ಬೆಳಗಾವಿ : ಹಾಸ್ಟೆಲ್ ನಲ್ಲಿ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿಯೊಬ್ಬರು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ (Student suicide case) ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನೀಡಸೋಸಿ ಗ್ರಾಮದಲ್ಲಿ ಸಂಭವಿಸಿದೆ.
Join Our Telegram: https://t.me/dcgkannada
ಹೌದು, ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನೀಡಸೋಸಿ ಗ್ರಾಮದ ಶ್ರೀ ನೀಡಸೋಸಿ ಜಗದ್ಗುರು ಪಂಚಮ ನಿಜಲಿಂಗೇಶ್ವರ ಕಾಲೇಜು ಆವರಣದಲ್ಲಿರುವ ಹಾಸ್ಟೆಲ್ ನಲ್ಲಿ ಈ ಅವಘಡ ಸಂಭವಿಸಿದೆ.
ಮಹಾರಾಷ್ಟ್ರದ ಸಾಂಗ್ಲಿ ಮೂಲದ ಮಯೂರ ಕುಂಬಾರ್ (17) ನೇಣಿಗೆ ಶರಣಾದ ವಿದ್ಯಾರ್ಥಿ (Student suicude case) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: Cubbon park: ವೃದ್ಧನಿಂದ ಹೀನ ಕೃತ್ಯ.. ಕಬ್ಬನ್ ಪಾರ್ಕ್ ನಲ್ಲಿ ಮಹಿಳೆಯರ ಎದುರೇ ಹಸ್ತಮೈಥುನ.. (ವೈರಲ್ ವಿಡಿಯೋ ನೋಡಿ)
ಮೃತ ಮಯೂರ್ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ. ಹಾಸ್ಟೆಲ್ ರೂಂ ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೋಷಕರು ಸ್ಥಳಕ್ಕೆ ಬಂದ ನಂತರ ಮರಣೋತ್ತರ ಪರೀಕ್ಷೆಗೆ ಶವ ಸ್ಥಳಾಂತರ ಗೊಳಿಸಲಾಯಿತು.
ಈ ಘಟನೆ ಕುರಿತು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಮೇಲೆ ಡೀಸೆಲ್ ಸುರಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣು
ಚಿಂಚೋಳಿ: ತನ್ನ ಮೈಮೇಲೆ ತಾನೇ ಡೀಸೆಲ್ ಅನ್ನು ಸುರಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ದುರ್ಘಟನೆ ಬೆಳಕಿಗೆ ಬಂದಿದೆ.
ಹೌದು, ಆ.16ರ ಶುಕ್ರವಾರ ಸಂಜೆ ತಾಲೂಕಿನ ಪೊಲೀಸ್ ಠಾಣೆ ವ್ಯಾಪ್ತಿಯ ಚಿಂಚೋಳಿ- ಮನ್ನಾಎಕ್ಕೆಳ್ಳಿ ರಾಜ್ಯ ಹೆದ್ದಾರಿಯ ಫತ್ತೆಪುರ ಗ್ರಾಮದ ಕ್ರಾಸ್ ನಲ್ಲಿ ಸಂಭವಿಸಿದೆ ಎಂದು ಪಿ.ಎಸ್.ಐ.ಗಂಗಮ್ಮ ಮಾಹಿತಿ ನೀಡಿದ್ದಾರೆ.
ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ರೇಕುಳಗಿ ಗ್ರಾಮದ ಮಹೇಶ್ ಮಾರುತಿ ನಾಗನಕೇರಾ(27) ಆತ್ಮಹತ್ಯೆಗೆ (Suicide case) ಶರಣಾದ ವ್ಯಕ್ತಿ ಎಂದು ತಿಳಿದು ಬಂದಿದೆ.
ಮಹೇಶ್ ಮಾರುತಿ ಹೆಂಡತಿಯ ತವರು ಮನೆಯಲ್ಲಿ ಹೆಂಡತಿ ಮಕ್ಕಳೊಂದಿಗೆ ವಾಸವಾಗಿರುತ್ತಿದ್ದು. ಸಾವಿಗೆ ಕಾರಣ ತಿಳಿದು ಬಂದಿಲ್ಲ. ಈ ಹಿಂದೊಮ್ಮೆ ಆತ ಆತ್ಮಹತ್ಯೆ (Suicide case) ಮಾಡಿಕೊಳ್ಳಲು ಯತ್ನಿಸಿದ್ದ. ಈತ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂದು ಚಿಂಚೋಳಿ ಪೋಲಿಸ್ ಠಾಣೆಯ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.
ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮೃತಪಟ್ಟ ಮಹೇಶ್, ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.