ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ; ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ; ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಮುದ್ದೇಬಿಹಾಳ : ಪಟ್ಟಣದಾದ್ಯಂತ ಶಿವರಾತ್ರಿ ಅಂಗವಾಗಿ ಭಕ್ತರು ಭಾನುವಾರ ಸಂಜೆ ಶಿವನ ದೇವಾಲಯಗಳಲ್ಲಿ ಸರದಿಯಲ್ಲಿ ನಿಂತುಕೊoಡು ಈಶ್ವರ ಲಿಂಗದ ದರ್ಶನ ಪಡೆದುಕೊಂಡು ಪುನೀತರಾದರು.

ದಿನವೀಡಿ ಉಪವಾಸ ವ್ರತ ಆಚರಿಸಿದ ಶಿವನ ಆರಾಧಕರು ಸಂಜೆ ವೇಳೆ ವಿವಿಧ ವಿಶೇಷ ಖಾದ್ಯಗಳನ್ನು ತಯಾರಿಸಿ ಶಿವಲಿಂಗಕ್ಕೆ ನೈವೇದ್ಯ ಅರ್ಪಿಸಿ ಉಪವಾಸ ವ್ರತ ಅಂತ್ಯಗೊಳಿಸಿದರು.

ಪಟ್ಟಣದ ಕಿಲ್ಲಾದ ಹಳೇ ಈಶ್ವರಲಿಂಗ ದೇವಸ್ಥಾನ, ವಿಜಯ ವಿಠ್ಠಲ ಮಂದಿರ,ಕಾಶೀ ವಿಶ್ವನಾಥ ದೇವಸ್ಥಾನ,ಮರುಳಸಿದ್ದಪ್ಪನ ಗುಡಿ, ಹಳೇ ಕೋರ್ಟ್ ಆವರಣದಲ್ಲಿರುವ ಈಶ್ವರ ದೇವಸ್ಥಾನ, ಹೆಸ್ಕಾಂ ಕಚೇರಿ ಆವರಣದಲ್ಲಿರುವ ಶಿವದೇವಾಲಯದಲ್ಲಿ ಭಕ್ತರು ಸರದಿ ಸಾಲಿನಲ್ಲಿ ನಿಂತುಕೊAಡು ದರ್ಶನ ಪಡೆದುಕೊಂಡರು.

ಆಯಾ ದೇವಸ್ಥಾನಗಳಲ್ಲಿ ಉಪವಾಸ ಅಂತ್ಯಗೊಳಿಸಿದ ಭಕ್ತರಿಗೆ ಶರಬತ್,ಪಾನಕ,ಅಲ್ಪೋಪಹಾರದ ವ್ಯವಸ್ಥೆ ಕಲ್ಪಿಸಲಾಗಿತ್ತು. ಹಳೇ ಕೋರ್ಟ್ ಆವರಣದಲ್ಲಿ ಪವಾಡಶೆಟ್ಟಿ ಕುಟುಂಬದವರು ಭಕ್ತರಿಗೆ ಪ್ರಸಾದದ ವ್ಯವಸ್ಥೆ ಕೈಗೊಂಡಿದ್ದರು.

ಓoಶಾoತಿ ಭವನದಲ್ಲಿ ಡಿಜಿಟಲ್ ಮಾದರಿ ಈಶ್ವರ ಶಿವಲಿಂಗವನ್ನು ಪ್ರತಿಷ್ಠಾನೆ ಮಾಡಲಾಗಿತ್ತು.ಪ್ರೊಜೆಕ್ಟರ್ ಮೂಲಕ ಬೆಳಕು ಹಾಯಿಸಿ ದೇಶದ ವಿವಿಧ ಶಿವಲಿಂಗಗಳಿಗೆ ನಡೆಯುವ ಅಭಿಷೇಕವನ್ನು ತೋರಿಸುವಂತೆ ವಿಶೇಷ ದೃಶ್ಯವಾಳಿ ರೂಪಿಸಲಾಗಿತ್ತು.

ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿವನ ದರ್ಶನ ಪಡೆದುಕೊಂಡರು.ಇದಲ್ಲದೇ ಇನ್ನುಳಿದ ದೇವಸ್ಥಾನಗಳಲ್ಲೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿವನ ಹೆಸರಿನಲ್ಲಿ ಆರ್ಚನೆ,ಪೂಜೆ ನಡೆಸಿದರು.ಬಹುತೇಕ ಎಲ್ಲ ದೇವಾಲಯಗಳಲ್ಲೂ ಶಿವನಾಮ ಜಪಿಸುತ್ತಿರುವುದು ಕಂಡು ಬಂದಿತು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ