ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಆರಂಭೋತ್ಸವ ಸರಳವಾಗಿ ನಡೆಸಲಾಯಿತು.
ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಅವರ ನೇತೃತ್ವದಲ್ಲಿ ಶಿಕ್ಷಕರು ಸರಸ್ವತಿ ದೇವಿ ಚಿತ್ರಕ್ಕೆ ಪೂಜೆ ಸಲ್ಲಿಸಿದರು.ಇದೇ ವೇಳೆ ಶಾಲೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿದ ತಹಶೀಲ್ದಾರ್ ಕೀರ್ತಿ ಚಾಲಕ್ ಅವರು, ಸರಸ್ವತಿ ದೇವಿಗೆ ನಮಿಸಿ ಶಾಲಾ ಮಕ್ಕಳಿಗೆ ಹೂವು ನೀಡಿ ಶಾಲಾ ಆರಂಭೋತ್ಸವಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.
ಇದೇ ವೇಳೆ ಮಾತನಾಡಿದ ತಹಶೀಲ್ದಾರ್ ಚಾಲಕ್ ಅವರು, ಗ್ರಾಮೀಣ ಭಾಗದಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡುವತ್ತ ಶಿಕ್ಷಕರು,ಪಾಲಕರು ಮುಂದಾಗಬೇಕು ಎಂದು ಸಲಹೆ ಮಾಡಿದರು.
ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ, ಶಾಲೆಯ ಮುಖ್ಯಗುರುಮಾತೆ ರೇಖಾ ಎಂ.ಎಸ್.,ಶಾಲೆಯ ಶಿಕ್ಷಕಿಯರು ಇದ್ದರು.







