Muddebihal: TAPCMS administration again to Manohar Matei 'Kai'

ಮುದ್ದೇಬಿಹಾಳ : TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು ಟಿಎಪಿಸಿಎಂಎಸ್‌ನಲ್ಲಿ ತಮ್ಮ ಹಿಡಿತ ಸಡಿಲಗೊಂಡಿಲ್ಲ ಎಂಬ ಸಂದೇಶವನ್ನು ತಮ್ಮ ವಿರೋಧಿಗಳಿಗೆ ರವಾನಿಸಿದ್ದಾರೆ.

ಪಟ್ಟಣದ ಏಪಿಎಂಸಿಯಲ್ಲಿರುವ ಸಂಘದ ಕಚೇರಿಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಲಾಯಿತು.ಅಧ್ಯಕ್ಷ ಸ್ಥಾನಕ್ಕೆ ಮನೋಹರ ಎಸ್.ಮೇಟಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚಿದಾನಂದ ಎಂ.ಸೀತಿಮನಿ ಎರಡೂ ಸ್ಥಾನಗಳಿಗೆ ತಲಾ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಆರ್.ಎನ್.ಆಳೂರ ಅವಿರೋಧ ಆಯ್ಕೆ ಘೋಷಣೆ ಮಾಡಿದರು.ಅಧ್ಯಕ್ಷ ಸ್ಥಾನಕ್ಕೆ ಮುತ್ತಣ್ಣ ಮುತ್ತಣ್ಣವರ ಸೂಚಕರಾಗಿ, ನೀಲಕಂಠಗೌಡ ಗೌಡರ ಅನುಮೋದಕರಾಗಿ ಸಹಿ ಮಾಡಿದರು.ಉಪಾಧ್ಯಕ್ಷ ಸ್ಥಾನಕ್ಕೆ ಬಸವರಾಜ ಬಗಲಿ ಸೂಚಕರಾಗಿ,ಗುರಣ್ಣ ಹತ್ತೂರ ಅನುಮೋದಕರಾಗಿ ಸಹಿ ಮಾಡಿದರು.

ನಿರ್ದೇಶಕರಾದ ಬಸವರಾಜ ಇಸ್ಲಾಂಪೂರ,ಸುರೇಶ ಹಳೇಮನಿ, ಮಲ್ಲನಗೌಡ ಬಿರಾದಾರ,ಗುರುಲಿಂಗಪ್ಪ ಹಡ್ಲಗೇರಿ, ವನಮಾಲಾ ಮೇಟಿ, ಮಲ್ಲಮ್ಮ ಪಾಟೀಲ ಇದ್ದರು.

ಚುನಾವಣಾ ಕಾರ್ಯಕ್ಕೆ ಸಹಾಯಕ ಚುನಾವಣಾಧಿಕಾರಿ ಸಹಕಾರ ಇಲಾಖೆಯ ಅಧಿಕಾರಿ ಸಂತೋಷ ಇಲಕಲ್, ವ್ಯವಸ್ಥಾಪಕ ವಿ.ಎಸ್.ಉತ್ನಾಳ, ಸಹಾಯಕ ವ್ಯವಸ್ಥಾಪಕ ಗುರುರಾಜ ಕೋನರೆಡ್ಡಿ,ಸಿಬ್ಬಂದಿ ಎಂ.ಎA.ಪಾಟೀಲ,ಎಸ್.ಬಿ.ಚಿನಿವಾರ, ಸವಿತಾ ಚೌಧರಿ ಕಾರ್ಯನಿರ್ವಹಿಸಿದರು.

ರಹಸ್ಯ ಬಿಟ್ಟುಕೊಡದ ನಾಡಗೌಡ : ಟಿಎಪಿಸಿಎಂಎಸ್‌ನಲ್ಲಿ ಅಧಿಕಾರ ಹಂಚಿಕೆ ಸೂತ್ರವೇನಾದರೂ ನಡೆದಿದೆಯೇ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಾಸಕ ನಾಡಗೌಡರು, ಸದ್ಯಕ್ಕೆ ಅಧ್ಯಕ್ಷರಾಗಿ ಮೇಟಿ,ಉಪಾಧ್ಯಕ್ಷರಾಗಿ ಸೀತಿಮನಿ ಆಯ್ಕೆಯಾಗಿದ್ದಾರೆ. ಇವರು ಮುಂದುವರೆಯಲಿದ್ದಾರೆ.ಇವರು ಹೇಗೆ ಕೆಲಸ ಮಾಡಲಿದ್ದಾರೆ ಎಂಬುದನ್ನು ಗಮನಿಸುತ್ತೇವೆ.ಇದು ರಾಜಕಾರಣ, ಇಲ್ಲಿ ಏನು ನಡೆಯುತ್ತದೆ ಎಂದು ಹೇಳಲಾಗದು.ಒಪ್ಪಂದ ಸೂತ್ರದ ಕುರಿತು ಚರ್ಚೆ ನಡೆಸಿದ್ದೇವೆ.ಈಗಲೇ ಏನೂ ಹೇಳಲಾಗದು ಎಂದು ಅಧಿಕಾರ ಹಂಚಿಕೆ ಸೂತ್ರದ ರಹಸ್ಯವನ್ನು ನಾಡಗೌಡರು ಬಿಟ್ಟುಕೊಡಲಿಲ್ಲ.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ, ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಮಾತನಾಡಿ, ಟಿಎಪಿಸಿಎಂಎಸ್‌ನಲ್ಲಿ ಶಾಸಕರ ನಿರ್ದೇಶನದಂತೆ ಕಾಂಗ್ರೆಸ್ ಪಕ್ಷದ ಬೆಂಬಲಿತರ ಕೈಗೆ ಅಧಿಕಾರ ಸಿಕ್ಕಿದೆ.ಮುಂಬರುವ ದಿನಗಳಲ್ಲಿ ರೈತರಿಗೆ ಅನುಕೂಲ ಒದಗಿಸುವ ಕಾರ್ಯ ಮಾಡಲಿ ಎಂದು ತಿಳಿಸಿದರು.ವಿಜಯೋತ್ಸವದಲ್ಲಿ ಕಾಂಗ್ರೆಸ್ ಮುಖಂಡರು,ಕಾರ್ಯಕರ್ತರು,ಮೇಟಿ,ಸೀತಿಮನಿ ಅಭಿಮಾನಿಗಳು ಇದ್ದರು.

Latest News

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯಿತಿ ನೌಕರ ಎಂ.ಕೆ.ಗುಡಿಮನಿ ಅವರಿಗೆ 2025ನೇ ಸಾಲಿನ

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ  200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ 200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದಲ್ಲಿ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಪಡೆದುಕೊಳ್ಳುವಲ್ಲಿ ಹಿರಿಮೆ

ಘತ್ತರಗಿ ಭಾಗ್ಯವಂತಿಯ 23ನೇ ವರ್ಷದ ಪಾದಯಾತ್ರೆ ಆರಂಭ

ಘತ್ತರಗಿ ಭಾಗ್ಯವಂತಿಯ 23ನೇ ವರ್ಷದ ಪಾದಯಾತ್ರೆ ಆರಂಭ

ಮಾರನಾಳ : ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಮಾರನಾಳದಿಂದ ಶ್ರೀ ಘತ್ತರಗಿ ಭಾಗ್ಯವಂತಿಯವರೆಗೆ ಪಾದಯಾತ್ರೆಯನ್ನು

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಮುದ್ದೇಬಿಹಾಳ : ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಶುಕ್ರವಾರ ಬಾಯ್ಲರ್ ಪ್ರದೀಪನ

ಕಾರ್ಮಿಕರ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕಾರ್ಮಿಕರ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಸುರಕ್ಷಾ ಕಿಟ್ (ಗೌಂಡಿ, ಎಲೆಕ್ಟ್ರಿಷಿಯನ್, ಕಾರಪೇಂಟರ್ ವೆಲ್ಡಿಂಗ್, ಪ್ಲಂಬರ್, ಪೇಂಟರ್) ವಿತರಿಸಲು ಕಾರ್ಮಿಕ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಯಿಂದ ನೋಂದಣಿಯಾದ ಫಲಾನುಭವಿಗಳಿಗೆ ಸುರಕ್ಷಾ ಕಿಟ್ ವಿತರಿಸಲಾಗುವುದು. ಫಲಾನುಭವಿಗಳು ಚಾಲ್ತಿಯಲ್ಲಿರುವ ಕಾರ್ಮಿಕ ಗುರುತಿನ ಚೀಟಿ, ಆಧಾರ್ ಕಾರ್ಡ, ಬ್ಯಾಂಕ್ ಪಾಸ್ ಪುಸ್ತಕ, ಫಲಾನುಭವಿಯ ಎರಡು ಭಾವಚಿತ್ರ ಹಾಗೂ ದ್ವಿಪ್ರತಿಗಳಲ್ಲಿ ಅ.24ರೊಳಗೆ

ಋತುಚಕ್ರ ರಜೆ ನೀತಿ: ಕಾನೂನು ಆಯೋಗದ ಅಧ್ಯಕ್ಷರೊಂದಿಗೆ ಸಚಿವ ಸಂತೋಷ್‌ ಲಾಡ್‌ ಚರ್ಚೆ

ಋತುಚಕ್ರ ರಜೆ ನೀತಿ: ಕಾನೂನು ಆಯೋಗದ ಅಧ್ಯಕ್ಷರೊಂದಿಗೆ ಸಚಿವ ಸಂತೋಷ್‌ ಲಾಡ್‌ ಚರ್ಚೆ

ಬೆಂಗಳೂರು: ಋತುಚಕ್ರ ರಜೆ ನೀತಿ ಕುರಿತು, ಕಾರ್ಮಿಕ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು, ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷರಾದ ಅಶೋಕ್‌ ಬಿ ಹಿಂಚಿಗೇರಿ ಅವರೊಂದಿಗೆ, ಚರ್ಚೆ ನಡೆಸಿದರು. ಸಚಿವರ ಬೆಂಗಳೂರಿನ ಅಧಿಕೃತ ನಿವಾಸದಲ್ಲಿ ಈ ಭೇಟಿ ಮಾಡಲಾಯಿತು. ಋತುಚಕ್ರ ರಜೆ ನೀತಿಗೆ ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ನೀತಿಯನ್ವಯ ಖಾಸಗಿ ಮತ್ತು ಸರ್ಕಾರ ವಲಯಗಳಲ್ಲಿ ದುಡಿಯುವ ಉದ್ಯೋಗಸ್ಥ ಮಹಿಳೆಯರು ತಿಂಗಳಲ್ಲಿ ಒಂದು ದಿನ