Talikoti Community Health Center doctors are not coming on time

ತಾಳಿಕೋಟಿ ಸಮುದಾಯ ಆರೋಗ್ಯ ಕೇಂದ್ರ ವೈದ್ಯರೇ ಸರಿಯಾದ ಸಮಯಕ್ಕೆ ಬರುತ್ತಿಲ್ಲ.

ತಾಳಿಕೋಟಿ ಸಮುದಾಯ ಆರೋಗ್ಯ ಕೇಂದ್ರ ವೈದ್ಯರೇ ಸರಿಯಾದ ಸಮಯಕ್ಕೆ ಬರುತ್ತಿಲ್ಲ.

ತಾಳಿಕೋಟಿ: ಆರೋಗ್ಯ ಸಮುದಾಯ ಕೇಂದ್ರದ ಆಡಳಿತದ ಪರಸ್ಥಿತಿ ದುರಾಡಳಿತ ಸಂಪೂರ್ಣ ಹದಗೆಟ್ಟು ಹೋಗಿದೆ. ಇಲ್ಲಿ ಕೇಳವರು-ಹೇಳುವವರು ಯಾರು ಇಲ್ಲದಂತಾಗಿದೆ.

ವಿಜಯಪುರ ಜಿಲ್ಲೆಯ ತಾಳಿಕೋಟಿಯ ಆರೋಗ್ಯ ಸಮುದಾಯ ಕೇಂದ್ರದಲ್ಲಿ ವೈದ್ಯರು ಸರಿಯಾದ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ. ಬೆಳಿಗ್ಗೆ 11 ಗಂಟೆಗೆ ಬಂದು 1 ಗಂಟೆಗೆ ಹೋದವರು ಕಾಣೆಯಾಗುತ್ತಾರೆ ಎಂದು ಸಾರ್ವಜನಿಕರು ತರಾಟೆಗೆ ತಗೆದು ಕೊಂಡಿದ್ದರು.

THO ಡಾ. ಸತೀಶ ತಿವಾರಿ ಇವರು
ಸಮುದಾಯ ಅರೋಗ್ಯ ಕೇಂದ್ರದಲ್ಲಿ ಆಡಳಿತದ ಸಿಬ್ಬಂದಿಗಳು ಸರಿಯಾದ ಸಮಯಕ್ಕೆ ನೌಕರಿಗೆ ಹಾಜರಾಗುತ್ತಾರೋ ಇಲ್ಲೋ ಎಂಬವುದನ್ನು ವೀಕ್ಷಿಸುವುದಿಲ್ಲ. ನಿರ್ಲಕ್ಷದಿಂದ ಜವಾಬ್ದಾರಿಯನ್ನು ಮರೆತು ಬಿಟ್ಟಿದ್ದಾರೆ. ಇಲ್ಲಿನ ಸರ್ಕಾರಿ ದವಾಖಾನೆಗೆ ಆಂಬುಲೆನ್ಸ್, ನಗು ಮಗು ವಾಹನ ಲಭ್ಯವಿಲ್ಲ. ಬಾಣಂತಿಯರು ಆಟೋ ಕಾರುಗಳನ್ನು ಬಾಡಿಗೆ ಮಾಡಿಕೊಂಡು ತಮ್ಮ ಸ್ಥಳಕ್ಕೆ ಹೋಗಬೇಕು. ಈ ಆರೋಗ್ಯ ಕೇಂದ್ರದ ಸದ್ಯದ ಪರಸ್ಥಿತಿ ಚಿಂತಾಜನಕವಾಗಿದೆ.

ಬೇಸಿಗೆ ಸಮಯದಲ್ಲಿ ಹೃದಯಘಾತಕ್ಕೆ ಸಂಬಂಧಿಸಿದ ರೋಗಿಗಳು ಬಂದ್ರೆ ಅವರಿಗೆ ಯಾವುದೇ ತರಹದ ಚಿಕಿತ್ಸೆ ಲಭಿಸುವ ಔಷಧಿ ವ್ಯವಸ್ಥೆ ಇಲ್ಲ. ಸರಿಯಾದ ಸಮಯದಲ್ಲಿ ಆಕ್ಸಿಜನ್ ಲಭ್ಯವಿರುವುದಿಲ್ಲ. ಶಸ್ತ್ರ ಚಿಕಿತ್ಸೆಗೆ ಅವಶ್ಯಕವಾಗಿರುವ ವಸ್ತುಗಳು ಸಹ ಲಭ್ಯ ಇಲ್ಲ. ಕೈ ಕಾಲು ಮುರಿದರೆ ಎಕ್ಸ್-ರೇ ಮಷಿನ್ ಇದ್ರೂ ಕೂಡಾ ಬಹಳ ದಿನದಿಂದ ಕೆಟ್ಟು ಹೋಗಿದ್ದು, ಸಾರ್ವಜನಿಕರೇ ರಿಪೇರಿ ಮಾಡಿಸುವಂತ ಪರಿಸ್ಥಿತಿ ಉಂಟಾಗಿದೆ. ರೋಗಿಗಳಿಗೆ ಖಾಸಗಿ ಆಸ್ಪತ್ರೆಗೆ ಹೋಗಿ ಎಂದು ಕಳಿಸುವ ವಿಧಾನ ಈ ತಾಳಿಕೋಟಿಯ ಅರೋಗ್ಯ ಸಮುದಾಯ ಕೇಂದ್ರದಲ್ಲಿ ನಿತ್ಯ ಕೇಳಿ ಬರುವ ಸಾಮಾನ್ಯ ಮಾತಾಗಿದೆ ಎಂದು ಆಸ್ಪತ್ರೆಗೆ ಬಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.

ವರದಿ : ಶಿವು ರಾಠೋಡ

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ