಣುಕಾ ಅವರು ವ್ಯವಸ್ಥಿತವಾಗಿ ಕೆಲವರನ್ನು ಕರೆತಂದು ಘಟನೆಯ ವಿಡಿಯೋ ಚಿತ್ರೀಕರಣ ಮಾಡುವಂತೆ ಹೇಳುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.ಇದೊಂದು ಪೂರ್ವನಿಯೋಜಿತ ಕೃತ್ಯವಾಗಿದ್ದು ಶಾಂತಾ ಮಾಮನಿ ವಿರುದ್ಧ ದೂರು ದಾಖಲಿಸುವ ಕುತಂತ್ರವಾಗಿದೆ.ಇದಕ್ಕೆಲ್ಲ ಸಿಡಿಪಿಒ ಶಿವಮೂರ್ತಿ ಕುಂಬಾರ ಅವರೇ ನೇರ ಹೊಣೆಗಾರರು.ಪಿಲೇಕೆಮ್ಮ ನಗರದ ಕೇಂದ್ರದಿAದ ಸಂಗಮೇಶ್ವರ ನಗರದ ಅಂಗನವಾಡಿ ಕೇಂದ್ರಕ್ಕೆ ಶಾಂತಾ ಮಾಮನಿ ಅವರನ್ನು ವರ್ಗಾವಣೆ ಮಾಡಿರುವುದಾಗಿ ಹೇಳುತ್ತಿರುವ ಅಧಿಕಾರಿಗಳು ಅಲ್ಲಿಗೆ ಅವರನ್ನು ಹಾಜರುಪಡಿಸದೇ ಬಿಟ್ಟಿದ್ದೇಕೆ ? ಎಂದು ಪ್ರಶ್ನಿಸಿದರು.

ಶಾಂತಾ ಮಾಮನಿ ಅವರಷ್ಟೇ ಅಲ್ಲದೇ ತಾಲ್ಲೂಕಿನ ಹಲವು ಅಂಗನವಾಡಿ ನೌಕರರಿಗೆ ಸಿಡಿಪಿಒ ಕುಂಬಾರ ಅವರಿಂದ ಸಮಸ್ಯೆ ಆಗುತ್ತಿದೆ. ಕಾರ್ಯಕರ್ತೆಯ ವರ್ಗಾವಣೆಗೆ ಶಾಸಕರು ಪತ್ರ ಕೊಟ್ಟಿದ್ದಾರೆ ಎಂಬುದನ್ನು ನಾವು ನಂಬುವುದಿಲ್ಲ ಎಂದು ಹೇಳಿದರು.

ಕಾರ್ಯಕರ್ತೆ ಶಾಂತಾ ಮಾಮನಿ ಮಾತನಾಡಿ, ನಾನು ಕಳೆದ 30 ವರ್ಷಗಳಿಂದ ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದೇನೆ.ನನಗೆ ಅಲ್ಲಿನ ಪುರಸಭೆ ಸದಸ್ಯೆಯ ಪುತ್ರನಿಂದ ಕಿರುಕಳ ಆಗುತ್ತಿದೆ. ಈ ಬಗ್ಗೆ ಸಾಕಷ್ಟು ಬಾರಿ ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಏಕಾಂಗಿಯಾಗಿ ಹೋರಾಟ ಮಾಡಿದ್ದೇನೆ. ರೇಣುಕಾ ಅವರನ್ನು ಕೇಂದ್ರಕ್ಕೆ ತರಬೇಕು.ನನ್ನನ್ನು ಅಲ್ಲಿಂದ ಬೇರೆ ಕಳಿಸಬೇಕು ಎಂಬುದು ಇವರ ದುರುದ್ದೇಶವಾಗಿದೆ ಎಂದು ದೂರಿದರು.

ಈ ಸಂದರ್ಭದಲ್ಲಿ ಕಾರ್ಯಕರ್ತೆಯರಾದ ಶೋಭಾ ಘಾಟಗೆ, ಶೋಭಾ ಕಾಖಂಡಕಿ, ವಿದ್ಯಾ ಮುರಾಳ, ಗುರುಬಾಯಿ ಕಾಳಗಿ, ಶಮಶ್ಯಾದ ಹುಣಶ್ಯಾಳ, ಸುನೀತ, ನೀಲಮ್ಮ ತೊಂಡಿಹಾಳ, ಮಂಜುಳಾ ಜಾಧವ, ಅಂಬುಜಾ ಕುಲಕರ್ಣಿ, ನಿರ್ಮಲಾ ನಾಶಿ, ರಾಜೇಶ್ವರಿ ಮಮದಾಪೂರ, ಷರೀಫಾ ಸಗರ,ಜೈಬುನ್ನಿಸಾ ದಿಡ್ಡಿಮನಿ ಇದ್ದರು.


ಹೋರಾಟಕ್ಕೆ ಬರುವಾಗ ಕಾರು ಅಡ್ಡಗಟ್ಟಿದ್ದಾರೆ:
ಸಿಡಿಪಿಒ ವಿರುದ್ಧ ಹೋರಾಟಕ್ಕೆ ಬರುವಾಗ ನನ್ನ ಕಾರನ್ನು ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ವ್ಯಕ್ತಿಗಳು ಅಡ್ಡಗಟ್ಟಿದರು ಎಂದು ಅಂಗನವಾಡಿ ನೌಕರರ ಸಂಘಟನೆ ರಾಜ್ಯಾಧ್ಯಕ್ಷೆ ನೀಲಮ್ಮ ಪಾಟೀಲ್ ದೂರಿದರು. ಕುಂಟೋಜಿ ಚರ್ಚ್ ದಾಟಿ ಬರುವ ರಸ್ತೆಯಲ್ಲಿ ನಾಲ್ವರು ರಸ್ತೆಯ ಮಧ್ಯೆಯೇ ಕಾರು ನಿಲ್ಲಿಸಿ ಹೋರಾಟಕ್ಕೆ ಏಕೆ ಹೊರಟಿದ್ದೀರಿ ಎಂದು ಪ್ರಶ್ನಿಸಿದರಲ್ಲದೇ ಕಾರಿನಿಂದ ಕೆಳಗಿಳಿಯುವಂತೆ ದಬಾಯಿಸಿದ್ದಾರೆ.ಆದರೆ ನಾನು ರಸ್ತೆಯಲ್ಲಿ ಇತರ ವಾಹನಗಳ ಚಾಲಕರ ಸಹಾಯದಿಂದ ಮುದ್ದೇಬಿಹಾಳದ ಹೋರಾಟದ ಸ್ಥಳಕ್ಕೆ ಬಂದಿದ್ದೇನೆ. ಹೋರಾಟ ಮಾಡುವುದಕ್ಕೂ ಅಧಿಕಾರಿಗಳು ಬೆದರಿಕೆ ಹಾಕುತ್ತಿದ್ದಾರೆ ಎಂದು ನೀಲಮ್ಮ ಆರೋಪಿಸಿದರು.

.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ