Suicide: A boy commits suicide due to fear of arrest

Suicide: ಬಂಧನ ಭೀತಿ, ಮನನೊಂದು ಬಾಲಕ ಆತ್ಮಹತ್ಯೆ

Suicide: ಬಂಧನ ಭೀತಿ, ಮನನೊಂದು ಬಾಲಕ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ನೆರೆ-ಹೊರೆ ಮನೆಯ ನಿವಾಸಿಗಳಿಂದ ವಿವಾದಿತ ರಸ್ತೆ ಜಾಗದ ವಿಚಾರವಾಗಿ ಜಗಳದಿಂದ ಮನನೊಂದು ಬಾಲಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ತಾಲ್ಲೂಕಿನ ಕವರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಕವರನಹಳ್ಳಿ ಗ್ರಾಮದ ಮಂಜುನಾಥ್ ಹಾಗೂ ಪುಷ್ಪ ದಂಪತಿಯ ಮಗ ಸುದೀಪ್ (16) ಆತ್ಮಹತ್ಯೆಗೆ ಶರಣಾದ ಬಾಲಕ ಎಂದು ಗುರುತಿಸಲಾಗಿದೆ.

ಶುಕ್ರವಾರ ಸಂಜೆ ಗ್ರಾಮದ ರಾಮಯ್ಯ-ಲಕ್ಷ್ಮಮ್ಮ ದಂಪತಿ, ಲಕ್ಷಯ್ಯ-ಆಶಮ್ಮ ದಂಪತಿಗಳು ಎಲ್ಲರೂ ಸೇರಿ ವಿವಾದಿತ ರಸ್ತೆಯಲ್ಲಿ ನಡೆದು ಬರುತ್ತಿದ್ದ ಬಾಲಕ ಸುದೀಪ್ ಮತ್ತು ಆತನ ತಂಗಿಯೊಂದಿಗೆ ವಿನಾ ಕಾರಣ ಜಗಳ ಮಾಡಿ ಹಲ್ಲೆ ನಡೆಸಿದರಂತೆ ಈ ವೇಳೆ ಕೋಪಗೊಂಡ ಬಾಲಕ ಇಟ್ಟಿಗೆನ್ನು ಎಸೆದಿದ್ದು ರಾಮಯ್ಯನಿಗೆ ಗಾಯವಾಗಿದೆ. ಈ ಕುರಿತು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಬಾಲಕ ಹಾಗೂ ಆತನ ತಂದೆ ವಿರುದ್ಧ ದೂರು ನೀಡಿದ್ದರು.

ಹೀಗಾಗಿ, ನಿಮ್ಮನ್ನ ಜೈಲಿಗೆ ಹಾಕಿಸುವವರೆಗೂ ಬಿಡುವುದಿಲ್ಲ ಎಂದು ಎರಡು ಕುಟುಂಬದವರು ಬೆದರಿಕೆ ಹಾಕಿದ್ದಾರಂತೆ. ಇದರಿಂದ ಹೆದರಿದ ಬಾಲಕ ಶನಿವಾರ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ.

ಘಟನೆ ನಂತರ ಆಶಮ್ಮ ಹಾಗೂ ಲಕ್ಷ್ಮಮ್ಮನವರ ಕುಟುಂಬಸ್ಥರು ಮನೆಗಳಿಗೆ ಬೀಗಗಳನ್ನು ಜಡಿದು ಪರಾರಿಯಾಗಿದ್ದಾರೆ.

ಇದನ್ನೂ ಓದಿ: Koppal: ಮಕ್ಕಳಾಗದ ಕಾರಣಕ್ಕೆ ಪತಿಯಿಂದಲೇ ಪತ್ನಿಯ ಕೊಲೆ?

ಈ ಸಂಬಧವೂ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಕಳೆದ 2 ವರ್ಷಗಳಿಂದ 8 ಅಡಿ ರಸ್ತೆ ವಿಚಾರ ವಾಗಿ ಎರಡು ಕುಟುಂಬಗಳ ಜೊತೆ ಮೃತ ತಂದೆ ತಾಯಿ ಜಗಳವಾಡುತ್ತಿದ್ದರು ಎನ್ನಲಾಗಿದೆ.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ