ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು.
ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು.
ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ ಜಾಧವ, ಗುಂಡು ಚವ್ಹಾಣ, ಖೂಬಣ್ಣ ಚವ್ಹಾಣ, ಶಿವಾನಂದ ರಾಠೋಡ, ಥಾವರಪ್ಪ ರಾಠೋಡ ಇದ್ದರು.