ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಮುದ್ದೇಬಿಹಾಳ : ಪ್ರಾಚೀನ ಗುರುಕುಲ ಪದ್ದತಿಯಿಂದ ಇಂದಿನವರೆಗೂ ಶಿಕ್ಷಕರಿಗೆ ಗೌರವದ ಭಾವನೆ ಇದೆ.ವಿದ್ಯಾರ್ಥಿಗಳಿಗೆ ಇಂದಿಗೂ ಒಳ್ಳೆಯ ಶಿಕ್ಷಕರು ರೋಲ್ ಮಾಡೆಲ್ ಆಗಿರುತ್ತಾರೆ ಎಂದು ಎಂ.ಜಿ.ವ್ಹಿ.ಸಿ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪ್ರಕಾಶ ನರಗುಂದ ಹೇಳಿದರು.

ಪಟ್ಟಣದ ಪ್ರೇರಣಾ ಕಿಂಡರ್ ಗಾರ್ಟನ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ 11ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜರ್ಮನಿಯ ಶಿಕ್ಷಣ ತಜ್ಞ ಫ್ರೆಡ್ರಿಕ್ ಪ್ರೋಬೆಲ್ ಕಿಂಡರ್ ಗಾರ್ಟನ್ ಕಲ್ಪನೆಯನ್ನು ಬಿತ್ತಿದರು.ಈ ವ್ಯವಸ್ಥೆಯಲ್ಲಿ ಮಕ್ಕಳು ಆಟದ ಮೂಲಕ ಉತ್ತಮವಾಗಿ ಕಲಿಯುತ್ತಾರೆ. ಇದರಲ್ಲಿ ಮಕ್ಕಳು ಸೃಜನಶೀಲತೆ ಮತ್ತು ಕಲ್ಪನೆಗಳನ್ನು ಬೆಳೆಸಿಕೊಳ್ಳಲು ಸಹಾಯಕವಾಗುತ್ತದೆ ಎಂದರು.

ಮುಖ್ಯ ಅತಿಥಿಗಳಾಗಿದ್ದ ನಿವೃತ್ತ ಶಿಕ್ಷಣಾಧಿಕಾರಿ ಎಸ್.ಬಿ.ಚಲವಾದಿ ಮಾತನಾಡಿ,ಪ್ರತಿಯೊಂದು ಮಗುವಿನಲ್ಲಿ ವಿಭಿನ್ನ ಸಾಮರ್ಥ್ಯವಿದ್ದು ಅದನ್ನು ಶಿಕ್ಷಕರು ಗ್ರಹಿಸಿ ಮಗುವಿನ ಕಲಿಕೆಯ ವೇಗ,ಬೋಧನಾ ವಿಧಾನಗಳನ್ನು ಅಳವಡಿಸಿ ಬೋಧಿಸಿದಾಗ ಮಕ್ಕಳು ಬೇಗನೇ ಕಲಿತುಕೊಳ್ಳುತ್ತಾರೆ ಎಂದರು.

ಪತ್ರಕರ್ತ ಶಂಕರ ಹೆಬ್ಬಾಳ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು.ನಮ್ಮ ಆಕಾಂಕ್ಷೆಯನ್ನು ಮಕ್ಕಳ ಮೇಲೆ ಹೇರದೇ ಮಕ್ಕಳ ಆಸೆಗೆ ತಕ್ಕಂತೆ ಶಿಕ್ಷಣ ಕೊಡಿಸಬೇಕು.ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಘಟಿಕೋತ್ಸವದ ಮಾದರಿಯಲ್ಲಿ ವಾರ್ಷಿಕೋತ್ಸವ ಮಾಡುತ್ತಿರುವ ಮೊದಲ ಶಾಲೆ ಪ್ರೇರಣಾ ಕಿಂಡರ್ ಗಾರ್ಟನ್ ಶಾಲೆಯಾಗಿದೆ.ಶಾಲೆಯ ಮುಖ್ಯಸ್ಥರಾದ ಚಂದ್ರು ಕಲಾ ಸದಾ ಹೊಸತನದ ಅನ್ವೇಷಕಾರರು ಎಂದರು.

ಪುರಸಭೆ ನಾಮನಿರ್ದೇಶಿತ ಮಾಜಿ ಸದಸ್ಯ ರಾಜಶೇಖರ ಹೊಳಿ, ಸಂಸ್ಥೆಯ ಆಡಳಿತಾಧಿಕಾರಿ ಚಂದ್ರು ಕಲಾಲ ಮಾತನಾಡಿದರು.ಯುಕೆಜಿ ಮಕ್ಕಳ ಘಟಿಕೋತ್ಸವದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಹಾಗೂ ಆರ್.ಎಂ.ಎಸ್.ಎ., ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ಶಾಲೆಯ ಅಧ್ಯಕ್ಷ ಮೋತಿಲಾಲ್ ಕಲಾಲ್ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಮಾಜಿ ಸದಸ್ಯರಾದ ವೀರೇಶ ಹಡಲಗೇರಿ, ಶಿವು ಶಿವಪೂರ,ಸಂಸ್ಥೆಯ ನಿರ್ದೇಶಕರಾದ ತುಕಾರಾಂ ಕಲಾಲ, ಮಹಮ್ಮದ್ ರಫೀಕ್ ಢವಳಗಿ, ಸೂರ್ಯವಂಶ ಕ್ಷತ್ರಿಯ ಸಮಾಜದ ಅಧ್ಯಕ್ಷ ಸುರೇಶ ಕಲಾಲ್,ಸದಸ್ಯರಾದ ಗಂಗಾzsರ ಕಲಾಲ,ಮಧುಮತಿ ಕಲಾಲ,ಸಮಾಜ ಸೇವಕ ಕಾಶಿನಾಥ್ ಹುಗ್ಗಿ,ಮುಖ್ಯಗುರುಮಾತೆ ವಿಜಯಲಕ್ಷಿö್ಮÃ ಬಡಿಗೇರ,ಮಧು ಹಾದಿಮನಿ,ಜ್ಯೋತಿ ತಳವಾರ,ವಿಜಯಲಕ್ಷ್ಮಿ ನೇಬಗೇರಿ,ತಹರೀನ ಬಾಗಲಕೋಟ,ಸುಮಾ ಬಳಗಾನೂರ ಇದ್ದರು.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,