The cricketing world is heartbroken by the game of a 14-year-old boy

14 ವರ್ಷದ ಹುಡಗನ ಆಟಕ್ಕೆ ಮನಸೋತ ಕ್ರಿಕೆಟ್ ಜಗತ್ತು

14 ವರ್ಷದ ಹುಡಗನ ಆಟಕ್ಕೆ ಮನಸೋತ ಕ್ರಿಕೆಟ್ ಜಗತ್ತು

ಜೈಪುರ್: ರಾಜಸ್ಥಾನ ರಾಯಲ್ಸ್‌ನ 14 ವರ್ಷದ ಆಟಗಾರ ವೈಭವ್ ಸೂರ್ಯವಂಶಿ ಅವರ ಅದ್ಭುತ ಆಟಕ್ಕೆ ಕ್ರಿಕೆಟ್‌ ಜಗತ್ತು ಮನಸೋತಿದೆ. ಕೇವಲ 14 ವರ್ಷದ ವೈಭವ್ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಅದ್ಭುತ ಶತಕ ಗಳಿಸಿ ಎಲ್ಲರ ಗಮನ ಸೆಳೆದರು. ಸವಾಯಿ ಮಾನ್‌ಸಿಂಗ್‌ ಕ್ರೀಡಾಂಗಣದಲ್ಲಿ ನಡೆದ ಗುಜರಾತ್‌ ಟೈಟನ್ಸ್‌ ಹಾಗೂ ರಾಜಸ್ಥಾನ್‌ ರಾಯಲ್ಸ್‌ ತಂಡಗಳ ನಡುವಿನ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್‌ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್‌ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್‌ ಟೈಟನ್ಸ್‌ ಶುಭ್‌ಮನ್‌ ಗಿಲ್‌ ಹಾಗೂ ಜೋಸ್‌ ಬಟ್ಲರ್‌ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 209 ರನ್‌ ಕಲೆಹಾಕಿತು.

210 ರನ್ ಗಳ ಗುರಿ ಬೆನ್ನಟ್ಟಿದ ರಾಜಸ್ಥಾನ್‌ ರಾಯಲ್ಸ್‌ ಗೆ ವೈಭವ್ ಸೂರ್ಯವಂಶಿ ಅಬ್ಬರದ ಶತಕ, ಯಶಸ್ವಿ ಜೈಸ್ವಾಲ್‌ ಹಾಗೂ ರಿಯಾನ್‌ ಪರಾಗ್‌ ಅಬ್ಬರದ ಅಜೇಯ ಆಟದ ನೆರವಿನಿಂದ 15.5 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 212 ರನ್‌ ಬಾರಿಸಿ ಇನ್ನೂ 25 ಎಸೆತಗಳಿರುವಾಗಲೇ ಗೆಲುವು ದಾಖಲಿಸಿತು.

ವೈಭವ್‌ ಸೂರ್ಯವಂಶಿ ಕೇವಲ 35 ಎಸೆತಗಳಲ್ಲಿ 7 ಬೌಂಡರಿ ಹಾಗೂ 11 ಸಿಕ್ಸರ್‌ ಸಹಿತ ಶತಕ ಪೂರೈಸಿ 38 ಎಸೆತಗಳಲ್ಲಿ 101 ರನ್‌ ಗಳಿಸಿ ಔಟ್‌ ಆದರು. ಕಡಿಮೆ ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ವೈಭವ್ ಐಪಿಎಲ್‌ನಲ್ಲಿ ಎರಡನೇ ಅತಿವೇಗದ ಶತಕ ಬಾರಿಸಿದ ದಾಖಲೆ ಬರೆದರು. ಐಪಿಎಲ್‌ನಲ್ಲಿ ಅತಿವೇಗದ ಶತಕ ಬರೆದ ಭಾರತೀಯ ಆಟಗಾರ ಎಂಬ ದಾಖಲೆಗೆ ಪಾತ್ರರಾದರು. 2010 ರಲ್ಲಿ ಯೂಸುಫ್‌ ಪಠಾಣ್‌ ಮುಂಬೈ ಇಂಡಿಯನ್ಸ್‌ ವಿರುದ್ಧ ನಡೆದಿದ್ದ ಪಂದ್ಯದಲ್ಲಿ 37 ಎಸೆತಗಳಲ್ಲಿ ಶತಕ ಬಾರಿಸಿ ಐಪಿಎಲ್‌ನಲ್ಲಿ ವೇಗದ ಶತಕ ಬಾರಿಸಿದ ಭಾರತೀಯ ಆಟಗಾರ. 35 ಎಸೆತಗಳಲ್ಲಿ ಶತಕ ಬಾರಿಸಿರುವ ವೈಭವ್‌ ಈ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಯೂಸುಫ್‌ ಪಠಾಣ್‌ ʼಐಪಿಎಲ್‌ನಲ್ಲಿ ವೇಗದ ಶತಕ ಬಾರಿಸಿದ ಭಾರತೀಯ ಎಂಬ ನನ್ನ ದಾಖಲೆ ಮುರಿದದ್ದಕ್ಕೆ ಅಭಿನಂದನೆಗಳು. ಅದೂ ಸಹ ರಾಜಸ್ಥಾನ್‌ ರಾಯಲ್ಸ್‌ ಪರ ಆಡುವಾಗ ಬಂದದ್ದು ನಾನು ಬಾರಿಸಿದಂತೆಯೇ ಅನುಭವವಾಗುತ್ತಿದೆ. ಈ ಫ್ರಾಂಚೈಸಿಯಲ್ಲಿ ಯುವ ಪ್ರತಿಭೆಗಳಿಗೆ ಅದೇನೋ ಮ್ಯಾಜಿಕ್‌ ಇದೆ. ಒಳ್ಳೆಯದಾಗಲಿ ಚಾಂಪ್‌ʼ ಎಂದು ಬರೆದುಕೊಂಡಿದ್ದಾರೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ