The children carried the father's dead body on the bike

ತಂದೆಯ ಶವ ಬೈಕ್ ನಲ್ಲಿಯೇ ಸಾಗಿಸಿದ ಮಕ್ಕಳು..! ವೈ.ಎನ್ ಹೊಸಕೋಟೆ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಸಾರ್ವಜನಿಕರ ಆಕ್ರೋಶ

ತಂದೆಯ ಶವ ಬೈಕ್ ನಲ್ಲಿಯೇ ಸಾಗಿಸಿದ ಮಕ್ಕಳು..! ವೈ.ಎನ್ ಹೊಸಕೋಟೆ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಸಾರ್ವಜನಿಕರ ಆಕ್ರೋಶ

ಪಾವಗಡ: ಸಾವು ಒಂದು ಕಡೆಯಾದರೆ, ಕೊನೆಯ ಕ್ಷಣದಲ್ಲಿ ಗೌರವಯುತವಾಗಿ ಬೀಳ್ಕೊಡಲು ಆಗುತ್ತಿಲ್ಲ ಎಂಬ ಕೊರಗಿನಿಂದಲೇ ತಂದೆಯ ಶವವನ್ನು ಬೈಕ್ ನಲ್ಲಿ ಸಾಗಿಸದ ದೃಶ್ಯ ಮನ ಕಲಕುವಂತಿತ್ತು.

ಹೌದು, ಸೂಕ್ತ ಸಮಯದಲ್ಲಿ ಆಂಬುಲೆನ್ಸ್ ದೊರೆಯದೆ ಮಕ್ಕಳು ತಮ್ಮ ತಂದೆಯ ಮೃತದೇಹವನ್ನು ಬೈಕ್​ನಲ್ಲೇ ಸಾಗಿಸಿರುವ ಹೃದಯ ವಿದ್ರಾವಕ ಘಟನೆ ತಾಲೂಕಿನ ವೈ ಎನ್ ಹೊಸಕೋಟೆಯಲ್ಲಿ ನಡೆದಿದೆ.

ವಯೋಸಹಜ ಕಾಯಿಲೆಯಿಂದ ದಳವಾಯಿ ಹಳ್ಳಿ ಗ್ರಾಮದ ಗುಡುಗುಲ್ಲ ಹೊನ್ನೂರಪ್ಪ ಎನ್ನುವ 80 ವರ್ಷದ ವ್ಯಕ್ತಿ ಅಸ್ವಸ್ಥಗೊಂಡಿದ್ದರು. ಕೂಡಲೇ ಮಕ್ಕಳು, ಹೊನ್ನೊರಪ್ಪನವರನ್ನ 108 ಆಂಬ್ಯುಲೆನ್ಸ್ ನಲ್ಲಿ ವೈ.ಎನ್ ಹೊಸಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆ ತಂದಿದ್ದಾರೆ. ಆದರೆ ಅಷ್ಟರಾಗಲೇ ಹೊನ್ನೂರಪ್ಪನ ಜೀವ ಹೋಗಿದೆ.

ಬಳಿಕ ಮೃತ ಶರೀರವನ್ನು ಮನೆಗೆ ಸಾಗಿಸಲು 108 ಆಂಬ್ಯುಲೆನ್ಸ್ ಸಿಬ್ಬಂದಿ ನಿರಾಕರಿಸಿದ್ದಾರೆ. ಮೃತದೇಹವನ್ನು ಆಂಬ್ಯುಲೆನ್ಸ್​​ನಲ್ಲಿ ಸಾಗಿಸುವಂತಿಲ್ಲ ಎಂದಿದ್ದಾರೆ.

ಕೈಯಲ್ಲಿ ಹಣವಿಲ್ಲದೇ ಕೊನೆಗೆ ಹೊನ್ನೂರಪ್ಪ ಮಕ್ಕಳಾದ ಗೋಪಾಲಪ್ಪ ತಮ್ಮ ತಂದೆಯ ಮೃತದೇಹವನ್ನು ಭುಜದ ಮೇಲೆ ಹೊತ್ತು ಕಣ್ಣೀರು ಸುರಿಸುತ್ತ ಆಸ್ಪತ್ರೆಯಿಂದ ಹೊರ ಬಂದರು.ವಿಧಿಯಿಲ್ಲದೆ ತಂದೆ ಶವವನ್ನು ಬೈಕ್ ನಲ್ಲೇ ತೆಗೆದುಕೊಂಡು ಮನೆಗೆ ಹೋಗಿದ್ದಾರೆ.

ವೈದ್ಯರಿಗೆ ಹಿಡಿಶಾಪ:

ಇಂತಹ ಪರಿಸ್ಥಿತಿ ಮತ್ತೊಬ್ಬರಿಗೆ ಬರಬಾರದು. ಸರ್ಕಾರಿ ಆಸ್ಪತ್ರೆಗಳಲ್ಲಿ ಬಡವರಿಗೆ ಬದುಕಿದ್ದಾಗ ಉತ್ತಮ ಚಿಕಿತ್ಸೆ ಸಿಗುವುದಿಲ್ಲ. ಸತ್ತಮೇಲಾದರೂ ಕನಿಷ್ಠ ಸೌಲಭ್ಯ ಕೊಡಿ. ನೀವು ಮನುಷ್ಯರು ಎಂಬುವುದನ್ನು ಮರೆಯದಿರಿ ಎಂದು ಆಸ್ಪತ್ರೆಯಲ್ಲಿ ನೆರೆದಿದ್ದವರು ಆಂಬುಲೆನ್ಸ್ ವ್ಯವಸ್ಥೆ ಮಾಡದ ಸಿಬ್ಬಂದಿ, ವೈದ್ಯರಿಗೆ ಹಿಡಿಶಾಪ ಹಾಕಿದರು.

Latest News

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಇಳಕಲ್ಲ: ತಾಲೂಕಿನ ಗಡಿಸುಂಕಾಪುರ ಗ್ರಾಮದ ಹತ್ತಿರ ಇಳಕಲ್ ದತ್ತ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿಯ ಜಾಗೆಯ ಕುರಿತು ಕಲಬುರ್ಗಿ ಉಚ್ಛ ನ್ಯಾಯಾಲಯ ಸರ್ವೆ ನಂ.98ಕ್ಕೆ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ ಪಟ್ಟಣದ ಶ್ರೀ ಅಭಿನವ ತಿರುಪತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ 11 ನೇ ರಾಜ್ಯ ಪೆಂಕಾಕ್ ಸಿಲಾಸ್ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಾದ ಶಕುಂತಲಾ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ )25 ರಿಂದ 30 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ವಿಕ್ರಾಂತ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ ) 20 ರಿಂದ 25 ಕೆಜಿ ವಿಭಾಗದಲ್ಲಿ ಕಂಚಿನ ಪದಕ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಬೇಕು. ಪ್ರತಿಯೊಬ್ಬ ನಾಗರಿಕರಲ್ಲಿಯೂ ಇದು ನಮ್ಮ ನಗರ, ನಮ್ಮ ಓಣಿ, ನನ್ನ ಮನೆ ಎಂಬ ಹೆಮ್ಮೆ ಮೂಡಿದಾಗ ಮಾತ್ರ ಸ್ವಚ್ಛ ನಗರ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಮ್ಮ ಮೂಡುವಂತೆ ನಾವು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ