ಸರ್ಕಾರಿ ಬಿಎಡ್ ಕಾಲೇಜು ಸ್ಥಾಪನೆಗೆ ಕ್ರಮ ಕೈಗೊಳ್ಳಿ

ಸರ್ಕಾರಿ ಬಿಎಡ್ ಕಾಲೇಜು ಸ್ಥಾಪನೆಗೆ ಕ್ರಮ ಕೈಗೊಳ್ಳಿ

ಮುದ್ದೇಬಿಹಾಳ : ತಾಲೂಕಿನಾದ್ಯಂತ ಪಿಯುಸಿ ಮತ್ತು ಪದವಿ ಕಾಲೇಜುಗಳ ಸಂಖ್ಯೆ ಸಾಕಷ್ಟು ಇದ್ದು ತಾಲ್ಲೂಕಿನಲ್ಲಿ ಸರ್ಕಾರಿ ಬಿಎಡ್ ಕಾಲೇಜು ಸ್ಥಾಪನೆಗೆ ಸರ್ಕಾರದ ಮೇಲೆ ಒತ್ತಡ ಹೇರುವಂತೆ ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬುಧವಾರ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ದಲಿತ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಮುತ್ತು ಚಲವಾದಿ ಮಾತನಾಡಿ, ಪ್ರತಿ ವರ್ಷ ಇಲ್ಲಿಂದ ಸಾವಿರಾರು ವಿದ್ಯಾರ್ಥಿ ವಿದ್ಯಾರ್ಥಿನಿಯರು, ಪದವೀಧರರಾಗಿ ಹೊರಗೆ ಬರುತ್ತಿದ್ದಾರೆ. ವಿವಿಧ ಪದವಿಗಳನ್ನು ಪಡೆದ ವಿದ್ಯಾರ್ಥಿಗಳು ಹೈಸ್ಕೂಲು ಮತ್ತು ಕಾಲೇಜುಗಳಲ್ಲಿ ಶಿಕ್ಷಕರಾಗಲು ಬಯಸಿದರೆ ಅವರಿಗೆ ತಮ್ಮ ಪದವಿಯ ನಂತರದಲ್ಲಿ ಬಿ.ಎಡ್ ಶಿಕ್ಷಣವನ್ನು ಪಡೆಯಲೇಬೇಕು. ಖಾಸಗಿ ಶಿಕ್ಷಣ ಸಂಸ್ಥೆಯೊAದರ ಅಡಿಯಲ್ಲಿ ಬಿ.ಎಡ್ ಕಾಲೇಜು ಇದ್ದರೂ ಅಲ್ಲಿ ವಿಪರೀತ ಶುಲ್ಕವನ್ನು ಕಟ್ಟಿ ಪ್ರವೇಶ ಪಡೆಯಲು ಬಡ ವಿದ್ಯಾರ್ಥಿಗಳಿಗೆ ಅಸಾಧ್ಯವಾಗಿದೆ ಎಂದು ಹೇಳಿದರು.

ಇಷ್ಟೊಂದು ಪ್ರಮಾಣದಲ್ಲಿ ಪದವಿ ಕಾಲೇಜುಗಳಿದ್ದರೂ ಪದವಿ ನಂತರದ ಶಿಕ್ಷಣ ಸೌಲಭ್ಯ ಇಲ್ಲದ್ದರಿಂದ ಪ್ರತಿವರ್ಷ ಸಾವಿರಾರು ವಿದ್ಯಾರ್ಥಿಗಳು ಅರ್ಧಕ್ಕೆ ತಮ್ಮ ಶಿಕ್ಷಣವನ್ನು ನಿಲ್ಲಿಸುತ್ತಿದ್ದಾರೆ.ಶಿಕ್ಷಕರಾಗುವ ಕನಸಿಗೆ ಇದು ಅಡ್ಡಿಯುಂಟಾಗಿದ್ದು ಚಳಿಗಾಲದ ಅಧಿವೇಶನದಲ್ಲಿ ಮುದ್ದೇಬಿಹಾಳಕ್ಕೆ ಸರಕಾರಿ ಬಿ.ಎಡ್ ಕಾಲೇಜು ಮಂಜೂರು ಮಾಡಿಸಿ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಅನುಕೂಲ ಒದಗಿಸಿಕೊಡಬೇಕು ಎಂದು ಮನವಿ ಮಾಡಿದರು.

ಈ ಸಮಯದಲ್ಲಿ ವಿದ್ಯಾರ್ಥಿಗಳಾದ ಬಸವರಾಜ ಮಹಾಲಿಂಗಪೂರ, ಅನಿಲ ರಾಠೋಡ, ಬಸಮ್ಮ ಬಿರಾದಾರ, ಸಂಗಮ್ಮ ನಾಟೀಕಾರ, ಸಹನಾ ಕಲಾಲ, ಅನಿಸ ಮೋಮಿನ, ದ್ಯಾಮಕ್ಕ ವಾಲೀಕಾರ, ಭಾಗ್ಯಶ್ರೀ ಬಿರಾದಾರ, ರಾಧಿಕಾ ಮಾಡಗಿ, ಪ್ರಜ್ವಲ ಪಾಟೀಲ್ , ಶ್ರಾವಣಿ ಬಡಿಗೇರ, ಅರ್ಪಿತಾ ಮುಚಖಂಡಿ ಸೇರಿದಂತೆ ಇನ್ನಿತರ ಸಮುದಾಯಗಳ ವಿದ್ಯಾರ್ಥಿಗಳು ಇದ್ದರು.

Latest News

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮುದ್ದೇಬಿಹಾಳ : ಮಕ್ಕಳ ಮನಸ್ಸಿನಲ್ಲಿ ಬಾಲ್ಯದಿಂದಲೇ ದೇಶಪ್ರೇಮದ ಬೀಜ ಬಿತ್ತಿ ಅವರನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಮುದ್ದೇಬಿಹಾಳ : ಕುಲಶಾಸ್ತ್ರಿಯ ಅಧ್ಯಯನದ ಕೊರತೆ, ಬಲಗೈ ಸಮುದಾಯದ ವಿರುದ್ಧ ದ್ವೇಷಪೂರಿತ ನಿರ್ಧಾರವಾಗಿರುವ ಒಳಮೀಸಲಾತಿ ಕೊಡುವ ಹಿನ್ನೆಲೆಯಲ್ಲಿ ನ್ಯಾ. ನಾಗಮೋಹನದಾಸ್ ನೀಡಿರುವ ವರದಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ತಾಲ್ಲೂಕು ಒಕ್ಕೂಟದ ನೇತೃತ್ವದಲ್ಲಿ ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಅಂಬೇಡ್ಕರ್ ಸರ್ಕಲ್‌ದಿಂದ ಆರಂಭಗೊಂಡ ಪ್ರತಿಭಟನೆ ಸಂಗೊಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ವೃತ್ತ, ತಹಸೀಲ್ದಾರ್ ಕಚೇರಿಗೆ ಆಗಮಿಸಿತು. ಮುಖಂಡ ಹರೀಶ ನಾಟೀಕಾರ, ಚೆನ್ನಪ್ಪ ವಿಜಯಕರ್