Terrible accident: Six people including Canara Bank manager died on the spot

ಭೀಕರ ಅಪಘಾತ : ಕೆನರಾ ಬ್ಯಾಂಕ್ ಮ್ಯಾನೇಜರ ಸೇರಿ ಆರು ಜನ ಸ್ಥಳದಲ್ಲೇ ಸಾವು

ಭೀಕರ ಅಪಘಾತ : ಕೆನರಾ ಬ್ಯಾಂಕ್ ಮ್ಯಾನೇಜರ ಸೇರಿ ಆರು ಜನ ಸ್ಥಳದಲ್ಲೇ ಸಾವು

ವಿಜಯಪುರ : ನಗರ ಸಮೀಪದ ಮನಗೂಳಿ ಬಳಿ ಸೋಲಾಪುರ- ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ (ಎನ್ಎಚ್– 50) ಬುಧವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ಧಾರುಣವಾಗಿ ಸಾವಿಗೀಡಾಗಿದ್ದಾರೆ.

ಮಹಿಂದ್ರಾ ಸ್ಕಾರ್ಪಿಯೋದಲ್ಲಿ ಇದ್ದ ತೆಲಂಗಾಣದ ಗಡವಾಲದ ಕೆನರಾ ಬ್ಯಾಂಕ್ ಮ್ಯಾನೇಜರ್ ಟಿ.ಭಾಸ್ಕರನ್ ಹಾಗೂ ಅವರ ಪತ್ನಿ ಪವಿತ್ರಾ, ಮಗಳು ಜೋಸ್ನಾ, ಮಹೀಂದ್ರಾ ಸ್ಕಾರ್ಪಿಯೋ ಚಾಲಕ ವಿಜಯಪುರ ಜಿಲ್ಲೆಯ ಹೊರ್ತಿಯ ವಿಕಾಸ ಶಿವಪ್ಪ ಮಕನಿ ಹಾಗೂ ವಿಆರ್‌ಎಲ್ ಬಸ್ ಚಾಲಕ ಕಲಗುಟಗಿ ತಾಂಡಾದ ಬಸವರಾಜ ರಾಠೋಡ ಸ್ಥಳದಲ್ಲೇ ಸಾವನಪ್ಪಿದ್ದಾರೆ.

ಭಾಸ್ಕರನ್ ಅವರ ಪುತ್ರ ಪ್ರವೀಣತೇಜ ಹಾಗೂ ಲಾರಿ ಚಾಲಕ ಹುಲಜಂತಿಯ ಚನ್ನಬಸು ಸಿದ್ದಪ್ಪ ಮಾಳಿ ಗಾಯಗೊಂಡಿದ್ದು, ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಾರಾಷ್ಟ್ರದ ನೋಂದಣಿ (ಎಂ.ಎಚ್.13 ಬಿಎನ್ 8364) ಇರುವ ಮಹೀಂದ್ರಾ ಸ್ಕಾರ್ಪಿಯೋ ಮತ್ತು ವಿಆರ್‌ಎಲ್ ಬಸ್ (ಎಂ.ಎಚ್.12 ವಿಟಿ 7982) ಹಾಗೂ ಲಾರಿ (ಕೆಎ 22 ಎಎ 3117) ನಡುವೆ ಸರಣಿ ಅಪಘಾತ ಸಂಭವಿಸಿದೆ.

ಸೋಲಾಪುರದತ್ತ ತೆರಳುತ್ತಿದ್ದ ಮಹೀಂದ್ರಾ ಸ್ಕಾರ್ಪಿಯೋ ಆರಂಭದಲ್ಲಿ ಹೆದ್ದಾರಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಹಾರಿ, ಮುಂಬೈನಿಂದ ಬಳ್ಳಾರಿಗೆ ತೆರಳುತ್ತಿದ್ದ ವಿಆರ್‌ಎಲ್ ಬಸ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ಇದೇ ಮಾರ್ಗದಲ್ಲಿ ಬರುತ್ತಿದ್ದ ಲಾರಿಗೂ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕಾರ್ಪಿಯೋದಲ್ಲಿದ್ದ ಐವರು ಹಾಗೂ ಬಸ್ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಅಪಘಾತದಲ್ಲಿ ನುಜ್ಜುಗುಜ್ಜಾಗಿರುವ ವಾಹನಗಳಲ್ಲಿ ಸಿಲುಕಿಕೊಂಡಿರುವ ಶವಗಳನ್ನು ಹೊರತೆಗೆದು ವಿಜಯಪುರ ಜಿಲ್ಲಾಸ್ಪತ್ರೆಗೆ ಸಾಗಿಸಿದರು.

Latest News

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಬಣಜಿಗ ಸಮಾಜದ ನೂತನ ಕಾರ್ಯಕಾರಿಣಿ ಮಂಡಳಿಯನ್ನು ಸರ್ವಾನುಮತದಿಂದ ಭಾನುವಾರ ಆಯ್ಕೆ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ರಾಯಚೂರು,ಜೂ 15- ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಡೆದಿರುವ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ನಾರಾಯಣಪುರ: ಕೊಡೇಕಲ್ ಪಟ್ಟಣದ ಸರರ್ಕಾರಿ ಪ್ರೌಢಶಾಲೆಯಲ್ಲಿ ವಲಯ ವ್ಯಾಪ್ತಿಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರ ಸಭೆ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸುರುಪುರ ಬಿಇಒ ಯಲ್ಲಪ್ಪ ಕಾಡ್ಲೂರ ಮಾತನಾಡಿ ಮಕ್ಕಳಿಗೆ ಕಲಿಕೆಗೆ ಪೂರಕವಾದ ವಾತವರಣ ನಿರ್ಮಾಣದ ಜೊತೆಗೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವದು ಹಾಗೂ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಸೇರಿ ಅನುದಾನಿತ ಶಾಲೆಗಳಲ್ಲಿ ಸಿಗುವ ಬಿಸಿಯೂಟ, ಸಮವಸ್ತ್ರ ಪಠ್ಯಪುಸ್ತಕಗಳ ವಿತರಣೆ ಸೇರಿ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಮುದ್ದೇಬಿಹಾಳ : ಜನೌಷಧಿ ಕೇಂದ್ರಗಳು, ಉಚಿತ ಅಕ್ಕಿ ಕೊಡುವ ಯೋಜನೆ, ಆಯುಷ್ಮಾನ್ ಆರೋಗ್ಯ ಕಾರ್ಡ ಇಂತಹ ನೂರಾರು ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಮಾಡಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಬಿಜೆಪಿ ಸರ್ಕಾರ ಕೇಂದ್ರದಲ್ಲಿ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಐದು ಲಕ್ಷ ರೂ.ಗಳವರೆಗೆ ಆರೋಗ್ಯ ವಿಮೆ ಕಲ್ಪಿಸುವ ಯೋಜನೆಯನ್ನು ಮೋದಿ