ಅನಂತನಾಗ್: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಹೊರವಲಯದ ಅರಣ್ಯ ಪ್ರದೇಶದ ಶನಿವಾರ ಭಯೋತ್ಪಾದಕರೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ (Terrorist attack) ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಈ ಪ್ರದೇಶಕ್ಕೆ ಹೆಚ್ಚಿನ ಭದ್ರತಾ ಸಿಬ್ಬಂದಿ ರವಾನಿಸಲಾಗಿದ್ದು, ಭಯೋತ್ಪಾದಕರನ್ನು ಪತ್ತೆಹಚ್ಚಲು ಮತ್ತು ತಟಸ್ಥಗೊಳಿಸಲು ಇನ್ನೂ ಕಾರ್ಯಾಚರಣೆ ನಡೆಯುತ್ತಿದೆ.
Join Our Telegram: https://t.me/dcgkannada
ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಭಾರತೀಯ ಸೇನೆ ಮತ್ತು ಜಮ್ಮು, ಕಾಶ್ಮೀರ ಪೊಲೀಸರು ಇಂದು ಕೊಕರ್ನಾಗ್, ಅನಂತನಾಗ್ ಪ್ರದೇಶದಲ್ಲಿ ಜಂಟಿ ಶೋಧ ಕಾರ್ಯಾಚರಣೆ ಪ್ರಾರಂಭಿಸಿದರು.
ಈ ವೇಳೆ ಉಗ್ರರೊಂದಿಗೆ ಗುಂಡಿನ ಚಕಮಕಿ (Terrorist Attack) ನಡೆಯಿತು ಎಂದು ಭಾರತೀಯ ಸೇನೆಯ ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ಕೊಕರ್ನಾಗ್ ಪ್ರದೇಶದ ಅಹ್ಲಾನ್ ಗಗರ್ಮಂಡು ಅರಣ್ಯದಲ್ಲಿ ಉಗ್ರರಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಶೋಧ ಕಾರ್ಯಾಚರಣೆ ಆರಂಭಸಲಾಗಿತ್ತು. ಈ ವೇಳೆ ಉಗ್ರರೊಂದಿಗೆ ಗುಂಡಿನ ಕಾಳಗ ನಡೆದಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: DKS vs HDK: ಕುಮಾರಸ್ವಾಮಿ ಒಬ್ಬರೇ ಗಂಡಸ್ಸಾ; ಡಿಕೆ ಶಿವಕುಮಾರ್ ವಾಗ್ದಾಳಿ
ಅರಣ್ಯದಲ್ಲಿ ಅಡಗಿಕೊಂಡಿದ್ದ ಭಯೋತ್ಪಾದಕರು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ಸೇನಾ ಸಿಬ್ಬಂದಿಯನ್ನು ಗಮನಿಸಿ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ.
ದಾಳಿಯಲ್ಲಿ ಐವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.