ಅಂಗನವಾಡಿ ನೌಕರರಿಂದ ಧರಣಿ ಸತ್ಯಾಗ್ರಹ:ಸಿಡಿಪಿಒ, ಮೇಲ್ವಿಚಾರಕಿ ಅಮಾನತಿಗೆ ಆಗ್ರಹಿಸಿ ಧರಣಿ

ಅಂಗನವಾಡಿ ನೌಕರರಿಂದ ಧರಣಿ ಸತ್ಯಾಗ್ರಹ:ಸಿಡಿಪಿಒ, ಮೇಲ್ವಿಚಾರಕಿ ಅಮಾನತಿಗೆ ಆಗ್ರಹಿಸಿ ಧರಣಿ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರ ಸಂಖ್ಯೆ 1 ಕಾರ್ಯಕರ್ತೆ ಶಾಂತಾ ಮಾಮನಿ ಅವರಿಗೆ ಆಗಿರುವ ಅನ್ಯಾಯ ಸರಿಪಡಿಸಬೇಕು. ಕಾರ್ಯಕರ್ತೆಯರ ಮಧ್ಯೆ ಜಗಳ ಹಚ್ಚಿರುವ ಸಿಡಿಪಿಒ ಶಿವಮೂರ್ತಿ ಕುಂಬಾರ ಹಾಗೂ ಮೇಲ್ವಿಚಾರಕಿ ಶಾಂತಾ ಗುಮಶೆಟ್ಟಿ ಅವರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಸೋಮವಾರದಿಂದ ಇಲ್ಲಿನ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಹಾಗೂ ಸಹಾಯಕಿಯರ ಸೇವಾ ಸಂಘದ ಪದಾಧಿಕಾರಿಗಳು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದರು.

ಅಂಗನವಾಡಿ ಕೇಂದ್ರಗಳಲ್ಲಿ ಸೇವೆ ಸಲ್ಲಿಸಿ ಕೇಂದ್ರಗಳ ಅವಧಿ ಮುಗಿದ ನಂತರ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಧರಣಿಯಲ್ಲಿ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷೆ ನೀಲಮ್ಮ ಪಾಟೀಲ್(ಬೋರಾವತ್) ಮಾತನಾಡಿ, ಶಾಂತಾ ಮಾಮನಿ ಅವರು ಕಾನೂನು ಬದ್ಧವಾಗಿ ಅಲ್ಲಿನ ನಿವಾಸಿಗಳಿಗೆ ಒಳ್ಳೆಯ ಸೇವೆ ನೀಡಿದ್ದರೂ ಸಿಡಿಪಿಒ ಅವರ ಕುತಂತ್ರದಿAದ ರೇಣುಕಾ ಎಂಬ ಕಾರ್ಯಕರ್ತೆಗೆ ಅನುಕೂಲ ಮಾಡಿಕೊಡಲು ಹೆಚ್ಚುವರಿ ಆದೇಶ ಮಾಡಿ ಅನ್ಯಾಯ ಎಸಗಿದ್ದಾರೆ. ಈ ಬಗ್ಗೆ ಕೇಳಲು ಹೋದ ಕಾರ್ಯಕರ್ತೆ ಶಾಂತಾ ಮಾಮನಿ ಅವರಿಗೆ ರೇಣುಕಾ ಹಾಗೂ ಸಹಾಯಕಿ, ಅವರ ಪುತ್ರಿ ಆಗಮಿಸಿ ಕೇಂದ್ರದಲ್ಲಿ ಬಡಿದಿದ್ದಾರೆ. ಹೊಡೆದಾಡುವ ಮುನ್ನ ರೇಣುಕಾ ಅವರು ವ್ಯವಸ್ಥಿತವಾಗಿ ಕೆಲವರನ್ನು ಕರೆತಂದು ಘಟನೆಯ ವಿಡಿಯೋ ಚಿತ್ರೀಕರಣ ಮಾಡುವಂತೆ ಹೇಳುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.ಇದೊಂದು ಪೂರ್ವನಿಯೋಜಿತ ಕೃತ್ಯವಾಗಿದ್ದು ಶಾಂತಾ ಮಾಮನಿ ವಿರುದ್ಧ ದೂರು ದಾಖಲಿಸುವ ಕುತಂತ್ರವಾಗಿದೆ.ಇದಕ್ಕೆಲ್ಲ ಸಿಡಿಪಿಒ ಶಿವಮೂರ್ತಿ ಕುಂಬಾರ ಅವರೇ ನೇರ ಹೊಣೆಗಾರರು.ಪಿಲೇಕೆಮ್ಮ ನಗರದ ಕೇಂದ್ರದಿAದ ಸಂಗಮೇಶ್ವರ ನಗರದ ಅಂಗನವಾಡಿ ಕೇಂದ್ರಕ್ಕೆ ಶಾಂತಾ ಮಾಮನಿ ಅವರನ್ನು ವರ್ಗಾವಣೆ ಮಾಡಿರುವುದಾಗಿ ಹೇಳುತ್ತಿರುವ ಅಧಿಕಾರಿಗಳು ಅಲ್ಲಿಗೆ ಅವರನ್ನು ಹಾಜರುಪಡಿಸದೇ ಬಿಟ್ಟಿದ್ದೇಕೆ ? ಎಂದು ಪ್ರಶ್ನಿಸಿದರು.

ಶಾಂತಾ ಮಾಮನಿ ಅವರಷ್ಟೇ ಅಲ್ಲದೇ ತಾಲ್ಲೂಕಿನ ಹಲವು ಅಂಗನವಾಡಿ ನೌಕರರಿಗೆ ಸಿಡಿಪಿಒ ಕುಂಬಾರ ಅವರಿಂದ ಸಮಸ್ಯೆ ಆಗುತ್ತಿದೆ. ಕಾರ್ಯಕರ್ತೆಯ ವರ್ಗಾವಣೆಗೆ ಶಾಸಕರು ಪತ್ರ ಕೊಟ್ಟಿದ್ದಾರೆ ಎಂಬುದನ್ನು ನಾವು ನಂಬುವುದಿಲ್ಲ ಎಂದು ಹೇಳಿದರು.

ಕಾರ್ಯಕರ್ತೆ ಶಾಂತಾ ಮಾಮನಿ ಮಾತನಾಡಿ, ನಾನು ಕಳೆದ 30 ವರ್ಷಗಳಿಂದ ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದೇನೆ.ನನಗೆ ಅಲ್ಲಿನ ಪುರಸಭೆ ಸದಸ್ಯೆಯ ಪುತ್ರನಿಂದ ಕಿರುಕಳ ಆಗುತ್ತಿದೆ. ಈ ಬಗ್ಗೆ ಸಾಕಷ್ಟು ಬಾರಿ ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಏಕಾಂಗಿಯಾಗಿ ಹೋರಾಟ ಮಾಡಿದ್ದೇನೆ. ರೇಣುಕಾ ಅವರನ್ನು ಕೇಂದ್ರಕ್ಕೆ ತರಬೇಕು.ನನ್ನನ್ನು ಅಲ್ಲಿಂದ ಬೇರೆ ಕಳಿಸಬೇಕು ಎಂಬುದು ಇವರ ದುರುದ್ದೇಶವಾಗಿದೆ ಎಂದು ದೂರಿದರು.

ಈ ಸಂದರ್ಭದಲ್ಲಿ ಕಾರ್ಯಕರ್ತೆಯರಾದ ಶೋಭಾ ಘಾಟಗೆ, ಶೋಭಾ ಕಾಖಂಡಕಿ, ವಿದ್ಯಾ ಮುರಾಳ, ಗುರುಬಾಯಿ ಕಾಳಗಿ, ಶಮಶ್ಯಾದ ಹುಣಶ್ಯಾಳ, ಸುನೀತ, ನೀಲಮ್ಮ ತೊಂಡಿಹಾಳ, ಮಂಜುಳಾ ಜಾಧವ, ಅಂಬುಜಾ ಕುಲಕರ್ಣಿ, ನಿರ್ಮಲಾ ನಾಶಿ, ರಾಜೇಶ್ವರಿ ಮಮದಾಪೂರ, ಷರೀಫಾ ಸಗರ,ಜೈಬುನ್ನಿಸಾ ದಿಡ್ಡಿಮನಿ ಇದ್ದರು.


ಹೋರಾಟಕ್ಕೆ ಬರುವಾಗ ಕಾರು ಅಡ್ಡಗಟ್ಟಿದ್ದಾರೆ:
ಸಿಡಿಪಿಒ ವಿರುದ್ಧ ಹೋರಾಟಕ್ಕೆ ಬರುವಾಗ ನನ್ನ ಕಾರನ್ನು ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ವ್ಯಕ್ತಿಗಳು ಅಡ್ಡಗಟ್ಟಿದರು ಎಂದು ಅಂಗನವಾಡಿ ನೌಕರರ ಸಂಘಟನೆ ರಾಜ್ಯಾಧ್ಯಕ್ಷೆ ನೀಲಮ್ಮ ಪಾಟೀಲ್ ದೂರಿದರು. ಕುಂಟೋಜಿ ಚರ್ಚ್ ದಾಟಿ ಬರುವ ರಸ್ತೆಯಲ್ಲಿ ನಾಲ್ವರು ರಸ್ತೆಯ ಮಧ್ಯೆಯೇ ಕಾರು ನಿಲ್ಲಿಸಿ ಹೋರಾಟಕ್ಕೆ ಏಕೆ ಹೊರಟಿದ್ದೀರಿ ಎಂದು ಪ್ರಶ್ನಿಸಿದರಲ್ಲದೇ ಕಾರಿನಿಂದ ಕೆಳಗಿಳಿಯುವಂತೆ ದಬಾಯಿಸಿದ್ದಾರೆ.ಆದರೆ ನಾನು ರಸ್ತೆಯಲ್ಲಿ ಇತರ ವಾಹನಗಳ ಚಾಲಕರ ಸಹಾಯದಿಂದ ಮುದ್ದೇಬಿಹಾಳದ ಹೋರಾಟದ ಸ್ಥಳಕ್ಕೆ ಬಂದಿದ್ದೇನೆ. ಹೋರಾಟ ಮಾಡುವುದಕ್ಕೂ ಅಧಿಕಾರಿಗಳು ಬೆದರಿಕೆ ಹಾಕುತ್ತಿದ್ದಾರೆ ಎಂದು ನೀಲಮ್ಮ ಆರೋಪಿಸಿದರು.

.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ