Sudden sit-in by Gramam member: Allegedly demanding bribe for payment of Narega wages

ಗ್ರಾಪಂ ಸದಸ್ಯನಿಂದ ದಿಢೀರ್ ಧರಣಿ: ನರೇಗಾ ಕೂಲಿ ಹಣ ಪಾವತಿಗೆ ಲಂಚಕ್ಕೆ ಬೇಡಿಕೆ ಆರೋಪ

ಗ್ರಾಪಂ ಸದಸ್ಯನಿಂದ ದಿಢೀರ್ ಧರಣಿ: ನರೇಗಾ ಕೂಲಿ ಹಣ ಪಾವತಿಗೆ ಲಂಚಕ್ಕೆ ಬೇಡಿಕೆ ಆರೋಪ

ಮುದ್ದೇಬಿಹಾಳ : ಹುಲ್ಲೂರು ಗ್ರಾಮ ಪಂಚಾಯಿತಿಯಲ್ಲಿ 40 ಕೂಲಿಕಾರರು ಕೆಲಸ ಮಾಡಿದ್ದು ಅವರಿಗೆ ಬಿಲ್ ಪಾವತಿಸುವಂತೆ ಕೇಳಿದರೆ ಇಲ್ಲಿನ ತಾಪಂ ಕಚೇರಿಯ ಜೆ.ಇ ಉಮೇಶ ಕನ್ನಿ, ತಾಲ್ಲೂಕ ಸಂಯೋಜಕ ಶಂಕರಗೌಡ ಯಾಳವಾರ ಪರ್ಸೆಂಟೇಜ್‌ಗೆ ಬೇಡಿಕೆ ಇಡುತ್ತಿದ್ದಾರೆ. ಪರ್ಸೆಂಟೇಜ್ ಕೊಡದಿದ್ದರೆ ಬಿಲ್ ಮಾಡುವುದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಆರೋಪಿಸಿ ತಾಲ್ಲೂಕಿನ ಹುಲ್ಲೂರು ಗ್ರಾಪಂ ಸದಸ್ಯ ಶಿವಾನಂದ ಲಮಾಣಿ ತಾಪಂ ಕಚೇರಿ ಮುಂದೆ ಗುರುವಾರ ದಿಢೀರ್ ಧರಣಿ ನಡೆಸಿದರು.

ತಾಪಂ ಕಚೇರಿ ಮುಂದೆ ಏಕಾಂಗಿಯಾಗಿ ಧರಣಿ ನಡೆಸುತ್ತಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ತಾಲ್ಲೂಕಿನ ಹುಲ್ಲೂರ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಎಮ್.ಜಿ.ಎನ್.ಆರ್.ಜಿ ಬಿಲ್ ಪಾವತಿಸದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಜು. 4 ರಂದು ಕಾಮಗಾರಿ ಮುಕ್ತವಾಗಿದ್ದು ಸರಕಾರದ ಸುತ್ತೋಲೆಯಲ್ಲಿ ಕೂಲಿಕಾರ ಬಿಲ್ ಪಾವತಿಸಲು ಕೆಲಸ ಮುಗಿದ ಮೂರು ದಿನಗಳಲ್ಲಿ ಬಿಲ್‌ಪಾವತಿಸಲು ಆದೇಶ ಇದ್ದರೂ ಇಲ್ಲಿನ ಅಧಿಕಾರಿಗಳು ಎಂ.ಐ.ಎಸ್ ಮಾಡಲು ನಿರಾಕರಿಸಿದ್ದಾರೆ ಎಂದು ದೂರಿದರು.

ಈ ಕುರಿತು ತಾಪಂ ಇಒ ಗಮನಕ್ಕೆ ತಂದರೂ ಅವರು ಕೂಲಿಕಾರರ ಕೂಲಿ ಪಾವತಿಗೆ ಸಂಬಂಧಿಸಿದವರಿಗೆ ಸೂಚಿಸದೇ ಮೌನವಾಗಿದ್ದಾರೆ. ಲಂಚ ಕೊಡದಿದ್ದರೆ ಬಿಲ್ ಮಾಡುವುದಿಲ್ಲ. ಯಾರ ಮುಂದೆ ಹೇಳಿಕೊಳ್ಳುತ್ತಿರೋ ಹೇಳಿಕೊಳ್ಳಿ ಎಲ್ಲರಿಗೂ ನಾವು ಲಂಚ ಮುಟ್ಟಿಸುತ್ತೇವೆ ಎಂದು ಹೇಳಿದ್ದು ಇವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಅವರು ಆಗ್ರಹಿಸಿದರು.

ಏಕಾಂಗಿಯಾಗಿ ಧರಣಿ ನಡೆಸುತ್ತಿದ್ದ ಗ್ರಾಪಂ ಸದಸ್ಯ ಶಿವಾನಂದ ಅವರನ್ನು ಭೇಟಿ ಮಾಡಿದ ತಾಪಂ ಯೋಜನಾಧಿಕಾರಿ ಖೂಭಾಸಿಂಗ ಜಾಧವ, ನೀವು ಇಲ್ಲಿ ಪ್ರತಿಭಟನೆ ಮಾಡಿದರೆ ಯಾರೂ ಕೇಳುವುದಿಲ್ಲ. ಜಿಪಂ ಆವರಣದಲ್ಲಿ ಧರಣಿ ಮಾಡಿ ಎಂದು ಬೇಜವಬ್ದಾರಿಯಿಂದ ಉತ್ತರಿಸಿದ್ದಾರೆ ಎಂದು ಆರೋಪಿಸಿದರು.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ