ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದಲ್ಲಿರುವ ಕೃಷಿ ಸಹಕಾರಿ ಸಂಘಗಳನ್ನು ರೈತರು ನಿರಂತರವಾಗಿ ಆರ್ಥಿಕ ಚಟುವಟಿಕೆಗಳನ್ನು ಕೈಗೊಂಡು ಅವುಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹಡಲಗೇರಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಗಣ್ಣ ಮುದ್ನಾಳ ಹೇಳಿದರು.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada
ತಾಲ್ಲೂಕಿನ ಹಡಲಗೇರಿ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ 13ನೇ ವಾರ್ಷಿಕ ಸಭೆಯಲ್ಲಿ ವಾರ್ಷಿಕ ವರದಿ ಮಂಡಿಸಿ ಅವರು ರೈತರು ಹೆಚ್ಚಿನ ಶೇರು ಬಂಡವಾಳ ಹಾಗೂ ಉಳಿತಾಯ ಖಾತೆಯಲ್ಲಿ ಹಣ ತೊಡಗಿಸುವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಸಂಘದ ಅಧ್ಯಕ್ಷ ಶಿವಸಂಗಪ್ಪ ಇಟಗಿ,ಉಪಾಧ್ಯಕ್ಷ ಶಿವಾಜಿ ಚೌಹಾಣ್, ನಿರ್ದೇಶಕರು ಹಾಗೂ ಗ್ರಾಹಕರು ಇದ್ದರು.
ಕೆ ಎಸ್ ಆರ್ ಟಿ ಸಿ ಯ ನಿವೃತ್ತ ಅಧಿಕಾರಿ ಬಸವರಾಜ ಬಿರಾದಾರ ಮಾತನಾಡಿದರು.
ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಪಿಯುಸಿಯಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳನು ಸನ್ಮಾನಿಸಲಾಯಿತು.
ಇದನ್ನೂ ಓದಿ: Rain update: ಭಾರೀ ಮಳೆಗೆ ಒಂದೇ ಕುಟುಂಬದ ಮೂವರು ಸೇರಿ ಸಿಡಿಲಿಗೆ ನಾಲ್ವರ ದುರ್ಮರಣ