ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ ದಿನಗಳಲ್ಲಿಯೂ ಗುರುವಿಗೆ ಮಹತ್ವವಿದೆ. ಇದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಿದೆ ಎಂದು ಬಿ.ಎ.ಎಸ್ ಇಂಟರನ್ಯಾಶನ್ ಶಾಲೆಯ ಕಾರ್ಯದರ್ಶಿ ಎಸ್.ಎಸ್.ಬಿರಾದಾರ ಹೇಳಿದರು.

ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿ.ಎ.ಎಸ್. ಇಂಟನ್ಯಾಷನಲ್ ಸ್ಕೂಲ್‌ನಲ್ಲಿ ಬುಧವಾರ ಶಿಕ್ಷಕರ ದಿನಾಚರಣೆ ಹಾಗೂ ಇತ್ತಿಚಿಗೆ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರ ಮಾತನಾಡಿದರು.

ವಿದ್ಯಾರ್ಥಿಗಳಿಗೆ ಪಠ್ಯಯೊಂದೆ ಅಗತ್ಯವಲ್ಲ. ಪಠ್ಯತರ ಚಟುವಟಿಕೆಗಳೂ ಬಹಳ ಅಗತ್ಯವಿದೆ. ಇದನ್ನು ಕಳಿಸುವಲ್ಲಿ ಪ್ರತಿಯೊಬ್ಬ ಶಿಕ್ಷಕರ ಪ್ರಯತ್ನವಿರುತ್ತದೆ. ಆದರೆ ಕೆಲ ಬಾರಿ ಶಿಕ್ಷಕರ ಮೇಲೆ ಕೆಲ ಪಾಲಕರು ತಪ್ಪು ತಿಳುವಳಿಕೆ ಇಟ್ಟುಕೊಳ್ಳುತ್ತಾರೆ. ಮಕ್ಕಳಿಗೆ ಪಾಲಕರಿಗೆ ಇರುವ ಜವಾಬ್ದಾರಿಗಿಂತ ಒಬ್ಬ ಗುರುವಿಗೆ ಇರುತ್ತದೆ ಎಂದು ಅವರು ಹೇಳಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಲಾ ಸಂಸ್ಥಾಪಕ ಶಿವನಗೌಡ ಬಿರಾದಾರ ಮಾತನಾಡಿ, ಸಮಾಜದಲ್ಲಿ ಗುರುವಿಗೆ ಅತೀ ಹೆಚ್ಚು ಗೌರವವಿದೆ. ಇದನ್ನು ಪ್ರತಿಯೊಬ್ಬ ಪಾಲಕರೂ ತಿಳಿದುಕೊಳ್ಳಬೇಕು. ಅದರಂತೆ ಸಮಾಜ ಗುರುವಿಗೆ ನೀಡುವ ಮಹತ್ವವನ್ನು ಅರಿತುಕೊಂಡು ಮುನ್ನೆಯಬೇಕು. ಇದರಿಂದ ಸಮಾಜ ಕಲ್ಯಾಣವಾಗುತ್ತದೆ ಎಂದು ಹೇಳಿದರು. ಪ್ರಾಚಾರ್ಯರಾದ ಅಶೋಕ್ ತುಪ್ಪದ, ಆಡಳಿತಾಧಿಕಾರಿ ಪ್ರಭುಗೌಡ ಬಿರಾದಾರ, ಕೋಆರ್ಡಿನೇಟರ್ ಸತೀಶ್ ವಾಲಿಕಾರ, ಪಿ.ಕೆ.ಬಿರಾದಾರ, ನಿವೃತ್ತ ಶಿಕ್ಷಕರಾದ ಶಕುಂತಲಾ ಬಿರಾದಾರ, ಶಿಕ್ಷಕಿಯರಾದ ಶೈಲಾ ದೇಸಾಯಿ, ಶಾಂತಾ ಪಾಟೀಲ ಸೇರಿದಂತೆ ಎಲ್ಲ ಸಿಬ್ಬಂದಿ ವರ್ಗದವರಿದ್ದರು.

ರಾಜ್ಯಮಟ್ಟದ ಓಪನ್ ಸ್ಕೆಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಸಾಧನೆ:
ಬೆಂಗಳೂರಿನ ಕರ್ನಾಟಕ ರೋಲರ್ ಸ್ಕೆಟಿಂಗ್ ಅಸೋಸಿಯೇಷನ್ ಹಾಗೂ ಕಲಬುರಗಿ ಜಿಲ್ಲಾ ರೋಲರ್ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಕಲಬುರಗಿಯ ಸ್ಪಾರ್ಕಲ್ಸ್ ಇಂಟರ್‌ನ್ಯಾಷನಲ್ ಶಾಲಾ ಆವರಣದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಓಪನ್ ಸ್ಕೆಟಿಂಗ್ ಚಾಂಪಿಯನ್‌ಶಿಪ್-2026ರಲ್ಲಿ ಸಾಧನೆಗೈದ ಹಾಗೂ ವಿಜಯಪುರದಲ್ಲಿ ನಡೆದ ಗಾಂಧಾರಿ ವಿದ್ಯೆಯಲ್ಲಿ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

Latest News

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ:                            ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ಮುದ್ದೇಬಿಹಾಳ : ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯನ್ನು ಇಳಿಮುಖಗೊಳಿಸುವ ಕಾರ್ಯ ಶಿಕ್ಷಕರು ಮಾಡಬೇಕು.ಸರ್ಕಾರ ಜಾರಿಗೊಳಿಸಿರುವ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ;     ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಆದಷ್ಟು ಬೇಗ ಸರ್ಕಾರ ಈ ಕುರಿತು ತೀರ್ಮಾನ ಕೈಗೊಂಡು ರೈತರಿಗೆ ಪರಿಹಾರ ನೀಡಬೇಕು. ಇಲ್ಲವಾದರೆ ರೈತರನ್ನು ಪಕ್ಷಾತೀತವಾಗಿ ಒಗ್ಗೂಡಿಸಿ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಎಚ್ಚರಿಸಿದರು. ಮುದ್ದೇಬಿಹಾಳದಲ್ಲಿ ಬರ ಘೋಷಣೆಗೆ ಆಗ್ರಹಿಸಿ ತಹಶೀಲ್ದಾರ್ ಕಚೇರಿ ಮುಂದೆ ಸೋಮವಾರದಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಮಗ್ಗಲ ಮುಳ್ಳಾಗಿ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳದ ಶ್ರೀ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಸೆ.6ರಂದು ಮದ್ಯಾಹ್ನ 1 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ದಿವ್ಯ ಸಾನಿಧ್ಯವನ್ನು ಲಿಂಗಸೂರು ತಾಲ್ಲೂಕು ಅಂಕಲಿಮಠದ ವೀರಭದ್ರ ಸ್ವಾಮೀಜಿ ವಹಿಸುವರು.ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ನೂತನ ಕಚೇರಿ ಉದ್ಘಾಟಿಸುವರು.ಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ನೂತನ ಗೋಡವನ್ ಹಾಗೂ ವಾಣಿಜ್ಯ ಮಳಿಗೆ ಉದ್ಘಾಟಿಸುವರು.ಸಂಘದ ಅಧ್ಯಕ್ಷ ಮಲ್ಲನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಸಂಘದ ಉಪಾಧ್ಯಕ್ಷ