Terrible accident: Anna-Thamma from Ilakal died tragically

ಭೀಕರ ಅಪಘಾತ: ದಾರುಣವಾಗಿ ಮೃತಪಟ್ಟ ಇಳಕಲ್ ಮೂಲದ ಅಣ್ಣ-ತಮ್ಮ..!

ಭೀಕರ ಅಪಘಾತ: ದಾರುಣವಾಗಿ ಮೃತಪಟ್ಟ ಇಳಕಲ್ ಮೂಲದ ಅಣ್ಣ-ತಮ್ಮ..!

ಹುನಗುಂದ: ಬಾಗಲಕೋಟೆಯಿಂದ ಇಳಕಲ್ ಗೆ ಬೈಕ್ ಮೇಲೆ ಬರುತ್ತಿದ್ದ ಅಣ್ಣ-ತಮ್ಮ ಇಬ್ಬರೂ ಭೀಕರ ಅಪಘಾತಕ್ಕೆ ಬಲಿಯಾಗಿರುವ ದುರ್ಘಟನೆ ಅಮಿನಗಡ ಹೊರವಲಯದ ರಾಜ್ಯ ಹೆದ್ದಾರಿ 20 ರಲ್ಲಿ ಸಂಭವಿಸಿದೆ‌.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಮೃತರನ್ನು ಅಮರೇಶ್ ಬಸಯ್ಯ ಬೆನಕನಾಳಮಠ (21),‌ ಶರಣಬಸಯ್ಯ ಬಸಯ್ಯ ಬೆನಕನಾಳಮಠ (16) ಎಂದು ಗುರುತಿಸಲಾಗಿದೆ.

ಮೂಲತಃ ಇಳಕಲ್ಲ ನಗರ ನಿವಾಸಿಗಳಾದ ಮೃತರು ಅಣ್ಣ-ತಮ್ಮ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಅಮಿನಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ಅಮಿನಗಡ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಗಣೇಶ ಚತುರ್ಥಿಗಾಗಿ ಬಾಗಲಕೋಟೆಯಿಂದ ಇಳಕಲ್ ನಗರಕ್ಕೆ ಬೈಕ್ ಮೇಲೆ ಸಹೋದರರು ಬರುವಾಗ ಪೆಟ್ರೋಲ್ ಖಾಲಿಯಾಗಿ, ನಿಂತಿದ್ದ ಟ್ರ್ಯಾಕ್ಟರ್ ಹಿಂಬದಿಗೆ ಪಲ್ಸರ್ ಬೈಕ್ ಡಿಕ್ಕಿಯಾಗಿದೆ. ಈ ವೇಳೆ ಬೈಕ್ ಸವಾರರಿಬ್ಬರೂ ಕೆಳಗೆ ಬಿದ್ದಿದ್ದು, ಅವರ ಮೇಲೆ ಬಸ್ ಹರಿದು ಸಹೋದರರಿಬ್ಬರೂ ಸ್ಥಳದಲ್ಲಿಯೇ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ರಸ್ತೆ ಅಪಘಾತದಲ್ಲಿ ಒಂದು ವರ್ಷದಲ್ಲಿ 500ಕ್ಕೂ ಅಧಿಕ ಸಾವು: ಎಸ್ಪಿ ಋಷಿಕೇಶ ಸೋನಾವಣೆ (ವಿಡಿಯೋ ನೋಡಿ)

Latest News

ಐಪಿಎಲ್‌ ಪಂದ್ಯ ನಿಷೇಧಕ್ಕೆ ಸಚಿವ ಸಂತೋಷ್‌ ಲಾಡ್‌ ಆಗ್ರಹ

ಐಪಿಎಲ್‌ ಪಂದ್ಯ ನಿಷೇಧಕ್ಕೆ ಸಚಿವ ಸಂತೋಷ್‌ ಲಾಡ್‌ ಆಗ್ರಹ

ಬೆಂಗಳೂರು: ಭಾರತ ನಡೆಸಿದ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ನಂತರ ಪಾಕಿಸ್ತಾನವು ಭಾರತದ ನಾಗರಿಕರನ್ನು ಗುರಿಯಾಗಿರಿಸಿ

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಕೋಲ್ಕತ್ತ: ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಚೆನ್ನೈ ವಿರುದ್ಧ ಸೋಲುವ ಮೂಲಕ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ: ಕೆಎಸ್ಆರ್.ಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ಆರೇಶಂಕರ ಕ್ರಾಸ್

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಮುದ್ದೇಬಿಹಾಳ : ಪಟ್ಟಣದ ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಮುದ್ದೇಬಿಹಾಳ, ಕೋಳೂರು, ಅಡವಿ

ನಿಶ್ಚಿತಾರ್ಥದ ಮನೆಯಿಂದ ಮಸಣದೆಡಗೆ: ಅಪಘಾತದಲ್ಲಿ ಕಮರಿದ ಮದುವೆಯ ಕನಸು

ನಿಶ್ಚಿತಾರ್ಥದ ಮನೆಯಿಂದ ಮಸಣದೆಡಗೆ: ಅಪಘಾತದಲ್ಲಿ ಕಮರಿದ ಮದುವೆಯ ಕನಸು

ನಿಶ್ಚಿತಾರ್ಥದ ಖುಷಿಯಲ್ಲಿ ಪಯಣ ಬೆಳೆಸಿದ ಕುಟುಂಬಕ್ಕೆ ಇಂದು ಬೆಳಗ್ಗಿನ ಜಾವ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ನಿಶ್ಚಿತಾರ್ಥ ಮುಗಿಸಿಕೊಂಡು ಬಾಗಲಕೋಟ ಜಿಲ್ಲೆಯ ಕುಳಗೇರಿ ಕ್ರಾಸ್ ಗೆ ತೆರಳುತ್ತಿರುಬ ಕುಟುಂಬ ಅಪಘಾತಕ್ಕೆ ಬಲಿಯಾಗಿದೆ. ಶ್ವೇತಾ ಎಬ ಯುವತಿ ಎರಡು ದಿನಗಳ‌ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದಳು. ಹೊಸ ಬಾಳ‌ ಸಂಗಾತಿ ಹಾಗೂ ಹೊಸ ಜೀವನದ ಕನಸಿನೊಂದಿಗೆ ಕಾರನ್ನೇರಿ ಪಯಣ ಬೆಳೆಸಿದ್ದಳು. ವಿಧಿಯ ಮುಂದೆ, ಅಪಘಾತದಲ್ಲಿ ಕನಸು ನುಚ್ಚು ನೂರಾಗಿದೆ. ಎರಡು ದಿನಗಳ ಹಿಂದೆ ಸಾಗರ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಲಿಂಗಸಗೂರು: ತಾಲ್ಲೂಕಿನ ಚಿತ್ತಾಪೂರ ಗ್ರಾಮದಲ್ಲಿ ಬೋರವೇಲ್ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಗ್ರಾಮದ ಜನರಿಗೆ ಯೋಗ್ಯವಾದ ಕೃಷ್ಣ ನದಿಯ ನೀರನ್ನು ಒದಗಿಸಬೇಕು ಎಂದು ಸಹಾಯಕ ಆಯುಕ್ತರಿಗೆಅಂಬೇಡ್ಕರ ಸೇನೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು. ಕಳೆದ ವರ್ಷ ಬೇಸಿಗೆಯಲ್ಲಿ ಚಿತ್ತಾಪೂರ ಗ್ರಾಮದ ಸಂಪೂರ್ಣ ಜನರಿಗೆ ವಾಂತಿ ಬೇಧಿಯಿಂದ ಸಾರ್ವಜನಿಕರು ತತ್ತರಿಸಿ ಹೋಗಿದ್ದರು. ಇಡೀ ರಾಜ್ಯಾದ್ಯಂತ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿತ್ತು. ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳು ಬೇಟಿ ನೀಡಿ, ಹತೋಟಿಗೆ ತರುವ