ಆ.14ರಂದು ಸಭೆ.. ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ನಡೆದ ರೈತರ ಪ್ರತಿಭಟನೆ ಯಶಸ್ವಿ

ಆ.14ರಂದು ಸಭೆ.. ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ನಡೆದ ರೈತರ ಪ್ರತಿಭಟನೆ ಯಶಸ್ವಿ


ಮುಧೋಳ : ಘಟಪ್ರಭಾ ನದಿ‌ ಪ್ರವಾಹಕ್ಕೆ ಹಾನಿಗೊಳಗಾದ ಸಂತ್ರಸ್ಥರಿಗೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಸೋಮವಾರ ನಡೆದ ರೈತರ ಪ್ರತಿಭಟನೆ (farmers protest) ಯಶಸ್ವಿಯಾಯಿತು.


ಬೆಳಗ್ಗೆ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಯಾದವಾಡ ವೃತ್ತಕ್ಕೆ ಆಗಮಿಸಿ ಜಮಖಂಡಿ-ಧಾರವಾಡ ರಾಜ್ಯ ಹೆದ್ದಾರಿ ಸಂಪರ್ಕ‌ ಅ್ಥಗಿತಗೊಳಿಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

Join Our Telegram: https://t.me/dcgkannada


ಈ ವೇಳೆ ಮಾತಾನಾಡಿದ ಬಸವಂತ ಕಾಂಬಳೆ, ಜನಪ್ರತಿನಿಧಿಗಳಾದವರು ಜನರ ಸಮಸ್ಯೆ ಆಲಿಸುವ ಕೆಲಸ ಮಾಡಬೇಕು. ನೆರೆಯಲ್ಲಿ ಮನೆ, ಬೆಳೆ ಕಳೆದುಕೊಂಡ ಸಂತ್ರಸ್ಥರಿಗೆ ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ಪರಿಕ್ಷರಣೆ ಮಾಡಬೇಕು. ಇದರಿಂದ ಹೆಚ್ಚಿನ ಪರಿಹಾರ ಒದಗಿಸಿ ಸಂತ್ರಸ್ಥರಿಗೆ ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿದರು.


ಪ್ರವಾಹದಿಂದ ಜನರ ಬದುಕು ಬೀದಿಗೆ ಬಿದ್ದಿದೆ. ಜನಪ್ರತಿನಿಧಿಗಳಾದವರು ನಮ್ಮ ಸಮಸ್ಯೆ ಬಗ್ಗೆ ವಿಧಾನಸೌಧದಲ್ಲಿ ಬೆಳಕು ಚೆಲ್ಲುವ ಕೆಲಸ ಮಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: BJP ಎರಡು ಭಾಗ.. ಸ್ಫೋಟಕ ಭವಿಷ್ಯ ನುಡಿದ ಕೆ.ಎಸ್. ಈಶ್ವಪ್ಪ


ಸರ್ಕಾರ ಕೂಡಲೇ ನಮ್ಮ ಅಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ‌ ನಮ್ಮ ಹೋರಾಟ ಉಗ್ರರೂಪ‌ ಪಡೆಯಲಿದೆ ಎಂದು ಎಚ್ಚರಿಸಿದರು.


ರೈತಮುಖಂಡ ದುಂಡಪ್ಪ ಲಿಂಗರಡ್ಡಿ ಮಾತನಾಡಿ, ಮುಧೋಳ ತಾಲೂಕಿನಲ್ಲಿ‌ ಘಟಪ್ರಭಾ ಪ್ರವಾಹದಿಂದ ಪ್ರತಿವರ್ಷ ಬೆಳೆಹಾನಿಯುಂಟಾಗುತ್ತಿದೆ. ಸರ್ಕಾರ ನಮ್ಮ ತಾಲೂಕಿನ ಪ್ರವಾಹಪೀಡಿತ ಹಳ್ಳಿಗಳನ್ನು ಮುಳುಗಡೆ ಪ್ರದೇಶವೆಂದು ಘೋಷಿಸಬೇಕು ಎಂದು ಆಗ್ರಹಿಸಿದರು.


ಪ್ರವಾಹದಲ್ಲಿ ಹಾನಿಯಾದ ಕಬ್ಬು ಬೆಳೆಗೆ ಎಕರೆಗೆ 1ಲಕ್ಷ ಹಾಗೂ ಇತರೆ ಬೆಳೆಗೆ 50ಸಾವಿರ ರೂ. ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದರು.
ವೆಂಕಣ್ಣ ಮಳಲಿ‌ ಮಾತನಾಡಿ, ಪ್ರವಾಹ ಸಮಸ್ಯೆ ಬಹಳ ವರ್ಷಗಳಿಂದ ನಮ್ಮನ್ನು ಬಾಧಿಸುತ್ತಿದೆ. ಮುಖ್ಯಮಂತ್ರಿಗಳು ಮುಧೋಳಕ್ಕೆ‌ ಆಗಮಿಸಿ ಸಮಸ್ಯೆಯನ್ನು ಕಣ್ಣಾರೆ ನೋಡಿ ಶಾಶ್ವತ ಪರಿಹಾರಕ್ಕೆ ಮುಂದಾಗಬೇಕು ಎಂದರು.


ಹೋರಾಟದ ನಾಡಾಗಿರುವ ಮುಧೋಳದಲ್ಲಿ‌ ರೈತ ಮುಖಂಡ ರಮೇಶ ಗಡದನ್ನವರ ರೈತರಿಗೆ ಹೋರಾಟದ ಹೊಸ ರೂಪುರೇಷೆ ಹಾಕೊಕೊಟ್ಟಿದ್ದಾರೆ. ನಾವೆಲ್ಲರು ಅವರ ಮಾರ್ಗದರ್ಶನದಲ್ಲಿ ನಿರಂತರವಾಗಿ ಹೋರಾಟ ಮಾಡುತ್ತ ನಮಗೆ ಸಿಗಬೇಕಾದ ನ್ಯಾಯ ದೊರೆಕಿಸಿಕೊಳ್ಳೋಣ ಎಂದರು.


ಜಿಲ್ಲಾಧಿಕಾರಿ ಭೇಟಿ : ರೈತರ ಪ್ರತಿಭಟನೆ (farmers protest) ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ರೈತರ ಸಮಸ್ಯೆ ಆಲಿಸಿದರು. ಈ ವೇಳೆ ಮಾತನಾಡಿದ ಅವರು, ಶಾಶ್ವರ ಪರಿಹಾರಕ್ಕಾಗಿ ಮುಂದಿಟ್ಟರುವ ನಿಮ್ಮ‌ ಬೇಡಿಕೆ ಪರಿಗಣಿಸಿ ಮುಧೋಳ ತಾಲೂಕಿನ 34 ಹಳ್ಳಿಗಳ ಕುರಿತು ಸರ್ವೇ ನಡೆಸಿ ಯಾವ ಗ್ರಾಮಗಳು ಸ್ಥಳಾಂತರಕ್ಕೆ ಅರ್ಹವಾಗಿವೆ ಎಂಬುದರ ಬಗ್ಗೆ ಸರ್ವೇ ನಡೆಸಿ ವರದಿ ಕೊಡುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡುತಗತೇನೆ ಎಂದು ಭರವಸೆ ನೀಡಿದರು.


ಇನ್ನು ಎನ್ ಡಿಆರ್ ಎಫ್ ಹಾಗೂ ಎಸ್ ಡಿಆರ್ ಎಫ್ ಪರಿಹಾರ ಪರಿಷ್ಕರಣೆ ಕಾರ್ಯ ಸರ್ಕಾರದಮಟ್ಟದಲ್ಲಿ ಆಗಬೇಕು. ಆದರೂ ನಿಮ್ಮ ಬೇಡಿಕೆ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು.
ಜಿಲ್ಲಾಧಿಕಾರಿಗಳ‌‌ ಮಾತಿಗೆ ತೃಪ್ತರಾಗದ ಹೋರಾಟಗಾರರು ಜಿಲ್ಲಾ ಉಸ್ತುವಾರಿ ಸಚಿವರು ನಮ್ಮೊಂದಿಗೆ ಮಾತನಾಡಬೇಕು ಸಭೆ ನಡೆಸಿ‌ ನಮ್ಮ ಸಮಸ್ಯೆ ಆಲಿಸಬೇಕು ಎಂದು ಪಟ್ಟು‌ಹಿಡಿದರು. ಈ ವೇಳೆ ಅಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರೊಂದಿಗೆ ದೂರವಾಣಿ‌ ಮೂಲಕ‌ ಮಾತನಾಡಿ‌ ರೈತರ ಬೇಡಿಕೆ ಬಗ್ಗೆ ಮನವರಿಕೆ‌ ಮಾಡಿಕೊಟ್ಟರು.


ಸಚಿವರು ಆ.14ರಂದು ರೈತರೊಂದಿಗೆ ಸಭೆ ನಡೆಸುವುದಾಗಿ ಭರವಸೆ ನೀಡಿದರು. ಸಚಿವರ ಮಾತಿಗೆ ಮನ್ನಣೆ ನೀಡಿದ ಹೋರಾಟಗಾರರು ಆ.14ರವರೆಗೆ ಹೋರಾಟವನ್ನು‌ ಮುಂದೂಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ತಹಸೀಲ್ದಾರ್ ವಿನೋದ ಹತ್ತಳ್ಳಿ ಸೇರಿದಂತೆ ವಿವಿಧ ಹಂತದ ಅಧಿಕಾರಿಗಳು ಇದ್ದರು.

ಇದನ್ನೂ‌ ಓದಿ: Rape case : ಸಮಾಧಿ ಅಗೆದು ಶವದ ಮೇಲೆ ಅತ್ಯಾಚಾರ..! ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು (ವಿಡಿಯೋ ನೋಡಿ)


ಸುಭಾಷ ಶಿರಬೂರ, ಹನಮಂತ ಅಡವಿ, ದುಂಡಪ್ಪ ಲಿಗರಡ್ಡಿ, ದುಂಡಪ್ಪ ಯರಗಟ್ಟಿ, ನಾಗಪ್ಪ ಅಂಬಿ, ಸದಪ್ಪ ತೇಲಿ, ಯಲ್ಲಪ್ಪ‌ ಲೋಗಾವಿ, ಮುತ್ತಪ್ಪ‌ ಕೋಮಾರ, ಸಂಗಣ್ಣ ಕಾತರಕಿ, ಪರಶು ನಿಗಡೆ, ಬಂಡು ಘಾಟಗೆ ಸೇರಿದಂತೆ ಇತರರು ಹೋರಾಟದಲ್ಲಿ‌ ಪಾಲ್ಗೊಂಡಿದ್ದರು.


ಹೆಚ್ಚವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ ನೇತೃತ್ವದಲ್ಲಿ ಸೂಕ್ತ ಬಂದೋಬಸ್ತ್ ಕಲ್ಪಿಸಲಾಗಿತ್ತು.

Latest News

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ನೂತನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು, ಜೂನ್‌ 26: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ವಿವಿಧ ಕಾರ್ಖಾನೆಗಳು ಹಾಗೂ ಮನೆ ಕೆಲಸದ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಕಾರ್ಮಿಕರ ಸಮಸ್ಯೆ ಚರ್ಚೆ:ಕರ್ನಾಟಕ ಜನರಲ್ ಲೇಬರ್ ಯೂನಿಯನ್ ಬೆಂಗಳೂರು ಇವರ ಮನವಿ ಮೇರೆಗೆ ಮೆ. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಲಿಮಿಟೆಡ್.. ಕಾರ್ಮಿಕರ ಸಮಸ್ಯೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಮುದ್ದೇಬಿಹಾಳ : ಜೂ.27 ರಿಂದ ಮೊಹರಂ ಹಬ್ಬದ ಆಚರಣೆ ಆರಂಭಗೊಳ್ಳಲಿದ್ದು ಶಾಂತಿಯುತವಾಗಿ ಆಚರಿಸುವಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮೊಹರಂ ಶಾಂತಿಸಭೆಯಲ್ಲಿ ಅವರು ಮಾತನಾಡಿದರು. ಜೂ.27 ರಂದು ಮೊಹರಂ ಹಬ್ಬದ ಆಚರಣೆ ಆರಂಭಗೊಂಡು 29 ರಂದು ದಫನ್ ಮಾಡಲಾಗುತ್ತದೆ. ಈ ಸಮಯದಲ್ಲಿ ಅಲಾಯ್ ದೇವರುಗಳನ್ನು ಪ್ರತಿಷ್ಠಾಪಿಸುವ ಸಮಿತಿಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಮೊಹರಂ ಹಬ್ಬ ಭಾವೈಕ್ಯತೆಯ ಸಂಕೇತವಾಗಿದ್ದು ಉಭಯ